ಮೈಸೂರು: ಇಂದು ವಿಧಿವಶರಾಗಿರುವ ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ಮಂಗಳವಾರ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಮಗಳು ಪ್ರತಿಮಾ ಪ್ರಸಾದ್ ಹೇಳಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಇಂದು ಮಧ್ಯಾಹ್ನ 1 ಗಂಟೆ ತನಕ ಮನೆಯಲ್ಲಿ ಅಂತಿಮ ನಮನ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ನಂತರ ಅಶೋಕಪುರಂನ ಎನ್ ಟಿ ಎಂ ಶಾಲೆ ಆವರಣದಲ್ಲಿ ಅಂತಿಮ ನಮನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದರು.
ಇಂದು ರಾತ್ರಿ ಇಡೀ ಅಂತಿಮ ನಮನಕ್ಕೆ ಅವಕಾಶ ನೀಡಲಾಗುತ್ತದೆ. ನಾಳೆ ಬೆಳಗ್ಗೆ 10 ಗಂಟೆಗೆ ಅಶೋಕಪುರಂ ನಲ್ಲಿ ಮೆರವಣಿಗೆಯ ಬಳಿಕ ಮಧ್ಯಾಹ್ನ 1 ಗಂಟೆ ಗೆ ಅಂತ್ಯಕ್ರಿಯೆ ನಡೆಸುವ ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಸಾಮಾಜಿಕ ನ್ಯಾಯದ ಹರಿಕಾರ ಪ್ರಸಾದ್ – ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಹೆಚ್‌ಡಿಡಿ ಸಂತಾಪ