Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಯಕತ್ವ ಬದಲಾವಣೆ: ಹೈಕಮಾಂಡ್ ಹೇಳಿಲ್ಲ, CLPಯಲ್ಲೂ ಚರ್ಚೆಯಾಗಿಲ್ಲ – ಪರಮೇಶ್ವರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾಯಕತ್ವ ಬದಲಾವಣೆ: ಹೈಕಮಾಂಡ್ ಹೇಳಿಲ್ಲ, CLPಯಲ್ಲೂ ಚರ್ಚೆಯಾಗಿಲ್ಲ – ಪರಮೇಶ್ವರ್

Bengaluru City

ನಾಯಕತ್ವ ಬದಲಾವಣೆ: ಹೈಕಮಾಂಡ್ ಹೇಳಿಲ್ಲ, CLPಯಲ್ಲೂ ಚರ್ಚೆಯಾಗಿಲ್ಲ – ಪರಮೇಶ್ವರ್

Public TV
Last updated: November 20, 2025 4:35 pm
Public TV
Share
2 Min Read
G Parameshwar
SHARE

ಬೆಂಗಳೂರು: ನಾಯಕತ್ವ ಬದಲಾವಣೆ ಕುರಿತು ಹೈಕಮಾಂಡ್ ಹೇಳಿಲ್ಲ, ಸಿಎಲ್‌ಪಿಯಲ್ಲೂ ಚರ್ಚೆಯಾಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ಎಂದು ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಸಂಪುಟ ಪುನರ್ ರಚನೆ ಕುರಿತು ಮಾತನಾಡಿದ ಅವರು, ನಾವು ನಾವೇ ಏನೇನೋ ಹೇಳಿಕೊಂಡು ಹೋದರೆ ಅದಕ್ಕೆ ಮಹತ್ವ ಬರುತ್ತದೆಯೇ? ಈ ಬಗ್ಗೆ ಹೈಕಮಾಂಡ್‌ನವರು ಸ್ಪಷ್ಟವಾಗಿ ಹೇಳಿದಾಗ ಮಹತ್ವ ಬರುತ್ತದೆ. ಸಂಪುಟ ಪುನರ್ ರಚನೆ ವಿಚಾರ, ಮುಖ್ಯಮಂತ್ರಿ ಬದಲಾವಣೆ ವಿಚಾರ ಸೇರಿದಂತೆ ಯಾವುದನ್ನು ಸಹ ಹೈಕಮಾಂಡ್‌ನವರು ಎಲ್ಲೂ ಉಚ್ಛರಿಸಿಲ್ಲ. ಹೈಕಮಾಂಡ್‌ನವರು ಹೇಳಿದರೆ ಕೇಳುತ್ತೇವೆ. ಅವರು ಹೇಳದಿರುವ ಕಾರಣಕ್ಕಾಗಿ ಯಾವುದಕ್ಕು ಮಹತ್ವ ಕೊಡುವ ಅಗತ್ಯವಿಲ್ಲ. ಹೈಕಮಾಂಡ್‌ನವರು ಹೇಳಿಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲೂ ಚರ್ಚೆಯಾಗಿಲ್ಲ ಎಂದರು.ಇದನ್ನೂ ಓದಿ: ರಾಜ್ಯ ರಾಜಕೀಯದಲ್ಲಿ ಧಿಡೀರ್ ಬೆಳವಣಿಗೆ – ದೆಹಲಿಗೆ ಹಾರಿದ ಡಿಕೆಶಿ ಬೆಂಬಲಿಗರು

ಯಾವುದೇ ತೀರ್ಮಾನವನ್ನು ಹೈಕಮಾಂಡ್‌ನವರು ಮಾಡಬೇಕು. ಸಂಪುಟ ಪುನರ್ ರಚನೆ ಸೇರಿದಂತೆ ಬೇರೆಬೇರೆ ವಿಚಾರಗಳ ತೀರ್ಮಾನವನ್ನು ಅವರೇ ಮಾಡಬೇಕು. ಎರಡೂವರೆ ವರ್ಷ ಆಗಿರುವುದು ಅವರಿಗೆ ಗೊತ್ತಿದೆ. ಎರಡೂವರೆ ವರ್ಷಕ್ಕೆ ಮಹತ್ವ ಕೊಡುವಂತ ಅಗತ್ಯ ಇಲ್ಲ. ನಮ್ಮ ಹೈಕಮಾಂಡ್‌ನಿಂದ ನಾಯಕತ್ವ ಬದಲಾವಣೆಯ ಬಗ್ಗೆ ಯಾರು, ಏನೂ ಹೇಳಿಲ್ಲ ಎಂದು ತಿಳಿಸಿದರು.

