ಬೆಳಗಾವಿ: ಸಿಆರ್ಪಿಎಫ್ ಯೋಧ ಉಮೇಶ್ ಅವರ ಪಾರ್ಥಿವ ಶರೀರ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಹುತಾತ್ಮ ಯೋಧನಿಗೆ ವಿಮಾನ ನಿಲ್ದಾಣದಲ್ಲೇ ಗೌರವ ಸಲ್ಲಿಸಿ ಜಮಖಂಡಿಯತ್ತ ಪ್ರಯಾಣ ಬೆಳೆಸಿದರು.
ಗೋಕಾಕ್ ಸಿಆರ್ಪಿಎಫ್ ಯೋಧ ಮಣಿಪುರದಲ್ಲಿ ಹುತಾತ್ಮರಾದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಮಾತನಾಡಿ, ವಿಮಾನ ನಿಲ್ದಾಣದಲ್ಲಿ ಯೋಧನಿಗೆ ಗೌರವ ಸಲ್ಲಿಸಿದ್ದೇವೆ. ಹುತಾತ್ಮ ಯೋಧ ಉಮೇಶ್ 20 ಜನ ಯೋಧರ ಪ್ರಾಣ ಉಳಿಸಿದ್ದಾರೆ. ಯೋಧನ ಧೈರ್ಯ ಹಾಗೂ ಸಾಹಸಕ್ಕೆ ನಾನು ನನ್ನ ನಮನವನ್ನು ಸಲ್ಲಿಸುತ್ತೇನೆ. ಸರ್ಕಾರ ಯೋಧನ ಕುಟುಂಬಕ್ಕೆ ಬೇಕಾದ ಎಲ್ಲಾ ಸೌಕರ್ಯಗಳನ್ನು ಒದಗಿಸಲು ಸಿಎಂ ಜೊತೆ ಚರ್ಚಿಸುತ್ತೇನೆ ಎಂದು ಹೇಳಿದರು.
Advertisement
Advertisement
ಅಲ್ಲದೇ ಉಪಚುನಾವಣೆ ಬಗ್ಗೆ ಮಾತನಾಡಿದ ಅವರು ಜಮಖಂಡಿ ಚುನಾವಣೆ ಉಸ್ತುವಾರಿ ಆಗಿ ನನ್ನನ್ನು ನೇಮಕ ಮಾಡಿದ್ದಾರೆ. 5 ಕ್ಷೇತ್ರದಲ್ಲಿ ನಮ್ಮ ಗೆಲ್ಲುವು ನಿಶ್ಚಿತವಾಗಿದೆ. ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಬಾರದು. ಮುಂದಿನ ಲೋಕಸಭಾ ಚುನಾವಣೆಗೆ ಈ ಎಲೆಕ್ಷನ್ ದಿಕ್ಸೂಚಿ ಅಲ್ಲ. ರಮೇಶ್ ಜಾರಕಿಹೊಳಿ ಹಾಗೂ ಡಿಕೆ ಶಿವಕುಮಾರ್ ಇಬ್ಬರು ಒಳ್ಳೆಯ ಫ್ರೆಂಡ್ಸ್. ಅವರಿಬ್ಬರು ಮಾತನಾಡುವುದು ಸಹಜ. ಇವರಿಬ್ಬರಿಗೂ ಬಹಿರಂಗವಾಗಿ ಮಾತನಾಡದಿರಲು ಸೂಚಿಸುತ್ತೇವೆ. ಎಂಇಎಸ್ ಕರಾಳ ದಿನ ಆಚರಣೆ ಹೊಸದಲ್ಲ. ಕಾನೂನಿನ ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv