ಬಳ್ಳಾರಿ: ನಗರದಲ್ಲಿ ನಡೆದ ಸಮಾವೇಶದಲ್ಲಿ ಮಾಜಿ ಶಾಸಕರೊಬ್ಬರನ್ನು ವೇದಿಕೆಗೆ ತರಲು ಸಿಎಂ ಹರಸಾಹಸ ಪಟ್ಟ ಘಟನೆ ನಡೆಯಿತು.
ಸ್ಥಳೀಯ ಮುಖಂಡರಿಗೆ ವೇದಿಕೆ ನೀಡದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಸೂರ್ಯನಾರಾಯಣ ರೆಡ್ಡಿ ವೇದಿಕೆಯಿಂದ ದೂರ ಉಳಿದಿದ್ದರು. ವಿಷಯ ತಿಳಿದ ಸಿಎಂ ಸಿದ್ದರಾಮಯ್ಯ ಬಾ ರೆಡ್ಡಿ ಅಂತಾ ಕೂಗಿ ಕರೆದ್ರೂ ಬರಲಿಲ್ಲ. ಕೊನೆಗೆ ಸಿ.ಎಂ ಇಬ್ರಾಹಿಂ ಅವರೇ ಕೆಳಗಿಳಿದು ಸೂರ್ಯನಾರಾಯಣ ರೆಡ್ಡಿಯನ್ನು ವೇದಿಕೆಗೆ ಕರೆತಂದಿದ್ದು ವಿಶೇಷವಾಗಿತ್ತು. ಇದನ್ನು ಓದಿ: ನಿಮ್ ಜೊತೆ ಬರಲ್ಲ, ವೋಟು ಹಾಕಲ್ಲ- ಪ್ರಚಾರದ ವೇಳೆ ಸಿದ್ದು ಮರಿಸ್ವಾಮಿ ಮಾತಿನ ಜಟಾಪಟಿ
Advertisement
ಇದೇ ವೇಳೆ ಮಾತನಾಡಿದ ಸಿದ್ದರಾಮಯ್ಯ, ಯಡಿಯೂರಪ್ಪ, ಹಾಗೂ ಕುಮಾರಸ್ವಾಮಿ ಎಷ್ಟೇ ತಿಪ್ಪರಲಾಗ ಹಾಕಿದ್ರೂ ಸಿಎಂ ಆಗಲ್ಲ, ನಾನೇ ಸಿಎಂ ಆಗೋದು. ಜೆಡಿಎಸ್-ಬಿಜೆಪಿ ಸರ್ಕಾರ ರಚನೆಗೆ ದಿನಾಂಕ ನಿಗದಿ ಮಾಡಿದ್ದಾರೆ. ಆದ್ರೆ ಅವರ ಕನಸು ಈಡೇರಲ್ಲ, ಬಿಜೆಪಿಯ ಅಲಿಬಾಬಾ ಮತ್ತು 40 ಮಂದಿ ಕಳ್ಳರು ಮತ್ತೆ ಒಂದಾಗಿದ್ದಾರೆ. ನಮ್ಮನ್ನು ಸೋಲಿಸಲು ಬಿಜೆಪಿ-ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ ಅಂತಾ ಗುಡುಗಿದ್ರು. ಇದನ್ನೂ ಓದಿ: ಸಿಎಂ ಜೊತೆ ಮಾತಿನ ಜಟಾಪಟಿ ನಡೆಸಿದ್ದ ಮರಿಸ್ವಾಮಿಗೆ ಎಚ್‍ಡಿಕೆಯಿಂದ ಸನ್ಮಾನ