ನಮ್ಮ ಸರ್ಕಾರವು ಎರಡೂವರೆ ವರ್ಷದ ಅವಧಿಯಲ್ಲಿ ಜನಸಮುದಾಯಕ್ಕೆ ನೀಡಿದ್ದ ಭರವಸೆಗಳನ್ನು ಆದ್ಯತೆಯ ಮೇಲೆ ಈಡೇರಿಸಿದ್ದೇವೆ ಎಂಬ ಸಮಾಧಾನವಿದೆ. ಮುಂದೆ ಹೆಚ್ಚಿನ ರೀತಿಯಲ್ಲಿ ಹಣಕಾಸಿನ ವಿಚಾರದಲ್ಲಿ ಅನವಶ್ಯಕ ಖರ್ಚುಗಳನ್ನು ಸರಿಪಡಿಸುವ ಪ್ರಯತ್ನ ಮಾಡಬೇಕು ಎಂದರು.

ಕೇಂದ್ರ ಸರ್ಕಾರ ನಮಗೆ ಕೊಡಬೇಕಾದ ಹಣವನ್ನು ಕೊಡದೇ ಕಡಿಮೆ ಕೊಟ್ಟಿದೆ. ಜಿಎಸ್‌ಟಿ ಪಾಲಿನಲ್ಲಿ ಕಡಿಮೆ ನೀಡಿದೆ. ಕೇಂದ್ರ ಸರ್ಕಾರದ ಸಹಯೋಗದಲ್ಲಿ ಆಗುವ ಯೋಜನೆಗಳಲ್ಲಿ ಸರಿಯಾದ ಸಮಯದಲ್ಲಿ ಅನುದಾನ ಬಿಡುಗಡೆ ಮಾಡುವುದಿಲ್ಲ. ಜಲ ಜೀವನ್ ಮಿಷನ್ ಯೋಜನೆಯ ಸಾಕಷ್ಟು ಅನುದಾನ ಬಾಕಿ ಇದೆ. ಇಡೀ ದೇಶದಲ್ಲಿ ಮನೆಮನೆಗೆ ಗಂಗೆ, ನೀರು ತಲುಪಿಸುತ್ತೇವೆ ಎಂದು ಹೇಳುತ್ತಾರೆ. ಅದರ ಹಣವನ್ನು ರಾಜ್ಯ ಸರ್ಕಾರವೇ ಭರಿಸುತ್ತಿದೆ. ಮುಖ್ಯಮಂತ್ರಿಗಳು ಅನುಭವಿ ಹಣಕಾಸು ಸಚಿವರು. 17ನೇ ಬಾರಿ ಬಜೆಟ್ ಮಂಡಿಸುವವರಿದ್ದಾರೆ. ಇದನ್ನೆಲ್ಲ ಚರ್ಚೆ ಮಾಡಿ, ಹಣಕಾಸಿನ ವಿಚಾರದಲ್ಲಿ ಒಂದಷ್ಟು ತೀರ್ಮಾನ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಧರ್ಮಸ್ಥಳ ಪ್ರಕರಣದ ಕುರಿತು ಪ್ರತಿಕ್ರಿಯಿಸಿ, ಎಸ್‌ಐಟಿಯವರಿಗೆ ಸರ್ಕಾರದಿಂದ ಸ್ಪಷ್ಟವಾಗಿ ಹೇಳಿದ್ದೇವೆ. ವರದಿ ನೀಡುವುದು ಎಸ್‌ಐಟಿಯವರಿಗೆ ಬಿಟ್ಟದ್ದು. ವರದಿ ಬಂದ ನಂತರ ಗೊತ್ತಾಗುತ್ತದೆ. ಎಸ್‌ಐಟಿಯವರು ಸರ್ಕಾರಕ್ಕೆ ವರದಿ ಕೊಡಲೇಬೇಕಾಗುತ್ತದೆ. ಪ್ರಕರಣದ ವಾಸ್ತವಾಂಶ ಏನಿದೆ ಎಂಬುದನ್ನು ಸದನಕ್ಕೆ ಮಾಹಿತಿ ನೀಡಲೇಬೇಕು ಎಂದರು.ಇದನ್ನೂ ಓದಿ: ಹಾಡಹಗಲೇ ದರೋಡೆ – ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹಾಳಾಗಿದೆ: ನಿಖಿಲ್ ಕುಮಾರಸ್ವಾಮಿ ಕಿಡಿ

TAGGED:bengalurucongressG ParameshwarHigh Commandಬೆಂಗಳೂರುಸಂಪುಟ ಪುನಾರಚನೆಹೈಕಮಾಂಡ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

daily horoscope dina bhavishya
Astrology

ದಿನ ಭವಿಷ್ಯ 30-04-2026

Public TV
By Public TV
16 minutes ago
Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
7 hours ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
7 hours ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
8 hours ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
8 hours ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?