ಸ್ಯಾಂಡಲ್‌ವುಡ್ ನಟ ಸರಿಗಮ ವಿಜಿ (Sarigama Viji) ಅಂತ್ಯಕ್ರಿಯೆ ಇಂದು (ಜ.16) ಬಲಿಜ ಸಂಪ್ರದಾಯದಂತೆ ನಡೆಯಿತು. ಚಾಮರಾಜಪೇಟೆ ಚಿತಾಗಾರದಲ್ಲಿ ನಟನ ಕಾರ್ಯ ನೆರವೇರಿದೆ. ಹಿರಿಯ ಪುತ್ರ ರೋಹಿತ್ (Rohith) ಅವರು ತಂದೆ ಸರಿಗಮ ವಿಜಿ ಚಿತೆಗೆ ಅಗ್ನಿ ಸ್ಪರ್ಶ ಮಾಡಿದ್ದರು. ಇದನ್ನೂ ಓದಿ:ಹೀರೋ ಆಗ್ತಿದ್ದಾರೆ ‘ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಬ್ರೋ ಗೌಡ- ಶಮಂತ್‌ಗೆ ಆನಂದ್ ರಾಜ್ ಆ್ಯಕ್ಷನ್ ಕಟ್
ಇನ್ನೂ ರವೀಂದ್ರ ಕಲಾಕ್ಷೇತ್ರದಲ್ಲಿ ನಟನ ಅಂತಿಮ ನಮನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವಿಜಯೇಂದ್ರ, ಚಲವಾದಿ ನಾರಾಯಣಸ್ವಾಮಿ, ನಟ ಧ್ರುವ ಸರ್ಜಾ, ಹಿರಿಯ ನಟ ಸುಂದರ್ ರಾಜ್, ರಮೇಶ್ ಭಟ್, ಶ್ರೀನಿವಾಸ್ ಮೂರ್ತಿ, ನಟಿ ರೂಪಿಕಾ ಸೇರಿದಂತೆ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದ್ದರು.
ಇನ್ನೂ ಕೆಲವು ದಿನಗಳಿಂದ ಸರಿಗಮ ವಿಜಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಯಶವಂತಪುರದ ಮಣಿಪಾಲ್ ಆಸ್ಪತ್ರೆಯಲ್ಲಿ ಕಳೆದ 1 ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ (ಜ.15) ಚಿಕಿತ್ಸೆ ಫಲಕಾರಿಯಾಗದೇ ಸರಿಗಮ ವಿಜಿ ನಿಧನರಾಗಿದ್ದಾರೆ.
ಅಂದಹಾಗೆ, 1980ರಲ್ಲಿ ಗೀತಪ್ರಿಯಾ ನಿರ್ದೇಶನದ ‘ಬೆಳವಳದ ಮಡಿಲಲ್ಲಿ’ ಚಿತ್ರಕ್ಕೆ ಸಣ್ಣ ಪಾತ್ರದಲ್ಲಿ ನಟಿಸುವುದರ ಮೂಲಕ ನಟನಾಗಿ ಗುರುತಿಸಿಕೊಂಡರು. ಆ ನಂತರ ಚಿತ್ರರಂಗದಲ್ಲಿ ತೊಡಗಿಕೊಂಡವರು. ಅದರ ಫಲವೇ 269 ಚಿತ್ರಗಳಲ್ಲಿ ನಟನೆ, 80 ಚಿತ್ರಗಳಿಗೆ ಸಹಾಯಕ ನಿರ್ದೇಶನ ಮಾಡಿದ್ದಾರೆ. ವಿಶೇಷ ಅಂದರೆ, ಇವರ ನಟನೆಯ ಚಿತ್ರಗಳ ಪಟ್ಟಿಯಲ್ಲಿ ಟೈಗರ್ ಪ್ರಭಾಕರ್ ಚಿತ್ರಗಳೇ ಹೆಚ್ಚಾಗಿದೆ. ಇನ್ನೂ ಅವರು ‘ಸರಿಗಮ ವಿಜಿ’ ಎಂದೇ ಫೇಮಸ್ ಆಗಿದ್ದಾರೆ.