-ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಬೇಕು; ಸಿಎಂ, ಡಿಸಿಎಂಗೆ ಮನವಿ
ತುಮಕೂರು: ಜಿಲ್ಲೆಯು ಬಹಳ ವೇಗವಾಗಿ ಬೆಳೆಯಲಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ಮೆಟ್ರೋ ರೈಲು (Metro Train) ಸೇವೆ ಕಲ್ಪಿಸಲು ಸಮಗ್ರ ಯೋಜನಾ ವರದಿಯ (DPR) ಪರಿಶೀಲನೆ ನಡೆಯುತ್ತಿದೆ ಎಂದು ಜಿ. ಪರಮೇಶ್ವರ್ (G Parameshwara) ತಿಳಿಸಿದರು.
ತುಮಕೂರಿನಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸಾವಿರಾರು ಕೋಟಿ ರೂ.ಗಳ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಪರಮೇಶ್ವರ್ ಮಾತನಾಡಿದರು. ತುಮಕೂರು ಜಿಲ್ಲೆಯಲ್ಲಿ ಇವತ್ತಿನ ಕಾರ್ಯಕ್ರಮ ಇತಿಹಾಸ ಸೃಷ್ಟಿ ಮಾಡಿದೆ. ಇವತ್ತು 1,250 ಕೋಟಿ ರೂ. ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. 1.5 ಲಕ್ಷ ಫಲಾನುಭವಿಗಳಿಗೆ ಸವಲತ್ತು ಹಂಚಿಕೆಯಾಗಿದೆ. ಕಂದಾಯ ಇಲಾಖೆಯಿಂದ 2 ಸಾವಿರ ಹಕ್ಕು ಪತ್ರ ಕೊಟ್ಟಿದ್ದೇವೆ. 891 ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿದ್ದೇವೆ. ತುಮಕೂರು ಬೆಂಗಳೂರಿನ ಭಾಗವಾಗಿ ಅಭಿವೃದ್ಧಿಯಾಗುತ್ತಿದೆ ಎಂದು ಶ್ಲಾಘಿಸಿದರು.
ಈಗಾಗಲೇ ಏಷ್ಯಾ ಖಂಡದಲ್ಲೇ ದೊಡ್ಡ ಕೈಗಾರಿಕಾ ಘಟಕ ಸ್ಥಾಪನೆಗೆ ಕ್ರಮ ಆಗಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಅಡಿಗಲ್ಲು ಹಾಕಲಾಗಿದೆ. ಈ ಮೂಲಕ ತುಮಕೂರು ವಿಶ್ವದ ಭೂಪಟದಲ್ಲಿ ಕಾಣಿಸಿಕೊಳ್ಳಲಿದೆ. ತುಮಕೂರು ಜಿಲ್ಲೆಗೆ ಕಾಯಕಲ್ಪ ಮಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಸಹಕಾರ ನೀಡುತ್ತಿದೆ. 2023 ರಲ್ಲಿ ಈ ರಾಜ್ಯದ ಜನತೆಗೆ 5 ಗ್ಯಾರಂಟಿ ಭರವಸೆ ಕೊಟ್ಟಿದ್ದೆವು. ಆ ಐದು ಗ್ಯಾರಂಟಿ ಪರಿಪೂರ್ಣವಾಗಿ ಜಾರಿ ಮಾಡಿದ್ದು ಸಿದ್ದರಾಮಯ್ಯರ ಕಾಂಗ್ರೆಸ್ ಸರ್ಕಾರ. ಆದರೆ 10 ಕೆಜಿ ಅಕ್ಕಿ ಕೊಡಲು ಆಗಿಲ್ಲ, ಬದಲಾಗಿ ದುಡ್ಡು ಕೊಟ್ಟಿದ್ದೇವೆ ಎಂದು ನುಡಿದರು. ಇದನ್ನೂ ಓದಿ: ರಾಜ್ಯದಲ್ಲಿ ಹಣ, ಹೆಂಡ ಹಂಚಿಕೆಯಲ್ಲಿ ಬಿಜೆಪಿಗೆ ಕಾಂಗ್ರೆಸ್ ಪೈಪೋಟಿ ನೀಡಿದೆ: ಚರ್ಚೆಗೆ ಗ್ರಾಸವಾಯ್ತು ಬಿಕೆ ಹರಿಪ್ರಸಾದ್ ಮಾತು
ಮುಂದಿನ ದಿನಗಳಲ್ಲಿ ತುಮಕೂರು ಜಿಲ್ಲೆ ಬಹಳ ವೇಗವಾಗಿ ಬೆಳೆಯಲಿ. ತುಮಕೂರು ಜಿಲ್ಲೆಗೆ ಮೆಟ್ರೋ ರೈಲು ಬರುವ ಕಾಮಗಾರಿಯ ಡಿಪಿಆರ್ ನಡೀತಿದೆ ಎಂದರು. ಅಲ್ಲದೇ ತುಮಕೂರು, ಬೆಂಗಳೂರಿನಿಂದ ಕೇವಲ 65 ಕಿಮಿ ದೂರದಲ್ಲಿದೆ. ಹಾಗಾಗಿ ತುಮಕೂರಿಗೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಬೇಕು. ರಾಜ್ಯದ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನ ಇಲ್ಲಿಗೆ ಕೊಡಬೇಕು ಎಂದು ಸಿಎಂ, ಡಿಸಿಎಂಗೆ ವೇದಿಕೆಯಲ್ಲೇ ಮನವಿ ಮಾಡಿದರು. ಇದನ್ನೂ ಓದಿ: ಪವನ್ ಕಲ್ಯಾಣ್ ಮನವಿ – ಆಂಧ್ರದ ಅರಣ್ಯ ಸಿಬ್ಬಂದಿಗೆ ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ತರಬೇತಿ
ಮುಂದುವರಿದು… ಪಾವಗಡದಲ್ಲಿ ಭದ್ರಾದಿಂದ ಕುಡಿಯುವ ನೀರು ಬಂದಿದೆ. ಸ್ಮಾರ್ಟ್ ಸಿಟಿ ಅಡಿಯಲ್ಲಿ ಕೆಲವೇ ಕೆಲವು ವಾರ್ಡ್ ಅಭಿವೃದ್ಧಿ ಆಗಿದೆ. ಇನ್ನುಳಿದ ವಾರ್ಡ್ ಅಭಿವೃದ್ಧಿಗೆ 500 ಕೋಟಿ ರೂ. ನೀಡಬೇಕು ಎಂದು ಕೋರಿದರು. ಇದನ್ನೂ ಓದಿ: ಸಚಿವ ಸ್ಥಾನ ಉಳಿಸಿಕೊಳ್ಳಲು 1 ತಿಂಗಳ ಮೊದಲೇ ರಿಪೋರ್ಟ್ ಕಾರ್ಡ್ ಸಲ್ಲಿಸಿದ ಬೋಸರಾಜು