ಹಾಸನ: ಕೋಡಿಮಠಕ್ಕೆ ಗೃಹಸಚಿವ ಜಿ.ಪರಮೇಶ್ವರ್ (G Parameshwar) ಅವರು ದಿಢೀರ್ ಭೇಟಿ ನೀಡಿ, ಕೋಡಿಶ್ರೀಗಳ ಆಶೀರ್ವಾದ ಪಡೆದಿದ್ದಾರೆ.
ಶಾಸಕ ಹಾಗೂ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ, ಸ್ಥಳೀಯ ಕಾಂಗ್ರೆಸ್ ಮುಖಂಡರು ಸೇರಿ ಯಾರಿಗೂ ಮಾಹಿತಿ ನೀಡದೇ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಹಾರನಹಳ್ಳಿ ಗ್ರಾಮದಲ್ಲಿರುವ ಕೋಡಿಮಠಕ್ಕೆ ದಿಢೀರ್ ಭೇಟಿ ನೀಡಿದ್ದಾರೆ.ಇದನ್ನೂ ಓದಿ: ಜನರ ಅಗತ್ಯ ಸಮಸ್ಯೆಗಳನ್ನ ಚರ್ಚಿಸಲು ಅವಕಾಶ ಕೊಡದಿರುವುದು ನಾಟಕ – ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು
ಮುಖ್ಯಮಂತ್ರಿ ಕುರ್ಚಿ ಕದನದ ವೇಳೆ ಕೋಡಿಮಠಕ್ಕೆ ಪರಮೇಶ್ವರ್ ಭೇಟಿ ನೀಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳ ಜೊತೆ ಗೌಪ್ಯವಾಗಿ ಚರ್ಚೆ ನಡೆಸಿ, ಭವಿಷ್ಯ ಕೇಳಿ ವಾಪಾಸ್ ತೆರಳಿದ್ದಾರೆ ಎನ್ನಲಾಗಿದೆ.

