ಕಲಬುರಗಿ: ಹೋಟೆಲ್‍ನಲ್ಲಿದ್ದ ಸೀಮೆಎಣ್ಣೆ ಸ್ಟೋವ್ ಸ್ಫೋಟಗೊಂಡು ನಾಲ್ಕು ಬಾಲಕರು ಸಾವನ್ನಪ್ಪಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಫತ್ತುನಾಯಕ ತಾಂಡಾದಲ್ಲಿ ನಡೆದಿದೆ.
ಪ್ರೀತಮ್(03), ರತಿಕ್(03) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಸಾಗಿಸುವಾಗ ಇನ್ನಿಬ್ಬರು ಬಾಲಕರಾದ ಖುತೀಶ್ ಮತ್ತು ಅಕ್ಷತಾ ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ ಹೋಟೆಲ್ ಮಾಲಿಕ ವೀರಶೆಟ್ಟಿ ಅವರಿಗೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆಗಾಗಿ ಬೀದರ್ ಜಿಲ್ಲೆಯ ಹುಮನಾಬಾದ ತಾಲೂಕಿನ ಮನ್ನಾಖೇಳಿ ಪಿಎಚ್‍ಸಿಯಲ್ಲಿ ದಾಖಲಿಸಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕಲಬುರಗಿಯ ಜಿಲ್ಲಾಧಿಕಾರಿ ಎನ್. ವೆಂಕಟೇಶಕುಮಾರ್ ತಾಂಡಾಕ್ಕೆ ಭೇಟಿ ನೀಡಿದ್ದಾರೆ. ಈ ಕುರಿತು ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.