ಸಾಂದರ್ಭಿಕ ಚಿತ್ರ
– ಕುಟುಂಬದ ವಾರ್ಷಿಕ ಆದಾಯ 8 ಲಕ್ಷ ರೂ.ಗಿಂತ ಕಡಿಮೆ ಇದ್ರೆ ಸರ್ಕಾರದಿಂದ ವೆಚ್ಚ
ಬೆಂಗಳೂರು: ವಿದೇಶದಲ್ಲಿ ವ್ಯಾಸಂಗ ಮಾಡುವ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಪ್ರಬುದ್ಧ ಯೋಜನೆ ಮೂಲಕ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ.
Advertisement
ವಿದೇಶದಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪಂಗಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ಮಾಡುವ ಉದ್ದೇಶದಿಂದ ಸಮಾಜ ಕಲ್ಯಾಣ ಇಲಾಖೆ ಪ್ರಬುದ್ಧ ಯೋಜನೆ ಜಾರಿಗೆ ತಂದಿತ್ತು. ಈ ಯೋಜನೆಗೆ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ವಿಧಾನಸೌಧದಲ್ಲಿ ಇಂದು ಚಾಲನೆ ನೀಡಿದ್ದಾರೆ.
Advertisement
Advertisement
ಸಾಂದರ್ಭಿಕ ಚಿತ್ರ
Advertisement
ಈ ಮೂಲಕ ದೇಶದಲ್ಲಿಯೇ ಇದೇ ಮೊದಲ ಬಾರಿಗೆ ವಿದೇಶದಲ್ಲಿ ಪದವಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಇಂತಹ ಅವಕಾಶ ಸಿಗಲಿದೆ. ಪ್ರಬುದ್ಧ ಯೋಜನೆಯಲ್ಲಿ ವಿಶೇಷ ಚೇತನರಿಗೆ ಶೇ. 4 ಹಾಗೂ ವಿದ್ಯಾರ್ಥಿನಿಯರಿಗೆ ಶೇ. 33 ಮೀಸಲಾತಿ ನೀಡಲಾಗಿದೆ.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಿಸಿಎಂ ಪರಮೇಶ್ವರ್ ಅವರು, ವಿದ್ಯಾರ್ಥಿ ವೇತನ ಪಡೆದು ನಾನು ಸಂಶೋಧನೆ ಮಾಡಿ ಆಸ್ಟ್ರೇಲಿಯಾದಲ್ಲಿ ಪಿಎಚ್‍ಡಿ ಪದವಿ ಪಡೆದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಕೂಡ ವಿದ್ಯಾರ್ಥಿ ವೇತನ ಪಡೆದು ವಿದೇಶದಲ್ಲಿ ವ್ಯಾಸಂಗ ಮಾಡಿ ಸಂವಿಧಾನ ರಚನೆ ಮಾಡಿದರು. ಹಿಂದುಳಿದವರಿಗೆ ಉನ್ನತ ಮಟ್ಟದ ಶಿಕ್ಷಣ ಕೊಡಿಸುವ ಉದ್ದೇಶದಿಂದ ಸರ್ಕಾರ ಪ್ರಬುದ್ಧ ಯೋಜನೆ ಜಾರಿಗೆ ತಂದಿದೆ ಎಂದರು. ಕಾರ್ಯಕ್ರಮದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಸೇರಿ ಹಲವರು ಭಾಗವಹಿಸಿದ್ದರು.’
ಸಾಂದರ್ಭಿಕ ಚಿತ್ರ
ಯೋಜನೆಯಲ್ಲಿ ಏನಿದೆ?:
ಕುಟುಂಬದ ವಾರ್ಷಿಕ ಆದಾಯ ಗರಿಷ್ಟ 8 ಲಕ್ಷ ರೂ. ಇರುವರಿಗೆ ವಿದೇಶದಲ್ಲಿ ವ್ಯಾಸಂಗ ಮಾಡಲು ಸಂಪೂರ್ಣ ವೆಚ್ಚ ಸರ್ಕಾರವೇ ಭರಿಸಲಿದೆ. 8-15 ಲಕ್ಷ ರೂ. ವಾರ್ಷಿಕ ಆದಾಯ ಹೊಂದಿರುವ ಕುಟುಂಬದ ವಿದ್ಯಾರ್ಥಿಗಳಿಗೆ ಶೇ.50ರಷ್ಟು ಹಣವನ್ನು ಸರ್ಕಾರ ಭರಿಸುತ್ತದೆ. 15 ಲಕ್ಷ ರೂ. ಮೇಲ್ಪಟ್ಟ ಆದಾಯ ಇರುವ ವಿದ್ಯಾರ್ಥಿಗಳಿಗೆ ಶೇ.33 ಹಣ ಸಹಾಯ ಮಾಡಲಾಗುತ್ತದೆ. ಪ್ರಬುದ್ಧ ಯೋಜನೆಯಲ್ಲಿ ವಿಕಲಚೇತನರಿಗೆ ಶೇ.4 ಹಾಗೂ ವಿದ್ಯಾರ್ಥಿನಿಯರಿಗೆ ಶೇ.33 ಮೀಸಲಾತಿ ಸಿಗಲಿದೆ.
ಆರ್ಥಿಕ ಸಹಾಯ ನೀಡುವ ಸರ್ಕಾರವು ಕೆಲವು ಷರತ್ತುಗಳನ್ನು ಹಾಕಿದೆ. ವಿದ್ಯಾರ್ಥಿಯೂ ವಿದೇಶದಲ್ಲಿ ವ್ಯಾಸಂಗ ಮಾಡಿದ ಬಳಿಕ ಮತ್ತೆ ಮರಳಿ ರಾಜ್ಯಕ್ಕೆ ಬರಬೇಕು. ಒಂದು ವೇಳೆ ಆತನಿಗೆ ವಿದೇಶದಲ್ಲಿ ಕೆಲಸ ಸಿಕ್ಕರೆ ತೆರಳಬಹುದು ಎಂದು ತಿಳಿಸಲಾಗಿದೆ.
ಸಾಂದರ್ಭಿಕ ಚಿತ್ರ
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv