ಬೆಂಗಳೂರು: ಪ್ರಜ್ವಲ್ ಮೊಬೈಲ್ (Prajwal Moblie) ಕಳೆದಿದೆ, ಸಾಕ್ಷ್ಯ (Evidence) ನಾಶ ಮಾಡಿದ್ದಾರೆ ಎಂಬುದರ ಬಗ್ಗೆ ನನಗೆ ಗೊತ್ತಿಲ್ಲ. ಎಸ್ಐಟಿಯವರು ಆ ಮಾತನ್ನ ಹೇಳಿದ್ರೆ ಒಪ್ಪಿಕೊಳ್ತೀನಿ. ಬೇರೆ ಬೇರೆ ಮೂಲಗಳಿಂದ ಬರುವ ಮಾಹಿತಿಯನ್ನ ಒಪ್ಪಲು ಆಗುವುದಿಲ್ಲ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ (G Parameshwara) ಹೇಳಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಬಂಧನದ ನಂತರ ಪ್ರಕರಣದ ಕುರಿತು ಅಧಿಕಾರಿಗಳ ಜೊತೆ ಯಾವುದೇ ರೀತಿಯ ಚರ್ಚೆ ಮಾಡಿಲ್ಲ. ಚಂದ್ರಶೇಖರ್ ಕುಟುಂಬಕ್ಕೆ ಸಾಂತ್ವನ ಹೇಳಲು ನಿನ್ನೆ ಶಿವಮೊಗ್ಗಕ್ಕೆ ಹೋಗಿದ್ದೆ. ತಡವಾಗಿ ಬಂದ ಹಿನ್ನೆಲೆಯಲ್ಲಿ ಚರ್ಚಿಸಲು ಸಾಧ್ಯವಾಗಿಲ್ಲ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ. ನ್ಯಾಯಾಧೀಶರ ಮುಂದೆ ಹಾಜರುಪಡಿಸಿ, ವಿಚಾರಣೆಗಾಗಿ ಕಸ್ಟಡಿಗೆ ತೆಗೆದುಕೊಳ್ಳುವ ಪ್ರಕ್ರಿಯೆಯನ್ನು ಎಸ್ಐಟಿ ನೋಡಿಕೊಳ್ಳುತ್ತದೆ ಎಂದಿದ್ದಾರೆ.
Advertisement
Advertisement
ಪ್ರಜ್ವಲ್ ಬಂಧನವಾಗಲು ತಡವಾಗಿದ್ದರಿಂದ ಸಾಕಷ್ಟು ಸಂತ್ರಸ್ತ ಮಹಿಳೆಯರು ದೂರು ಕೊಡಲು ಮುಂದೆ ಬಂದಿರಲಿಲ್ಲ. ಈಗ ಪ್ರಜ್ವಲ್ ಬಂಧನವಾಗಿದೆ. ಸಂತ್ರಸ್ತ ಮಹಿಳೆಯರಲ್ಲಿ ಏನಾದರು ಮನವಿ ಮಾಡ್ತೀರಾ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಯಾರಿಗೆ ತೊಂದರೆ ಆಗಿದೆ? ಅವರು ಪೊಲೀಸರ ಮುಂದೆ ಬಂದು ದೂರು ಕೊಡಬಹುದು. ಎಸ್ಐಟಿ ಮುಂದೆ ಹೇಳಬಹುದು ಎಂದು ಮೊದಲೇ ತಿಳಿಸಲಾಗಿದೆ. ಅಂತಹವರಿಗೆ ಎಲ್ಲ ರೀತಿಯ ರಕ್ಷಣೆ ಕೊಡುತ್ತೇವೆ ಎಂಬುದನ್ನು ಹೇಳಿದ್ದೇವೆ. ಸಂತ್ರಸ್ತೆಯರಿಗಾಗಿ ತೆರಯಲಾದ ಸಹಾಯವಾಣಿ (SIT HelpLine) ವಿಚಾರದ ಕುರಿತು ಹೆಚ್ಚು ತಿಳಿದುಕೊಳ್ಳಲು ಹೋಗಿಲ್ಲ. ಕೆಲವು ವಿಚಾರವನ್ನ ಎಸ್ಐಟಿಯವರು (SIT) ಗೌಪ್ಯವಾಗಿ ಇಟ್ಟುಕೊಳ್ಳುತ್ತಾರೆ. ಅಂತಹ ವಿಚಾರಗಳ ಬಗ್ಗೆ ಹೆಚ್ಚಿಗೆ ತಿಳಿದುಕೊಳ್ಳಲು ಹೋಗಲ್ಲ ಎಂದು ಹೇಳಿದ್ದಾರೆ.
