ಶಿವಮೊಗ್ಗ: ವಿಜಯಪುರದಲ್ಲಿ (Vijayapura) ರೈತರ ಆಸ್ತಿಗೆ ವಕ್ಫ್ ಆಡಳಿತ ಮಂಡಳಿ (Waqf Board) ನೋಟಿಸ್ ನೀಡಿದ್ದರ ಬಗ್ಗೆ ಕಂದಾಯ ಇಲಾಖೆ ಪರಿಶೀಲನೆ ನಡೆಸಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G.Parameshwar) ಹೇಳಿದ್ದಾರೆ.
ನಗರದಲ್ಲಿ (Shivamogga) ನೂತನ ಪೊಲೀಸ್ ಸಮುದಾಯ ಭವನ ಉದ್ಘಾಟಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ವಿಜಯಪುರದ ರೈತರಿಗೆ ವಕ್ಫ್ ಆಡಳಿತ ಮಂಡಳಿ ನೋಟಿಸ್ ನೀಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಕಂದಾಯ ಇಲಾಖೆಯ ಅಧಿಕಾರಿಗಳು ಹಳೆಯ ದಾಖಲೆಗಳನ್ನು ಪರಿಶೀಲನೆ ಮಾಡಿ ಕ್ರಮಕೈಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಿಜಯಪುರ ಜಿಲ್ಲೆ ರೈತರಿಗೆ ವಕ್ಫ್ ಬೋರ್ಡ್‌ನಿಂದ ನೋಟಿಸ್
Advertisement
ಮೂರು ಕ್ಷೇತ್ರಗಳ ಉಪಚುನಾವಣೆ ವಿಚಾರವಾಗಿ, ಎಲ್ಲಾ ಕ್ಷೇತ್ರಗಳಲ್ಲೂ ನಾವು ಗೆಲ್ಲುತ್ತೇವೆ. ಬಿಜೆಪಿ ಹಾಗೂ ಜೆಡಿಎಸ್ ಒಂದಾಗಿದ್ದರೂ ಸಹ ರಾಜ್ಯದಲ್ಲಿ ಕಾಂಗ್ರೆಸ್ ಜನಪರ ಕೆಲಸ ಮಾಡ್ತಿದೆ. ಬಡ ಜನರಿಗೆ ಆರ್ಥಿಕವಾಗಿ ಮೇಲೆತ್ತುವ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.
Advertisement
Advertisement
ಶಿಗ್ಗಾಂವಿಯಲ್ಲಿ ಬಂಡಾಯದ ವಿಚಾರವಾಗಿ, ಖಾದ್ರಿ ಅವರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು. ಈ ಹಿಂದೆ ಚುನಾವಣೆಗೆ ಸ್ಪರ್ಧೆ ಮಾಡಿದ್ದರು. ಅವರ ಮನವೊಲಿಸುತ್ತೇವೆ, ಅವರು ನಾಮಪತ್ರ ವಾಪಸ್ ತೆಗೆದುಕೊಳ್ಳುತ್ತಾರೆ ಎಂದು ಸ್ಪಷ್ಟಪಡಿದ್ದಾರೆ.
Advertisement
ಹೆಚ್‍ಎಮ್‍ಟಿ ಭೂಮಿ ಅರಣ್ಯ ಇಲಾಖೆ ವಶ ಪಡಿಸಿಕೊಂಡ ವಿಚಾರವಾಗಿ, ಹಿಂದೆ ಆ ಜಾಗವೆಲ್ಲಾ ಅರಣ್ಯ ಇಲಾಖೆಗೆ ಸೇರಿತ್ತು. ಇದೀಗ ಆ ಜಾಗ ಖಾಲಿ ಇದ್ದ ಕಾರಣ ಮತ್ತೆ ಇಲಾಖೆ ವಶಕ್ಕೆ ಪಡೆದಿದೆ. ಇನ್ನೂ ಶರಾವತಿ ನೀರು ಬೆಂಗಳೂರಿಗೆ ಕೊಂಡೊಯ್ಯುವ ವಿಚಾರವಾಗಿ, ಈ ಹಿಂದೆ ನಾನು ಡಿಸಿಎಂ ಆಗಿದ್ದಾಗ ಈ ಬಗ್ಗೆ ಚರ್ಚೆ ಮಾಡಿದ್ದೆ. ಈಗ ಅಂತಹ ಯಾವುದೇ ಚರ್ಚೆ ನಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಧರ್ಮ ಕಾರ್ಯಗಳ ಮೂಲಕ ಶೃಂಗೇರಿ ಮಠ ಮುಂಚೂಣಿಯಲ್ಲಿದೆ: ಡಿಕೆಶಿ