ಬೆಂಗಳೂರು: ಬಿ.ಎಸ್ಸಿ ನರ್ಸಿಂಗ್ ಕೋರ್ಸ್ (B.Sc Nursing Course) ಪ್ರವೇಶ ಸಲುವಾಗಿ ನಡೆಸುವ ವಿಶೇಷ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸಲು ಇಚ್ಛಿಸುವವರು, ನ.14ರ ಸಂಜೆ 6 ಗಂಟೆಯವರೆಗೆ ಆಪ್ಷನ್ ದಾಖಲಿಸಲು ಸಮಯ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಹೊಸ ನರ್ಸಿಂಗ್ ಕಾಲೇಜು ಸ್ಥಾಪನೆ ಹಾಗೂ ಹೆಚ್ಚುವರಿ ಸೀಟುಗಳ ಲಭ್ಯತೆ ಕಾರಣಕ್ಕೆ ಮತ್ತಷ್ಟು ಸಮಯ ನೀಡಿದ್ದು, ಅಭ್ಯರ್ಥಿಗಳು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: 5 ಕೋಟಿಗೆ ಮಾಜಿ ಸಿಎಂ ದಿ.ಎಸ್ ನಿಜಲಿಂಗಪ್ಪ ಮನೆ ಖರೀದಿಸಿದ ಸರ್ಕಾರ
ಸೀಟು ಹಂಚಿಕೆ ಫಲಿತಾಂಶ ನ.15ರ ಸಂಜೆ 6ಕ್ಕೆ ಪ್ರಕಟಿಸಲಾಗುತ್ತದೆ. ನ.19ರೊಳಗೆ ಶುಲ್ಕ ಪಾವತಿಸಿ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಪ್ರಸನ್ನ (H Prasanna) ವಿವರಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಪ್ರಸಿದ್ಧ ಬಸವನಗುಡಿ, ಮಲ್ಲೇಶ್ವರಂ ಕಡಲೆಕಾಯಿ ಪರಿಷೆಗೆ ದಿನಾಂಕ ನಿಗದಿ