ವಿಜಯೇಂದ್ರ ಆಯ್ಕೆಗೆ ತಕ್ಕ ರಣನೀತಿ: ಪರಮೇಶ್ವರ್

Public TV
1 Min Read

ಬೆಂಗಳೂರು: ಬಿಜೆಪಿ (BJP) ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ (B.Y Vijayendra) ಆಯ್ಕೆಗೆ ತಕ್ಕಂತೆ ನಾವು ರಣ ನೀತಿ ರೂಪಿಸುತ್ತೇವೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ (G.Parameshwara) ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ಪಕ್ಷದ ಲೆಕ್ಕಾಚಾರದಲ್ಲಿ ರಾಜ್ಯಾಧ್ಯಕ್ಷರನ್ನು ಮಾಡಿದ್ದಾರೆ. ನಾನು ವಿಜಯೇಂದ್ರ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯದ ವಿಪಕ್ಷವಾಗಿ ಒಂದಷ್ಟು ಧನಾತ್ಮಕ ವಿಚಾರ ಇಟ್ಟುಕೊಂಡು ನಮಗೆ ಸಲಹೆ ಸೂಚನೆ ಕೊಡಲಿ. ನಾವು ತಪ್ಪು ಮಾಡಿದರೆ ಎತ್ತಿ ಹಿಡಿಯಲಿ ಎಂದಿದ್ದಾರೆ. ಇದನ್ನೂ ಓದಿ: ವಿಜಯೇಂದ್ರ ಆಯ್ಕೆ ‘ಹೊಸ ಬಾಟಲಿಗೆ ಹಳೆ ವೈನ್’ ಹಾಕಿದಂತೆ: ಡಿ.ಸುಧಾಕರ್

ಬೇರೆ ಬೇರೆ ಕ್ಷುಲ್ಲಕ ಕಾರಣಕ್ಕೆ ಮಾತಾಡುವುದು ನಿಂತು ಒಳ್ಳೆಯ ರಾಜಕಾರಣದ ವ್ಯವಸ್ಥೆ ಮಾಡಿಕೊಂಡರೆ ರಾಜ್ಯದಲ್ಲಿ ಒಳ್ಳೆಯದಾಗುತ್ತದೆ. ನಾನು ಅದನ್ನು ನಿರೀಕ್ಷೆ ಮಾಡುತ್ತೇನೆ. ಮುಂದಿನ ಬೆಳವಣಿಗೆ ಹೇಗೆ ಎಂದು ನೋಡೋಣ ಎಂದಿದ್ದಾರೆ.

ಲಿಂಗಾಯತ ಸಮುದಾಯ ವಿಜಯೇಂದ್ರ ಅವರ ಬೆನ್ನಿಗೆ ನಿಲ್ಲುವ ವಿಚಾರದಲ್ಲಿ ಬೆಳವಣಿಗೆ ಯಾವ ರೀತಿ ಆಗಲಿದೆ ಎಂದು ನೋಡಬೇಕು. ನೋಡಿಕೊಂಡು ಅದಕ್ಕೆ ಪ್ರತಿಯಾಗಿ ನಾವು ಮಾಡಬೇಕು. ಸೂಕ್ಷ್ಮವಾಗಿ ಕಾದು ನೊಡಿ ನಂತರ ನಾವು ತಂತ್ರ ರೂಪಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಹಾಸನಾಂಬೆ ದರ್ಶನಕ್ಕೆ ಮುಂದಾದ ಸಚಿವರನ್ನು ಗರ್ಭಗುಡಿ ಬಾಗಿಲಲ್ಲೇ ತಡೆದ ಮಹಿಳಾ ಕಾನ್ಸ್‌ಟೇಬಲ್

Share This Article