Advertisement
Advertisement
ಇನ್ನು ಪ್ರಜ್ವಲ್ ಪ್ರಕರಣದಲ್ಲಿ ಅವರ ಮೊಬೈಲ್ ಕಳೆದಿದೆ, ಸಾಕ್ಷ್ಯ ನಾಶ ಮಾಡಿದ್ದಾರೆ ಎಂಬುದರ ಬಗ್ಗೆ ನನಗೆ ಗೊತ್ತಿಲ್ಲ. ಎಸ್ಐಟಿಯವರು ಆ ಮಾತನ್ನ ಹೇಳಿದರೆ ಒಪ್ಪಿಕೊಳ್ಳುತ್ತೇನೆ. ಬೇರೆ ಬೇರೆ ಮೂಲಗಳಿಂದ ಬರುವ ಮಾಹಿತಿಯನ್ನ ಒಪ್ಪಲು ಆಗುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಪ್ರಧಾನಿ ಹುದ್ದೆಗೆ ನನ್ನ ಆಯ್ಕೆ ರಾಹುಲ್ ಗಾಂಧಿ – ಬೆಂಬಲಿಸಿದ ಮಲ್ಲಿಕಾರ್ಜುನ ಖರ್ಗೆ
ಇದೇ ವೇಳೆ ಪ್ರಜ್ವಲ್ ಬಂಧನ ಪ್ರಕ್ರಿಯೆ ವಿಳಂಬದ ಕುರಿತು ಪ್ರತಿಕ್ರಿಯಿಸಿ, ಪ್ರಜ್ವಲ್ ನಮ್ಮ ದೇಶದ ಯಾವುದೇ ರಾಜ್ಯದಲ್ಲಿ ಇದ್ದಿದ್ದರೂ ನಮ್ಮ ತಂಡವನ್ನು ಕಳುಹಿಸಿ ಕರೆದುಕೊಂಡು ಬರಬಹುದಿತ್ತು. ಹೊರ ದೇಶದಲ್ಲಿದ್ದ ಕಾರಣಕ್ಕೆ ತಡವಾಗಿದೆ. ಆರೋಪಿ ಹೊರ ದೇಶದಲ್ಲಿದ್ದಾಗ ಬಂಧಿಸಲು ಅದಕ್ಕೇ ಆದಂತಹ ಪ್ರಕ್ರಿಯೆಗಳಿವೆ. ಇಲ್ಲಿಂದ 4 ಜನ ಇನ್ಸ್‌ಪೆಕ್ಟರ್‌ಗಳನ್ನ ಅಥವಾ ಹಿರಿಯ ಅಧಿಕಾರಿಗಳನ್ನು ಕಳುಹಿಸಿ ಎತ್ತಾಕಿಕೊಂಡು ಬನ್ನಿ ಅಂತ ಹೇಳೋಕೆ ಆಗಲ್ಲ. ನಮ್ಮ ದೇಶಕ್ಕೂ ಬೇರೆ ದೇಶಕ್ಕೂ ರಾಜತಾಂತ್ರಿಕ ಒಪ್ಪಂದಗಳಿರುತ್ತವೆ. ಇಂತಹ ಸಂದರ್ಭದಲ್ಲಿ ಅದನ್ನೆಲ್ಲ ಪಾಲಿಸಬೇಕಾಗುತ್ತದೆ. ಸಿಬಿಐ ಮೂಲಕ ಇಂಟರ್‌ಪೋಲ್‌ನವರಿಗೆ ನೋಟಿಸ್ ಕಳುಹಿಸಿ, ಅಲ್ಲಿಂದ ಬ್ಲೂ ಕಾರ್ನರ್ ನೋಟಿಸ್ ಜಾರಿಗೊಳಿಸುವ ಪ್ರಕ್ರಿಯೆಯನ್ನು ಮಾಡಲಾಗಿತ್ತು ಎಂದು ತಿಳಿಸಿದ್ದಾರೆ.
ಪ್ರಜ್ವಲ್ ಶರಣಾಗುತ್ತೇನೆ ಅಂದಿದ್ದು ಏಕೆ?
ಎಸ್ಐಟಿ ತಂಡ ಕೈಗೊಂಡಿದ್ದ ಕಾನೂನು ಪ್ರಕ್ರಿಯೆಗಳ ಕುರಿತು ತಿಳಿದಕೊಂಡಿದ್ದ ಪ್ರಜ್ವಲ್ 31ರಂದು ಬರುವುದಾಗಿ ಹೇಳಿದ್ದರು. ಫಲಿತಾಂಶ ಬೇರೆ ರೀತಿಯಲ್ಲಿ ಬಂದರೆ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದಾಗುತ್ತದೆ. ಇದನ್ನೆಲ್ಲ ಅರ್ಥ ಮಾಡಿಕೊಂಡು ಶರಣಾಗುತ್ತೇನೆ ಅಂತ ಹೇಳಿದ್ದರು ಅನ್ನಿಸುತ್ತದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಶನಿವಾರ ರಾಜ್ಯಾದ್ಯಂತ ಯುವಮೋರ್ಚಾದಿಂದ ರಸ್ತೆತಡೆ
ಕೆ.ಆರ್ ನಗರ ಸಂತ್ರಸ್ತೆ ಕಿಡ್ನ್ಯಾಪ್ ಕೇಸ್‌ನಲ್ಲಿ ಸಾ.ರಾ ಮಹೇಶ್ ಕೈವಾಡ ಕುರಿತು ಪ್ರತಿಕ್ರಿಯಿಸಿ, ಸಾ.ರಾ ಮಹೇಶ್ ಹೆಸರು ಮಾಧ್ಯಮದಲ್ಲಿ ಬಂದಿರುವುದನ್ನು ನೋಡಿದ್ದೇನೆ. ಮೊದಲ ಬಾರಿಗೆ ಅವರ ಹೆಸರು ಕೇಳಿಬಂದಿದೆ, ಈ ಬಗ್ಗೆ ತಿಳಿದುಕೊಳ್ಳುತ್ತೇನೆ ಎಂದಿದ್ದಾರೆ.