ಬೆಂಗಳೂರು: ಕಂಪ್ಲಿ ಶಾಸಕ ಗಣೇಶ್ ಹಾಗೂ ಆನಂದ್ ಸಿಂಗ್ ಅವರ ನಡುವೆ ರಾಜಿ ಸಂಧಾನದ ಬಗ್ಗೆ ಮಾಜಿ ಅಧ್ಯಕ್ಷರ ಬಳಿ ಏನ್ ಕೇಳ್ತೀರಾ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಪ್ರಶ್ನೆಕೇಳಿದ್ದಾರೆ.
ಶಾಸಕ ಗಣೇಶ್ ಬಂಧನದ ವಿಚಾರವಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ಶಾಸಕರನ್ನು ಬಂಧಿಸಿದ್ದಾರೆ ಎನ್ನುವ ಮಾಹಿತಿ ಗೊತ್ತಾಗಿದೆ. ಆದರೆ ಪಕ್ಷ ಏನು ಕೈಗೊಳ್ಳುತ್ತೆ ಎನ್ನುವುದು ನನಗೆ ಗೊತ್ತಿಲ್ಲ. ನಾನು ಮಾಜಿ ಕೆಪಿಸಿಸಿ ಅಧ್ಯಕ್ಷ ಹಾಗೂ ಮಾಜಿ ಗೃಹ ಸಚಿವ. ಹೀಗಾಗಿ ನೀವು ಕೆಪಿಸಿಸಿ ಹಾಲಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಗೃಹ ಸಚಿವ ಎಂ.ಬಿ.ಪಾಟೀಲ್ ಅವರನ್ನೇ ಕೇಳಬೇಕು ಎಂದು ಹೇಳಿದರು.
ಶಾಸಕ ಆನಂದ್ ಸಿಂಗ್ ಅವರ ಮೇಲೆ ಹಲ್ಲೆ ನಡೆಸಿದ ಬಳಿಕ ಬರೋಬ್ಬರಿ ಒಂದು ತಿಂಗಳು ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ ಶಾಸಕ ಗಣೇಶ್ ಕೊನೆಗೂ ಗುಜರಾತಿನಲ್ಲಿ ಸಿಕ್ಕಿಬಿದ್ದಿದ್ದಾರೆ.
ಬಿಡದಿ ಪೊಲೀಸರು 3 ತಂಡ ರಚಿಸಿ ಮುಂಬೈ, ಅಂಡಮಾನ್, ಆಂಧ್ರಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಗಣೇಶ್ ಅವರಿಗಾಗಿ ಹುಡುಕಾಟ ನಡೆಸಿತ್ತು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv