G-20 Summitː ಶಿಷ್ಟಾಚಾರ ಉಲ್ಲಂಘನೆ – ಜೋ ಬೈಡನ್ ಬೆಂಗಾವಲು ವಾಹನ ಚಾಲಕ ವಶಕ್ಕೆ

Public TV
1 Min Read
US PRESIDENT

ನವದೆಹಲಿ: ಜಿ20 ಶೃಂಗಸಭೆಯ (G20 Summit) ಹಿನ್ನೆಲೆ ಭಾರತಕ್ಕೆ ಆಗಮಿಸಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್ (Joe Biden) ಅವರ ಬೆಂಗಾವಲು ವಾಹನ ಪಡೆಯ ಚಾಲಕನೊಬ್ಬ ಶಿಷ್ಟಾಚಾರ (ಪ್ರೋಟೋಕಾಲ್) ಉಲ್ಲಂಘಿಸಿದ್ದರಿಂದಾಗಿ ದೆಹಲಿಯಲ್ಲಿ ವಶಕ್ಕೆ ಪಡೆಯಲಾಯಿತು.

G-20 ಶೃಂಗಸಭೆ ಹಿನ್ನೆಲೆಯಲ್ಲಿ UAE ಅಧ್ಯಕ್ಷ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರು ತಂಗಿದ್ದ ತಾಜ್ ಹೋಟೆಲ್‌ಗೆ ಅಮೆರಿಕ ಅಧ್ಯಕ್ಷರ ಬೆಂಗಾವಲು ಪಡೆಯ ಕಾರು ಪ್ರವೇಶಿಸಿದ ನಂತರ ಈ ಘಟನೆ ನಡೆದಿದೆ. ವಾಹನ ಚಾಲನೆ ವೇಳೆ ನಿರ್ಲಕ್ಷ್ಯ ತೋರಿದ್ದರಿಂದಾಗಿ ಚಾಲಕನನ್ನ ವಶಕ್ಕೆ ಪಡೆಯಲಾಗಿತ್ತು. ವಿಚಾರಣೆಯ ನಂತರ ಆತನನ್ನ ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: Aditya-L1: ಮತ್ತೊಂದು ಎತ್ತರದ ಕಕ್ಷೆ ಸೇರಿದ ಆದಿತ್ಯ ನೌಕೆ – ಸೂರ್ಯನಿಗೆ ಇನ್ನಷ್ಟು ಹತ್ತಿರ

RAJGHAT G20 LEADERS 1

ಬೆಂಗಾವಲು ವಾಹನದಲ್ಲಿ ಹಲವು ಸ್ಟಿಕರ್‌ಗಳಿರುವುದಾಗಿಯೂ ಭದ್ರತಾ ಸಿಬ್ಬಂದಿ ಸಂದೇಶ ರವಾನಿಸಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಿದಾಗ ಕಾರು ಚಾಲಕನು ಜೋ ಬೈಡನ್ ತಂಗಿದ್ದ ಐಟಿಸಿ ಮೌರ್ಯ ಹೋಟೆಲ್‌ಗೆ ಬೆಳಗ್ಗೆ 9:30ಕ್ಕೆ ಬರಬೇಕಿತ್ತು. ಆದರೆ ಚಾಲಕ ಲೋಧಿ ಎಸ್ಟೇಟ್ ಪ್ರದೇಶದಿಂದ ಬಂದ ಉದ್ಯಮಿಯನ್ನ ತಾಜ್‌ಗೆ ಬಿಡಬೇಕಾಗಿದ್ದರಿಂದ ತಾಜ್ ಹೋಟೆಲ್‌ಗೆ ಅದೇ ಕಾರಿನಲ್ಲಿ ಬಂದಿದ್ದ. ಆತನಿಗೆ ಪ್ರೋಟೋಕಾಲ್ (ಶಿಷ್ಟಾಚಾರ) (Protocol) ಬಗ್ಗೆ ತಿಳಿದಿರಲಿಲ್ಲ ಎಂದು ಹೇಳಿದ್ದಾರೆ. ಆತನನ್ನ ವಿಚಾರಣೆ ನಡೆಸಿದ ನಂತರ ಬಿಡುಗಡೆ ಮಾಡಲಾಯಿತು. ಇದನ್ನೂ ಓದಿ: G20 Summit: ವಿಶ್ವ ನಾಯಕರಿಂದ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಪುಷ್ಪ ನಮನ

ಇದಕ್ಕೂ ಮುನ್ನ ಅಮೆರಿಕ ಅಧ್ಯಕ್ಷ ಜೋ ಬೈಡನ್, ಬ್ರಿಟನ್ ಪ್ರಧಾನಿ ರಿಷಿ ಸುನಕ್, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್, ವಿಶ್ವ ಬ್ಯಾಂಕ್ ಅಧ್ಯಕ್ಷ ಅಜಯ್ ಬಂಗಾ ಮತ್ತು ಇತರ ನಾಯಕರು, ಪ್ರತಿನಿಧಿಗಳು ಮಹಾತ್ಮ ಗಾಂಧಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article