ಹುಬ್ಬಳ್ಳಿ: ಜಿ.ಪರಮೇಶ್ವರ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಿ ಅಂತ ಒತ್ತಾಯ ಮಾಡಿದ್ದೇ ನಾನು. ಅವರ ಗೃಹ ಖಾತೆ ಬದಲಾಯಿಸಿದ್ದು ಮಾತ್ರ ನಾನಲ್ಲ. ಅದು ಹೈಕಮಾಂಡ್ ನಿರ್ಧಾರ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಾವು ಸಮನ್ವಯ ಸಮಿತಿಯಲ್ಲಿ ತೀರ್ಮಾನ ಮಾಡಿದಂತೆ ನಡೆದುಕೊಂಡಿದ್ದೇವೆ. ಬಸವರಾಜ್ ಹೊರಟ್ಟಿ ಅವರು ಕಾಂಗ್ರೆಸ್ ಮೇಲೆ ಯಾಕೆ ಅಸಮಾಧಾನ ಹೊರಹಾಕಿದ್ದರೋ ನನಗೆ ಗೊತ್ತಿಲ್ಲ. ಅವರು ನನ್ನನ್ನು ಪ್ರಶ್ನೆ ಮಾಡುವುದನ್ನು ಬಿಟ್ಟು ಸಿಎಂ ಕುಮಾರಸ್ವಾಮಿ ಅವರಿಗೆ ನೇರವಾಗಿ ಕೇಳಲಿ. ನಾವು ಸಮನ್ವಯ ಸಮಿತಿಯಲ್ಲಿ ತೀರ್ಮಾನ ಮಾಡಿದಂತೆ ನಡೆದುಕೊಂಡಿದ್ದೇವೆ ಎಂದು ತಿರುಗೇಟು ನೀಡಿದರು.
Advertisement
Advertisement
ಇದೇ ವೇಳೆ ಜಿ.ಪರಮೇಶ್ವರ್ ದಲಿತ ಎನ್ನುವ ಕಾರಣಕ್ಕೆ ಕಾಂಗ್ರೆಸ್‍ನಲ್ಲಿ ತುಳಿಯಲಾಗುತ್ತಿದೆ ಎಂಬ ಎಚ್.ಡಿ. ರೇವಣ್ಣ ಹೇಳಿಕೆಗೆ ಸಿದ್ದರಾಮಯ್ಯ ಅಚ್ಚರಿ ವ್ಯಕ್ತಪಡಿಸಿ, ರೇವಣ್ಣಾ ಹಾಗೆಂದನಾ..? ಒಂದು ವೇಳೆ ರೇವಣ್ಣ ನನ್ನ ಪ್ರಶ್ನಿಸಿದ್ರೆ ಉತ್ತರ ನಾನೇ ಕೊಡ್ತೀನಿ ಎಂದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv