Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲೋಕಸಭೆಯಲ್ಲಿ ನಮ್ಮ ಲೆಕ್ಕಾಚಾರ ಏರುಪೇರಾಗಿದೆ; ಬಿಜೆಪಿ-ಜೆಡಿಎಸ್ ಮೈತ್ರಿ ಸಕ್ಸಸ್ ಆಗಿದೆ: ಪರಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಲೋಕಸಭೆಯಲ್ಲಿ ನಮ್ಮ ಲೆಕ್ಕಾಚಾರ ಏರುಪೇರಾಗಿದೆ; ಬಿಜೆಪಿ-ಜೆಡಿಎಸ್ ಮೈತ್ರಿ ಸಕ್ಸಸ್ ಆಗಿದೆ: ಪರಂ

Bengaluru City

ಲೋಕಸಭೆಯಲ್ಲಿ ನಮ್ಮ ಲೆಕ್ಕಾಚಾರ ಏರುಪೇರಾಗಿದೆ; ಬಿಜೆಪಿ-ಜೆಡಿಎಸ್ ಮೈತ್ರಿ ಸಕ್ಸಸ್ ಆಗಿದೆ: ಪರಂ

Public TV
Last updated: June 5, 2024 6:53 pm
Public TV
Share
2 Min Read
G.Parameshwar
SHARE

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ (Loksabha Elctions 2024) ನಮ್ಮ ನಿರೀಕ್ಷೆಯಷ್ಟು ಸ್ಥಾನ ಗಳಿಸದೇ ಲೆಕ್ಕ ತಪ್ಪಿದ್ದೇವೆ ಎಂದು ಡಾ.ಜಿ ಪರಮೇಶ್ವರ್ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಿನಲ್ಲಿ‌ ಮಾತಾಡಿದ ಡಾ.ಜಿ.ಪರಮೇಶ್ವರ್ (G Parameshwar), ಬಿಜೆಪಿಗೂ ಬಹುಮತ ಬಂದಿಲ್ಲ. ಮೋದಿಯವರ ಪರವೂ ಜನಮನ್ನಣೆ ಸಿಕ್ಕಿಲ್ಲ. ನಮ್ಮ ನಿರೀಕ್ಷೆಯಂತೆ ಫಲಿತಾಂಶ ಬರಲಿಲ್ಲ.‌ ಕನಿಷ್ಟ 20 ಸ್ಥಾನ ಬರುವ‌ ನಿರೀಕ್ಷೆ ಇತ್ತು. ನಮ್ಮ ಲೆಕ್ಕಾಚಾರ ತಪ್ಪಿದೆ, ಆದರೂ ಒಂದರಿಂದ ಒಂಭತ್ತು ಸ್ಥಾನ ಗೆದ್ದಿದ್ದೇವೆ.‌ ಫಲಿತಾಂಶ ಸಮಾಧಾನ ತಂದಿದೆ, ಆದ್ರೆ ಸಂತೋಷ ತಂದಿಲ್ಲ ಅಂದ್ರು.

INDIA BLOC LEADERS

ಇಡೀ ಎಕ್ಸಿಟ್ ಪೋಲ್ ಒನ್ ಸೈಡ್ ಆಗಿ ಬಿಂಬಿಸಲಾಗಿತ್ತು. ಎಕ್ಸಿಟ್ ಪೋಲ್ ಫಲಿತಾಂಶ ಬಂದ ನಂತರ ಸುಳ್ಳಾಯ್ತು. ಇಂಡಿಯಾ ಒಕ್ಕೂಟ ಅತೀ ಹೆಚ್ಚು ಸೀಟುಗಳನ್ನು ಗೆದ್ದಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿಪಕ್ಷಗಳು ಇನ್ನೂ ಗಟ್ಟಿಯಾಗಿದೆ ಅಂತ ಫಲಿತಾಂಶ ತೋರಿಸಿದೆ. ಇನ್ನು ನಮ್ಮ ವೋಟ್ ಶೇರ್ ಹೆಚ್ಚಾಗಿದೆ. ರಾಜ್ಯದ ಜನ ನಮಗೂ ಎಚ್ಚರಿಕೆ ಗಂಟೆ ಬಾರಿಸಿದ್ದಾರೆ. ಗ್ಯಾರಂಟಿಗಳಿಂದ ಜನ ಸಮಾಧಾನ ಆಗಿಲ್ಲ ಅನ್ಸತ್ತೆ. ಮುಂದಿನ ದಿನಗಳಲ್ಲಿ ಆತ್ಮಾವಲೋಕನ ಮಾಡಿಕೊಳ್ತೇವೆ. ಹಳೇ ಮೈಸೂರು ಭಾಗದಲ್ಲಿ ನಮ್ಮ ನಿರೀಕ್ಷೆ ಏರುಪೇರಾಗಿದೆ. ಸ್ವಲ್ಪ ಪ್ರಯತ್ನ ಮಾಡಿದ್ರೆ ಇನ್ನೂ ನಾಲ್ಕು ಸ್ಥಾನ ಬರಬಹುದಿತ್ತು. ನಮ್ಮ ಲೆಕ್ಕಾಚಾರವೂ ತುಮಕೂರಲ್ಲಿ ಕೈಹಿಡಿಯಲಿಲ್ಲ. ಮುದ್ದಹನುಮೇಗೌಡ ಗೆಲ್ತಾರೆ ಅನ್ಕೊಂಡಿದ್ದೆವು. ಆದ್ರೆ ಗೆಲ್ಲಲಿಲ್ಲ, ಲೆಕ್ಕಾಚಾರ ಏರುಪೇರಾಗಿದೆ ಎಂದು ಇದೇ ವೇಳೆ ಪರಮೇಶ್ವರ್ ತಿಳಿಸಿದರು.‌

2019 ರ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸಕ್ಸಸ್ ಆಗಿರಲಿಲ್ಲ. ಈಗ ಬಿಜೆಪಿ ಜೆಡಿಎಸ್ ಮೈತ್ರಿ ಅವರಿಗೆ ಕೈಹಿಡಿದಿದೆ. ಇವತ್ತಿಗೂ ಕೇಂದ್ರದಲ್ಲಿ ಇಂಡಿಯಾ ಕೂಟ ಸರ್ಕಾರ ಮಾಡುವ ಅವಕಾಶ ಇದೆ. ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ಮನಸು ಮಾಡಿ ಇಂಡಿಯಾ ಕೂಟಕ್ಕೆ ಬೆಂಬಲಿಸಿದರೆ ಸಾಧ್ಯವಿದೆ ಎಂದು ಹೇಳಿದರು.

ಸಿಬಿಐ ಪತ್ರ ಬರೆದರೆ ವಾಲ್ಮಿಕಿ ಅಕ್ರಮ ಪ್ರಕರಣ ವಹಿಸ್ತೇವೆ: ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಬಿಐ ಎಂಟ್ರಿ ಆಗಿರುವ ಬಗ್ಗೆ ಮಾತಾಡಿದ ಪರಮೇಶ್ವರ್, ಸಿಬಿಐನವರಿಗೆ ಯೂನಿಯನ್ ಬ್ಯಾಂಕಿನವರು ಪತ್ರ ಬರೆದಿದ್ರು. ಮೂರು ಕೋಟಿಗೂ ಹೆಚ್ಚು ಅಕ್ರಮ ಆಗಿದ್ರೆ ಸಿಬಿಐ ಸೂಮೋಟೋ ದೂರು ದಾಖಲು ಮಾಡಬಹುದು. ಬ್ಯಾಂಕ್ ನವರು ಪತ್ರ ಬರೆದಿದ್ದರು. ಈಗ ಸಿಬಿಐನವರು ತನಿಖೆ ಮಾಡ್ತಾರೆ.

ನಾವು ಸಿಬಿಐನವ್ರಿಗೆ ತನಿಖೆ ವಹಿಸಬೇಕಾಗುತ್ತದೆ. ಅದಕ್ಕೂ ಮೊದಲು ಸಿಬಿಐ ನವ್ರು ನಮಗೆ ಪತ್ರ ಬರೆಯಬೇಕು. ಸರ್ಕಾರ ಕೇಸ್ ಸಿಬಿಐಗೆ ವಹಿಸಲು ಕ್ಯಾಬಿನೆಟ್ ನಲ್ಲಿ ತೀರ್ಮಾನ ತಗೋಬೇಕಾಗುತ್ತೆ. ಈಗ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕ್ಯಾಬಿನೆಟ್ ನಡೆಸಲು ಆಗಲ್ಲ. ಮೊದಲು ಸಿಬಿಐನವರು ಪತ್ರ ಬರೆಯಲಿ, ಆಮೇಲೆ ನೋಡ್ತೇವೆ. ಪ್ರಕರಣ ಸಿಬಿಐಗೆ ವಹಿಸುವ ಬಗ್ಗೆ ಕ್ಯಾಬಿನೆಟ್ ನಲ್ಲಿ ತೀರ್ಮಾನ. ಸಿಬಿಐನವರು ಅಗತ್ಯ ಬಿದ್ದರೆ ಸಚಿವ ನಾಗೇಂದ್ರರಿಗೂ ವಿಚಾರಣೆಗೆ ನೊಟೀಸ್ ಕೊಡಬಹುದು. ಸಿಬಿಐ ನಿಯಮದಂತೆ ತನಿಖೆ ನಡೆಯಬಹುದು ಅಂತ ಪರಮೇಶ್ವರ್ ತಿಳಿಸಿದರು.

TAGGED:bengalurubjpdrG Parameshwarjdsಜೆಡಿಎಸ್ಡಾ. ಜಿ ಪರಮೇಶ್ವರ್ಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

Siddaramaiah DK Shivakumar Narendra Modi
Bengaluru City

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸಹಾಯ ಕೋರಿ ಮೋದಿಗೆ ಸಿಎಂ ಪತ್ರ

Public TV
By Public TV
3 minutes ago
us and israeli military operations natanz nuclear facility hit says iran iaea flags risk of radiation leak
Latest

ಇರಾನ್‌ ಪರಮಾಣು ಸೌಲಭ್ಯದ ಮೇಲೆ ದಾಳಿ – ವಿಕಿರಣ ಸೋರಿಕೆಯ ಆತಂಕ

Public TV
By Public TV
47 minutes ago
Benjamin Netanyahu
Latest

ನೆತನ್ಯಾಹು ಕಚೇರಿ, ಇಸ್ರೇಲಿ ವಾಯುಪಡೆಯ ಕಮಾಂಡರ್ ಮೇಲೆ ಕ್ಷಿಪಣಿ ದಾಳಿ

Public TV
By Public TV
47 minutes ago
Male Mahadeshwar
Chamarajanagar

ಮಲೆ ಮಹದೇಶ್ವರನಿಗೆ ತಟ್ಟಲ್ಲ ಗ್ರಹಣದ ಎಫೆಕ್ಟ್: ಚಂದ್ರಗ್ರಹಣವಿದ್ದರೂ ಮಾದಪ್ಪನ ದರ್ಶನಕ್ಕೆ ಭಕ್ತರಿಗೆ ಅವಕಾಶ

Public TV
By Public TV
1 hour ago
Omkareshwara Temple 2
Districts

ಮಂಗಳವಾರ ರಕ್ತ ಚಂದ್ರಗ್ರಹಣ – ಕೊಡಗಿನ ಓಂಕಾರೇಶ್ವರ ದೇಗುಲದಲ್ಲಿ ಪೂಜಾ ಸಮಯ ಬದಲು

Public TV
By Public TV
1 hour ago
Israel Iran airstrikes
Bagalkot

ಇರಾನ್-ಇಸ್ರೇಲ್ ಯುದ್ಧ – ಕರ್ನಾಟಕದ ನಾಗರಿಕರ ನೆರವಿಗಾಗಿ 24*7 ತುರ್ತುವ್ಯವಸ್ಥೆ ಸಕ್ರಿಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?