ಪರಮೇಶ್ವರ್ ಸಿಎಂ ಆಗ್ತಾರೆ; AICC ಸೂಚನೆಗೆ ಹೆದರಲ್ಲ: ಕೆಎನ್ ರಾಜಣ್ಣ ಸಂಚಲನದ ಹೇಳಿಕೆ

Public TV
1 Min Read
KN Rajanna G Parameshwara

ತುಮಕೂರು: ಗೃಹ ಸಚಿವ ಜಿ ಪರಮೇಶ್ವರ್‌ಗೆ (G Parameshwara) ಸಿಎಂ (CM) ಆಗುವ ಎಲ್ಲಾ ಅವಕಾಶ ಇದ್ದು ಅವರು ಮುಂದೆ ಮುಖ್ಯಮಂತ್ರಿ ಆಗುವ ಅದೃಷ್ಟ ಹೊಂದಿದ್ದಾರೆ ಎಂದು ಸಹಕಾರಿ ಸಚಿವ ಕೆಎನ್ ರಾಜಣ್ಣ (KN Rajanna) ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ.

ತುಮಕೂರಿನಲ್ಲಿ (Tumakuru) ಪೊಲೀಸ್ ವಸತಿ ಗೃಹ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿ ಪರಮೇಶ್ವರ್ ಜೊತೆ ವೇದಿಕೆ ಹಂಚಿಕೊಂಡಿದ್ದ ಕೆಎನ್ ರಾಜಣ್ಣ ಗೃಹಸಚಿವರ ಪರ ಬ್ಯಾಟ್ ಬೀಸಿದ್ದಾರೆ. ಪರಮೇಶ್ವರ್ ಈಗ ಹೋಮ್ ಮಿನಿಸ್ಟರ್ ಇದ್ದು ಮುಂದೆ ಏನು ಬೇಕಾದ್ರೂ ಆಗಬಹುದು ಎಂದು ಭವಿಷ್ಯ ನುಡಿದಿದ್ದಾರೆ.

KN Rajanna G Parameshwara 1

ನಮ್ಮ ಜಿಲ್ಲೆಯಿಂದ ಒಬ್ಬ ಮುಖ್ಯಮಂತ್ರಿ ಆಗ್ತಾರೆ ಅಂದ್ರೆ ನಾವೆಲ್ಲಾ ಸಂತೋಷ ಪಡುತ್ತೇವೆ. ಪರಮೇಶ್ವರ್ ಸಿಎಂ ಆದರೆ ನಾವೆಲ್ಲಾ ಮುಖ್ಯಮಂತ್ರಿ ಆದಂತೆ ಎಂದು ಭಾವಿಸುತ್ತೇನೆ ಎಂದು ಪರಮೇಶ್ವರ್ ಗುಣಗಾನ ಮಾಡಿದ್ದಾರೆ.

ನಾನು ಮತ್ತು ಜಿ ಪರಮೇಶ್ವರ್ ಸಿದ್ದರಾಮಯ್ಯ ಇರೋವರೆಗೆ ನಾವೆಲ್ಲಾ ಸಿದ್ದರಾಮಯ್ಯ ಪರ. ಸಿದ್ದರಾಮಯ್ಯ ಹೊರತುಪಡಿಸಿದರೆ ಪರಮೇಶ್ವರ್ ಸಿಎಂ ಆಗಬೇಕು ಅಂತ ಬಯಸುತ್ತೇವೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಹೊಸದು ಬೇಡ, ಬೊಮ್ಮಾಯಿ ಮಂಜೂರುಗೊಳಿಸಿದ ಯೋಜನೆಯ ಅನುದಾನ ನೀಡಲಿ: ವೇದವ್ಯಾಸ ಕಾಮತ್

ಪಕ್ಷದ ಕುರಿತು ಯಾವುದೇ ವಿವಾದಾತ್ಮಕ ಹೇಳಿಕೆ ಕೊಡಬಾರದು ಎಂದು ಎಐಸಿಸಿ ನಮಗೆ ಹೇಳಿದೆ. ಆದರೆ ಅದಕ್ಕೆಲ್ಲಾ ಹೆದರೋನು ನಾನಲ್ಲ ಎಂದು ಸೆಡ್ಡು ಹೊಡೆದಿದ್ದಾರೆ. 5 ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಹೇಳಿಕೆ ಕೊಟ್ಟ ಬೆನ್ನಲ್ಲೇ ಕೆಎನ್ ರಾಜಣ್ಣರ ಈ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಇದೇ ವೇಳೆ ರಾಜಣ್ಣರ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಜಿ ಪರಮೇಶ್ವರ್, ನಾನು ರಾಜಣ್ಣರಿಗೆ ಆಭಾರಿಯಾಗಿದ್ದೇನೆ. ಆ ಅದೃಷ್ಟ ಕೂಡಿ ಬರಲಿ ಎಂದು ನಾನೂ ಆಸೆಪಡುತ್ತೇನೆ ಎಂದರು. ಇದನ್ನೂ ಓದಿ: ನಮ್ಮಲ್ಲಿ ಅಸಮಾಧಾನ ಎಲ್ಲಿದೆ : ಡಿಕೆಶಿ ಪ್ರಶ್ನೆ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article