ತುಮಕೂರು: ಬೆಲೆ ಏರಿಕೆ ಸಂದರ್ಭದಲ್ಲೂ ಬಿಜೆಪಿಗೆ 30 ಸಾವಿರ ಲೀಡ್ ಸಿಕ್ಕಿರುವುದು ಆಶ್ಚರ್ಯ ತಂದಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಹೇಳಿದರು.
Advertisement
ಉಪ ಚುನಾವಣೆ ಫಲಿತಾಂಶ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಂದಗಿಯಲ್ಲಿ ನಮ್ಮ ಪಕ್ಷ ಅಷ್ಟೊಂದು ಮತ ಸೆಳೆಯಲಿಕ್ಕೆ ಆಗಿಲ್ಲ. ಅದಕ್ಕೆ ಕಾರಣ ಏನು ಎನ್ನುವುದನ್ನು ಪರಿಶೀಲಿಸುತ್ತೇವೆ. ಹಾನಗಲ್ ಸಿಎಂ ತವರು ಜಿಲ್ಲೆಯಾದರೂ ನಾವು ಗೆದ್ದಿರುವುದು ಸಂತಸ ತಂದಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸಿಂದಗಿಯಲ್ಲಿ ಲಿಂಗಾಯತರು ಮತ ಹಾಕಿಲ್ಲ, ರಾಷ್ಟ್ರೀಯ ಪಕ್ಷಗಳು ಹಣದ ಹೊಳೆ ಹರಿಸಿ ಗೆದ್ದಿವೆ: ಹೆಚ್‍ಡಿಡಿ ಆರೋಪ
Advertisement
ಜನ ಇವತ್ತು ಶ್ರೀನಿವಾಸ್ ಮಾನೆ ಅವರ ಕೈ ಹಿಡಿದಿದ್ದಾರೆ. ಅವರು ಕ್ಷೇತ್ರದಲ್ಲೇ ಅಭಿವೃದ್ಧಿ ಕೆಲಸ ಮಾಡಿಕೊಂಡಿದ್ದರು, ಜನರ ಸಂಪರ್ಕದಲ್ಲಿದ್ದರು. ಹೀಗಾಗಿ ಜನ ಕೈ ಹಿಡಿದಿದ್ದಾರೆ ಎಂದರು.
Advertisement
Advertisement
ಎರಡು ಕ್ಷೇತ್ರದಲ್ಲಿ ಜೆಡಿಎಸ್ ನೆಲೆ ಇಲ್ಲದಂತಾಗಿದೆ. ಸಿಂದಗಿಯಲ್ಲಿ ಜೆಡಿಎಸ್ ಪ್ರಾಬಲ್ಯ ಇತ್ತು, ಈಗ ನೆಲೆ ಕಳೆದುಕೊಂಡಿದೆ. ಪೆಟ್ರೋಲ್, ಡಿಸೇಲ್, ಅಡುಗೆ ಅನಿಲದಂತಹ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದರೂ ಸಿಂದಗಿಯಲ್ಲಿ ಇನ್ನೂ ಅವರಿಗೆ ಮತ ಹಾಕಿ ಗೆಲ್ಲಿಸಿರುವುದು ನನಗೆ ಆಶ್ಚರ್ಯ ತಂದಿದೆ. ಇವತ್ತಿನ ಫಲಿತಾಂಶ ನೋಡಿದರೆ, ಅಗತ್ಯ ವಸ್ತು ಬೆಲೆ ಏರಿಕೆಗೆ ಅರ್ಥ ಇಲ್ಲ ಎನಿಸುತ್ತಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಹೆಚ್ಚು ಕೆಲಸ ಮಾಡಬೇಕು ಎನ್ನುವ ಸಂದೇಶ ಕೊಟ್ಟಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಅಪ್ಪು ಜೊತೆಗಿನ ಲಾಸ್ಟ್ ಸೆಲ್ಫಿ ಶೇರ್ ಮಾಡಿದ ರಾಘಣ್ಣ
ಹಾನಗಲ್‌ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಹಿನ್ನೆಡೆಯಾಗಿದೆ. ಈ ಫಲಿತಾಂಶ ದಿಕ್ಸೂಚಿಯಲ್ಲ, ನಾವು ಇನ್ನೂ ಹೆಚ್ಚು ಕೆಲಸ ಮಾಡಬೇಕು. ಇನ್ನೂ ಪರಿಣಾಮಕಾರಿಯಾಗಿ ಕಾಂಗ್ರೆಸ್ ಮುಖಂಡರು ಕೆಲಸ ಮಾಡಬೇಕು. ಒಂದು ಸೀಟ್ ಗೆದ್ದರೆ ಸಾಲದು ಇನ್ನೂ ಗೆಲ್ಲಬೇಕಿತ್ತು. ಹಾಗಾಗಿ ಇನ್ನೂ ಹೆಚ್ಚಿನ ರೀತಿಯಲ್ಲಿ ಸಂಘಟನೆ ಮಾಡಬೇಕು ಎಂದು ಕರೆ ನೀಡಿದರು.
ಚುನಾವಣೆ ಫಲಿತಾಂಶದಿಂದ ನೆಲೆ ಕಳೆದುಕೊಳ್ಳುತ್ತಿದ್ದೇವೆ ಎಂಬ ಸಂದೇಶ ಜೆಡಿಎಸ್‌ಗೆ ಹೋಗಿದೆ. ಇದೇ ರೀತಿ ಮುಂದುವರಿದರೆ ಜೆಡಿಎಸ್ ಸಿಂಗಲ್ ಡಿಜಿಟ್ ತಲುಪುತ್ತೆ. ನಾವು ಮುಂದಿನ ದಿನಗಳಲ್ಲಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದರು.