ಬೆಂಗಳೂರು: ಆದಾಯ ತೆರಿಗೆ ಇಲಾಖೆ (IT Department) ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು ಸೀಜ್ ಮಾಡಿರೋದು ರಾಜಕೀಯ ಉದ್ದೇಶದಿಂದ ಅಂತ ಗೃಹ ಸಚಿವ ಪರಮೇಶ್ವರ್ (G Parameshwara) ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕಾಂಗ್ರೆಸ್ ಪಕ್ಷಕ್ಕೆ (Congress Party) ಹೇಗಾದರೂ ಮಾಡಿ ತೊಂದರೆ ಕೊಡಬೇಕು ಅಂತ ನಿರ್ಧಾರ ಮಾಡಿದ ಹಾಗೆ ಇದೆ. ಸುಪ್ರೀಂ ಕೋರ್ಟ್ (Supreme Court) ಚುನಾವಣೆ ಬಾಂಡ್ ತೆಗೆದುಕೊಳ್ಳಬಾರದು ಅಂತ ಆದೇಶ ಮಾಡಿದೆ. ಇಲ್ಲಿವರೆಗೂ ತೆಗೆದುಕೊಂಡಿರೋ ಬಾಂಡ್‌ಗಳ ಬಗ್ಗೆ ಮಾಹಿತಿ ಕೊಡುವಂತೆ ಸುಪ್ರೀಂ ಕೋರ್ಟ್ ಕೇಳಿದೆ. ಈ ಹಿನ್ನೆಲೆಯಲ್ಲಿ ಅವರು ಸೀಜ್ ಮಾಡಿದ್ದಾರೆ ಅನ್ನಿಸುತ್ತೆ ಎಂದು ಕಿಡಿ ಕಾರಿದ್ದಾರೆ.
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಖಾತೆಗಳನ್ನ ಸೀಜ್ ಮಾಡೋ ಅವಶ್ಯಕತೆ ಇರಲಿಲ್ಲ. ಅಕೌಂಟ್ ವಿವರ ಕೇಳಬಹುದಿತ್ತು. ಸೀಜ್ ಮಾಡೋ ಅವಶ್ಯಕತೆ ಇರಲಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಮುಖವಾಣಿ; ಕೇರಳದ ʻಜೈಹಿಂದ್ ಟಿವಿʼ ಚಾನೆಲ್ ಬ್ಯಾಂಕ್ ಖಾತೆಗಳು ಫ್ರೀಜ್!
ಐಟಿಗೆ ಅರಿವಾದ ಮೇಲೆ ಅಕೌಂಟ್ ಓಪನ್ ಮಾಡಿದ್ದಾರೆ. ಇದೆಲ್ಲವನ್ನು ನೋಡಿದ್ರೆ ಉದ್ದೇಶ ಪೂರ್ವಕವಾಗಿ ಕೇಂದ್ರ ಮಾಡ್ತಿದೆ ಅಂತ ನಮಗೆ ಅನಿಸುತ್ತದೆ. ಈ ಸಂಧರ್ಭದಲ್ಲಿ ಮಾಡಿದಾಗ ಉದ್ದೇಶಪೂರ್ವಕವಾಗಿ ಚುನಾವಣೆಗೆ ತೊಂದರೆ ಮಾಡೋದಕ್ಕೆ ಮಾಡ್ತಿದ್ದಾರೆ ಅಂತ ಅನ್ನಿಸುತ್ತೆ. ಬರೀ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಹೀಗೆ, ಆದರೆ ಇದು ಉದ್ದೇಶಪೂರ್ವಕವಾಗಿ ಆಗಿದೆ ಅಂತ ಅನ್ನಿಸುತ್ತದೆ. ಇದರಲ್ಲಿ ರಾಜಕೀಯ ಇದೆ ಅಂತ ಅನ್ನಿಸುತ್ತೆ ಅಂತ ಕೇಂದ್ರದ ವಿರುದ್ದ ಪರಮೇಶ್ವರ್ ವಾಗ್ದಾಳಿ ನಡೆಸಿದ್ದಾರೆ.
115 ಕೋಟಿ ಹಣ ಫ್ರೀಜ್:
ಚುನಾವಣಾ ಬಾಂಡ್‌ಗಳನ್ನು ಸುಪ್ರೀಂ ಕೋರ್ಟ್ ನಿಷೇಧಿಸಿದ ಮರು ದಿನವೇ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಮೂರು ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ ಬೆಳವಣಿಗೆ ನಡೆದಿದೆ. ಸಾರ್ವಜನಿಕರಿಂದ ದೇಣಿಗೆ ರೂಪದಲ್ಲಿ ಸಂಗ್ರಹಿಸಲಾದ 210 ಕೋಟಿ ರೂ.ಗಳಿಗೆ ತೆರಿಗೆ ಪಾವತಿಸದ ಕಾರಣ ಆದಾಯ ತೆರಿಗೆ ಇಲಾಖೆಯು ಕಾಂಗ್ರೆಸ್‌ಗೆ ಸೇರಿದ ಮೂರು ಬ್ಯಾಂಕ್ ಖಾತೆಗಳನ್ನು ಗುರುವಾರ ರಾತ್ರಿಯಿಂದಲೇ ಮುಟ್ಟುಗೋಲು ಹಾಕಿಕೊಂಡಿರುವುದು ವರದಿಯಾಗಿದೆ. ಆದಾಯ ತೆರಿಗೆ ಮೇಲ್ಮನವಿ ನ್ಯಾಯ ಮಂಡಳಿ ಆದೇಶದ ಬಳಿಕ ಬ್ಯಾಂಕ್ ಖಾತೆಗಳು ಚಾಲ್ತಿಗೆ ಬಂದಿದ್ದರೂ 115 ಕೋಟಿ ರೂ. ಹಣವನ್ನು ದಂಡದ ರೂಪದಲ್ಲಿ ಫ್ರೀಜ್ ಮಾಡಲಾಗಿದೆ. 115 ಕೋಟಿ ರೂ. ಹಣವನ್ನು ಬ್ಯಾಂಕ್ ಖಾತೆಯಲ್ಲಿ ಉಳಿಸಿ, ಪಕ್ಷದ ರಾಜಕೀಯ ಚಟುವಟಿಕೆಗಳಿಗೆ ಉಳಿದ ಹಣವನ್ನು ವಿನಿಯೋಗ ಮಾಡುತ್ತೇವೆ ಎಂದು ಅಜಯ್ ಮಾಕೆನ್ ಹೇಳಿದರು. ಇದಕ್ಕೆ ಸಂಬಂಧಿಸಿದಂತೆ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
`ಜೈಹಿಂದ್ ಚಾನೆಲ್’ನ ಬ್ಯಾಂಕ್ ಖಾತೆ ಫ್ರೀಜ್:
ಕಾಂಗ್ರೆಸ್ ಮುಖವಾಣಿ ಸಂಸ್ಥೆ ಕೇರಳದ `ಜೈಹಿಂದ್ ಚಾನೆಲ್’ನ ಬ್ಯಾಂಕ್ ಖಾತೆಗಳನ್ನು ಆದಾಯ ತೆರಿಗೆ ಇಲಾಖೆ ಸ್ಥಗಿತಗೊಳಿಸಿದೆ ಎಂದು ಆಪ್ತ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: Loksabha Election: ಸೋಮಣ್ಣ ಬಳಿಕ ಸಿ.ಟಿ ರವಿ, ಸುಧಾಕರ್, ಶ್ರೀರಾಮುಲು ಕಸರತ್ತು