ಬೆಂಗಳೂರು: ದರ್ಶನ್ ಪ್ರಕರಣ (Actor Darshan Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡ್ತಿದೆ. ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಸ್ಫೋಟಕ ರಹಸ್ಯಗಳು ಹೊರಬರುತ್ತಿವೆ. ಪ್ರಕರಣದ ವರದಿಯನ್ನು ಗೃಹ ಸಚಿವರು ಮುಖ್ಯಮಂತ್ರಿಗೆ ನೀಡಿದ್ದಾರೆ.
ಇನ್ನೂ ಈ ಕುರಿತು ಮಾತನಾಡಿರುವ ಸಚಿವ ಜಿ. ಪರಮೇಶ್ವರ್ (G Parameshwara), ಪ್ರಕರಣದ ತನಿಖೆ ನಡೆಯುತ್ತಿದೆ, ಕಾನೂನು ಎಲ್ಲರಿಗೂ ಒಂದೇ ಆಗಿದೆ. ರೇಣುಕಾಸ್ವಾಮಿ, ಪವಿತ್ರಾಗೌಡ (Pavithra Gowda) ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್ ಮಾಡಿದ್ದರಂತೆ, ಅದಕ್ಕೆ ಕಾನೂನು ಕ್ರಮ ಕೈಗೊಳ್ಳಬಹುದಿತ್ತು. ಕೊಲೆ ಮಾಡುವ ಹಂತಕ್ಕೆ ಹೋಗುವುದು ಸರಿಯಲ್ಲ ಎಂದಿದ್ದಾರೆ.
ಇನ್ನೂ ಯಾವುದೇ ಪ್ರಭಾವಿಗಳು ದರ್ಶನ್ ಪರವಾಗಿ ಲಾಬಿ ಮಾಡಿಲ್ಲ. ಈ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವೂ ಇಲ್ಲ. ನಮ್ಮ ಪೊಲೀಸರೇ ತನಿಖೆ ನಡೆಸುತ್ತಿದ್ದಾರೆ. ರೇಣುಕಾಸ್ವಾಮಿ ಕುಟುಂಬಕ್ಕೆ ನೆರವು ನೀಡುವ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ನುಡಿದಿದ್ದಾರೆ. ಇದನ್ನೂ ಓದಿ: ಕುವೈತ್ ಅಗ್ನಿ ದುರಂತದಲ್ಲಿ 40 ಮಂದಿ ಭಾರತೀಯರ ದುರ್ಮರಣ – ಮೋದಿ ಸಂತಾಪ
ಇದೇ ವೇಳೆ ದರ್ಶನ್ ವಿರುದ್ಧ ರೌಡಿ ಶೀಟ್ ತೆರೆಯುವ ವಿಚಾರ ತೆರೆಯುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ದರ್ಶನ್ ಅವರದ್ದು ಇದೇ ಮೊದಲ ಪ್ರಕರಣವಲ್ಲ. ಹಿಂದೆಯೂ ಬೇರೆ ಬೇರೆ ಪ್ರಕರಣ ಕಂಡುಬಂದಿದೆ. ತನಿಖೆ ನಂತರ ಪೊಲೀಸರು ಏನು ಶಿಫಾರಸು ಮಾಡ್ತಾರೆ ನೋಡಬೇಕು. ರೌಡಿ ಶೀಟ್ ತೆರೆಯುವ ವಿಚಾರವನ್ನು ಪೊಲೀಸರು ನೋಡಿಕೊಳ್ತಾರೆ ಎಂದು ತಿಳಿಸಿದ್ದಾರೆ.
ಇನ್ನೂ ದರ್ಶನ್-ಪವಿತ್ರಾಗೌಡ ಪರ ವಕೀಲ ನಾರಾಯಣಸ್ವಾಮಿ ಮಾತಾನಾಡಿ, ತಮ್ಮ ಕಕ್ಷಿದಾರರಿಬ್ಬರು ಅಮಾಯಕರು. ಅವರಿಗೆ ಏನು ಗೊತ್ತಿಲ್ಲ ಎಂದಿದ್ದಾರೆ. ರಾಜ್ಯಸಭಾ ಸದಸ್ಯರೂ ಆಗಿರುವ ನಟ ಜಗ್ಗೇಶ್ ಎಕ್ಸ್ ಖಾತೆ ಮೂಲಕ ಪ್ರತಿಕ್ರಿಯಿಸಿದ್ದು, `ರಾಮನಾಗು.. ರಾವಣನಾದರೇ ಅಂತ್ಯ ಎಂದಿದೆ ಸನಾತನ ಕೃತಿ.. ಮದಕ್ಕೆ ಕಾರುಣ್ಯದ ಅರಿವಿಲ್ಲ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಪ್ರಸಿದ್ಧರು, ಸೆಲೆಬ್ರಿಟಿಗಳೆಂದು ಬಿಡುವ ಪ್ರಶ್ನೆ ಇಲ್ಲ: ದರ್ಶನ್ ಕೇಸ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