ಬೆಂಗಳೂರು: ಕಾಂಗ್ರೆಸ್ ಪಕ್ಷದ ನಿರ್ಣಯವೇ ಜೈ ಭೀಮ್, ಜೈ ಬಾಪು, ಜೈ ಸಂವಿಧಾನ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ಹೇಳಿದರು.
ಡಿಕೆಶಿಯಿಂದ ಸಂವಿಧಾನ ಬದಲಾವಣೆ ಬಗ್ಗೆ ವಿವಾದಾತ್ಮಕ ಹೇಳಿಕೆ ಎಂಬ ಬಿಜೆಪಿ (BJP) ಆರೋಪದ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದರು. ಸಂವಿಧಾನಕ್ಕೆ ನಾವು ಬದ್ಧರಾಗಿದ್ದೇವೆ. ಸಂವಿಧಾನದ ರಕ್ಷಣೆಗೂ ಕಾಂಗ್ರೆಸ್ ಬದ್ಧವಾಗಿದೆ. ಡಿಕೆಶಿ ಹೇಳಿಕೆ ನಾನು ನೋಡಿಲ್ಲ. ನೀವು ಹೇಳಿದ ಮೇಲೆ ಗೊತ್ತಾಗಿದ್ದು ಎಂದರು. ಇದನ್ನೂ ಓದಿ: ಮುಸ್ಲಿಮರ ತುಷ್ಟಿಕರಣಕ್ಕೆ ಕಾಂಗ್ರೆಸ್‌ನಿಂದ ಸಂವಿಧಾನ ಬದಲಾವಣೆ – ಇದು ನಮ್ಮ ದೇಶದ ದುರಂತ: ಸಿಟಿ ರವಿ
ಈ ಬಗ್ಗೆ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ (H C Mahadevappa) ಪ್ರತಿಕ್ರಿಯಿಸಿ, ಡಿಕೆಶಿ ಏನು ಹೇಳಿದ್ದಾರೋ ಗೊತ್ತಿಲ್ಲ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಘೋಷಣೆ, ನಿರ್ಣಯವೇ ಜೈ ಬಾಪು, ಜೈ ಭೀಮ್, ಜೈ ಸಂವಿಧಾನವಾಗಿದೆ. ಹಾಗಾಗಿ ಸಂವಿಧಾನ ಬದಲಾವಣೆ ಪ್ರಶ್ನೆ ಎಲ್ಲಿ ಬರುತ್ತದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಜೆ.ಪಿ ನಡ್ಡಾ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡ್ತೀನಿ: ಡಿಕೆಶಿ