ಕಲಬುರಗಿ: ಪಕ್ಷೇತರರಾಗಿ ಗೆದ್ದವರಿಗೆ ಚುನಾವಣೆ ಫಲಿತಾಂಶ ಬಂದ ಮೇಲೆ ಡಿಮ್ಯಾಂಡ್ ಹೆಚ್ಚಾಗುವುದು ಗೊತ್ತಿರುವ ವಿಚಾರ. ಆದರೆ ಕಲಬುರಗಿಯಲ್ಲಿ ಪಕ್ಷೇತರ ಅಭ್ಯರ್ಥಿಗಳಿಗೆ ಈಗಲೇ ಫುಲ್ ಡಿಮ್ಯಾಂಡ್ ಬಂದಿದೆ.
ಎಪ್ರಿಲ್ 23ಕ್ಕೆ ಎರಡನೇ ಹಂತದ ಚುನಾವಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆಯಲು ಇಂದೇ ಕೊನೆ ದಿನವಾಗಿದೆ. ಮತ್ತೊಂದೆಡೆ ಕಲಬುರಗಿಯಲ್ಲಿ ಉಮೇಶ್ ಜಾಧವ್, ವಿಠಲ್ ಜಾಧವ್, ಶಂಕರ್ ಜಾಧವ್, ವಿಜಯ್ ಜಾಧವ್ ಸೇರಿದಂತೆ ನಾಲ್ವರು ಜಾಧವ್ ಹೆಸರಿನ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.
Advertisement
Advertisement
Advertisement
ಹಾಗಾಗಿ ಪಕ್ಷೇತರ ಹೆಸರಿನ ಜಾಧವ್‍ರಿಗೆ ನಾಮಪತ್ರ ವಾಪಸ್ ಪಡೆಯಲು ಬಿಜೆಪಿ ಸರ್ಕಸ್ ನಡೆಸುತ್ತಿದೆ. ಇದಕ್ಕಾಗಿ ಚೌಕಾಸಿ ಪಾಲಿಟಿಕ್ಸ್ ಕೂಡ ಮಾಡುತ್ತಿದೆ. ಈ ಮೂಲಕ ಕಲಬುರಗಿಯಲ್ಲಿ ಪಕ್ಷೇತರ ಅಭ್ಯರ್ಥಿಗಳಿಗೆ ಚುನಾವಣೆಯ ಮುಂಚೆಯೇ ಡಿಮ್ಯಾಂಡ್ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.
Advertisement
ಕಲಬುರಗಿಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸಿದ್ದರು. ಬಿಜೆಪಿ ಅಭ್ಯರ್ಥಿಯಾಗಿ ಡಾ.ಉಮೇಶ್ ಜಾಧವ್ ಸ್ಪರ್ಧೆ ಮಾಡಿದ್ದಾರೆ. ಆದರೆ ಕಲಬುರಗಿ ಲೋಕಸಭಾ ಕಣದಲ್ಲಿ ಶಂಕರ್ ಜಾಧವ್, ವಿಠಲ್ ಜಾಧವ್ ಹಾಗೂ ವಿಜಯ್ ಜಾಧವ್ ಎಂಬವರು ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಡಾ.ಉಮೇಶ್ ಜಾಧವ್ ಮತಗಳು ಒಡೆಯಲು ವಿಪಕ್ಷಗಳು ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ ಎಂದು ಹೇಳಲಾಗುತ್ತಿದೆ.