ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎನ್ ರಾಜಣ್ಣ (KN Rajanna) ಅವರು ದೂರು ಕೊಟ್ಟರೆ ಉನ್ನತ ಮಟ್ಟದಲ್ಲಿ ತನಿಖೆ ನಡೆಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಗೃಹ ಸಚಿವ ಜಿ. ಪರಮೇಶ್ವರ್ (G Parameshwar) ಹೇಳಿದ್ದಾರೆ.
- Advertisement 2-
ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಣ್ಣ ದೂರು ಕೊಡೋದಾಗಿ ಹೇಳಿದ್ದಾರೆ, ಇನ್ನೂ ಕೊಟ್ಟಿಲ್ಲ. ಅವರು ದೂರು ಕೊಟ್ಟರೆ ತನಿಖೆಗೆ ವಹಿಸ್ತೇವೆ. ನಾನು ಸಿಎಂ ಜೊತೆ ಉನ್ನತ ಮಟ್ಟದ ತನಿಖೆ ಬಗ್ಗೆ ಚರ್ಚೆ ಮಾಡ್ತೇನೆ. ಯಾವ ತನಿಖೆಗೆ ಕೊಡಬೇಕು ಅಂತ ಸಿಎಂ ಜೊತೆಗೆ ಚರ್ಚೆ ಮಾಡ್ತೇನೆ. ಈಗಾಗಲೇ ಯಾವ ತನಿಖೆಗೆ ಕೊಡಬೇಕು ಅಂತ ಪ್ರಾಥಮಿಕವಾಗಿ ಅಂದುಕೊಂಡಿದ್ದೇವೆ, ಸಿಎಂ ಜೊತೆಗೆ ಚರ್ಚೆ ಮಾಡಿದ ಬಳಿಕ ಪ್ರಕಟಿಸುತ್ತೇವೆ ಅಂತ ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮರಗಳ ಮಾರಣ ಹೋಮ – 100 ವರ್ಷಗಳ ಹಳೆಯ ಮರಗಳಿಗೆ ಕೊಡಲಿ ಏಟು!
- Advertisement 3-
- Advertisement 4-
ಹನಿ ಟ್ರ್ಯಾಪ್ ಪ್ರಕರಣವನ್ನ (Honey Trap Case) ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಇಷ್ಟು ದೊಡ್ಡ ಆರೋಪ ಬಂದಿದೆ, ಗಂಭೀರವಾಗಿ ತಗೊಳ್ಳಲೇಬೇಕಲ್ಲ. ರಾಜಣ್ಣ ಅವರು ಇಷ್ಟೊತ್ತಿಗೆ ದೂರು ಕೊಟ್ಟಿದ್ದರೆ ಯಾವ ಸ್ವರೂಪದ ತನಿಖೆ ಅಂತ ಘೋಷಣೆ ಮಾಡ್ತಿದ್ದೆವು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Photo Gallery | IPL ಉದ್ಘಾಟನಾ ವೇದಿಕೆಯಲ್ಲಿ ಬೆಡಗು ಬಿನ್ನಾಣ; ಬಳ್ಳಿಯಂತೆ ಬಳುಕಿದ ದಿಶಾ!
ಇನ್ನೂ ಸಿಬಿಐ ಅಥವಾ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಲಿ ಎಂಬ ಬಿಜೆಪಿ ಒತ್ತಾಯಕ್ಕೆ ಪ್ರತಿಕ್ರಿಯಿಸಿ, ನಾವು ನಮ್ಮದೇ ರೀತಿಯಲ್ಲಿ ಪರಿಶೀಲಿಸಿ ನಿರ್ಧಾರ ಮಾಡ್ತೇವೆ. ಇಷ್ಟು ದೊಡ್ಡ ಘಟನೆ ನಡೆದಿದೆ, ವಿಧಾನಸೌಧದಲ್ಲಿ ಚರ್ಚೆ ಆಗಿದೆ. ನಡೆಯದಿರೋದೆಲ್ಲ ನಡೆದಿದೆ, ಅಂಥದ್ರಲ್ಲಿ ಗಂಭೀರವಾಗಿ ತಗೊಳ್ಳಲಿಲ್ಲ ಅಂದ್ರೆ ಆಗಲ್ಲ ಎಂದಿದ್ದಾರೆ.
ಸದನದಲ್ಲಿ ಏಕಾಏಕಿ ರಾಜಣ್ಣ ಮಾತಾಡಿದ್ದಕ್ಕೆ ಹೈಕಮಾಂಡ್ ಬೇಸರವಾಗಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿ, ಇದು ಗೊತ್ತಿಲ್ಲ, ಇದರ ಬಗ್ಗೆ ಅಧ್ಯಕ್ಷರು ನೋಡ್ಕೋತಾರೆ ಎಂದು ಹೇಳಿದ್ದಾರೆ. ಅಲ್ಲದೇ ರಾಜಣ್ಣ ಅವರ ಮೇಲೆ ದೂರು ಕೊಡದಂತೆ ಒತ್ತಡ ಇದೆಯಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಇದರ ಬಗ್ಗೆ ನನ್ನ ಜೊತೆ ಯಾರೂ ಮಾತಾಡಿಲ್ಲ, ಹೈಕಮಾಂಡ್‌ನವರೂ ಮಾತಾಡಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ವಾಸ್ತವ್ಯ – ಶೀಘ್ರದಲ್ಲೇ ಭಾರತಕ್ಕೆ ಕರೆತರಲು ಪ್ಲ್ಯಾನ್