ಬೆಂಗಳೂರು: ಕರ್ನಾಟಕ ಸಹಕಾರ ಮಹಾ ಮಂಡಲ (Karnataka State Cooperative Federation) ಚುನಾವಣೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ನೇತೃತ್ವದ ತಂಡ ಗೆಲುವು ಸಾಧಿಸಿದ್ದು, ಅಧ್ಯಕ್ಷರಾಗಿ ಜಿ.ಟಿ ದೇವೇಗೌಡ (GT Devegowda) ಆಯ್ಕೆಯಾಗಿದ್ದಾರೆ.
ಜಿ.ಟಿ. ದೇವೇಗೌಡ ಅವರಿಗೆ ಅಧ್ಯಕ್ಷ ಸ್ಥಾನ ನೀಡುವ ವಿಚಾರಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಕೂಡ ಒಪ್ಪಿಗೆ ನೀಡಿದ್ದಾರೆ. ಚುನಾವಣೆಗೂ ಮುನ್ನ ಮುಖ್ಯಮಂತ್ರಿ ನಿವಾಸದಲ್ಲಿ ಈ ಸಂಬಂಧ ಮಹತ್ವದ ಸಭೆ ನಡೆದಿತ್ತು. ಸಭೆಯಲ್ಲಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಿದ್ದರು. ಜಿ.ಟಿ. ದೇವೇಗೌಡ ಅವರ ಆಯ್ಕೆಗೆ ಸಿಎಂ ಡಿಕೆಶಿ ಸಹಮತ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: SIR ಆಕ್ಷೇಪಣೆ ಅವಧಿ ವಿಸ್ತರಣೆಗೆ ಡಿಕೆ ಮನವಿ – ಕೇಂದ್ರ ಚುನಾವಣಾ ಆಯೋಗಕ್ಕೆ 2 ಪುಟಗಳ ಪತ್ರ
ಇದೀಗ ಸಹಕಾರ ಮಹಾ ಮಂಡಲದ ಅಧ್ಯಕ್ಷ ಸ್ಥಾನ ಜಿ.ಟಿ. ದೇವೇಗೌಡ ಅವರಿಗೆ ಒಲಿದಿರುವುದು ರಾಜ್ಯ ರಾಜಕೀಯದಲ್ಲಿ ಹಲವು ಚರ್ಚೆಗಳಿಗೆ ಕಾರಣವಾಗಿದೆ. ಜೆಡಿಎಸ್‌ನಿಂದ ಇತ್ತೀಚಿನ ದಿನಗಳಲ್ಲಿ ಅಂತರ ಕಾಯ್ದುಕೊಂಡಿರುವ ಜಿ.ಟಿ. ದೇವೇಗೌಡ ಅವರು ಕಾಂಗ್ರೆಸ್‌ನತ್ತ ಮುಖ ಮಾಡಲಿದ್ದಾರೆಯೇ ಎಂಬ ಪ್ರಶ್ನೆಯೂ ಮುನ್ನೆಲೆಗೆ ಬಂದಿದೆ. ಇದನ್ನೂ ಓದಿ: ಗದಗ ಜಿಲ್ಲೆಯಲ್ಲಿ ‘ಭಾರತ ಜೋಡೋ ಯುವ ಸಂಘ’ ಸ್ಥಾಪನೆಗೆ ಒತ್ತು: ಜಿಲ್ಲಾಧಿಕಾರಿ
ಇದೀಗ ಜಿಟಿ ದೇವೇಗೌಡರನ್ನು ಆಯ್ಕೆ ಮಾಡಿ ಡಿಕೆಶಿ ರಾಜಕೀಯ ಚೆಕ್‌ಮೆಟ್ ಕೊಟ್ಟಿದ್ದಾರೆ. ಅಧ್ಯಕ್ಷ ಸ್ಥಾನ ಮೂಲಕ ಕಾಂಗ್ರೆಸ್ ಕಡೆ ಜಿಟಿಡಿ ಮುಖ ಮಾಡ್ತಾರಾ ಎಂಬ ಚರ್ಚೆ ಶುರುವಾಗಿದೆ. ಮುಂದಿನ ಚುನಾವಣೆಗೆ ಕಾಂಗ್ರೆಸ್ ಸೇರ್ಪಡೆ ಆಗ್ತಾರಾ ಎಂಬ ಚರ್ಚೆ ಇದೀಗ ರಾಜಕೀಯ ವಲಯದಲ್ಲಿ ಜೋರಾಗಿದೆ. ಇದನ್ನೂ ಓದಿ: ಕ್ರಿಮಿನಾಶಕ ಸಿಂಪಡಿಸಿದ ಮೆಕ್ಕೆಜೋಳ ಸೇವಿಸಿ ಹತ್ತಾರು ಜಾನುವಾರು ಸಾವು
