– ಕೇಂದ್ರ ಸರ್ಕಾರ, ಬಿಜೆಪಿ ನಾಯಕರ ವಿರುದ್ಧ ಜಿ.ಟಿ. ದೇವೇಗೌಡ ವಾಗ್ದಾಳಿ
ಬೆಂಗಳೂರು: ಕೆಲ ದಿನಗಳ ಹಿಂದೆ ವಿಧಾನಸಭೆ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ (H.D.Kumaraswamy) ಪರಸ್ಪರ ವಾಗ್ಯುದ್ಧವನ್ನೇ ನಡೆಸಿದ್ದರು. ಆದರೆ ಜೆಡಿಎಸ್ (JDS) ಕೆಲ ನಾಯಕರು, ಕಾಂಗ್ರೆಸ್ (Congress) ಹಾಗೂ ಸಿದ್ದರಾಮಯ್ಯ ವಿಚಾರದಲ್ಲಿ ಸಾಫ್ಟ್‌ಕಾರ್ನರ್ ಹೊಂದಿದಂತೆ ಕಾಣುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ, ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ (G.T.Devegowda) ಅವರು ಸದನದಲ್ಲಿ ಕಾಂಗ್ರೆಸ್ ಸರ್ಕಾರ, ಸಿಎಂ ಸಿದ್ದರಾಮಯ್ಯ ಹಾಗೂ ಗ್ಯಾರಂಟಿಗಳ ಪರವಾಗಿ ಬ್ಯಾಟಿಂಗ್ ಮಾಡಿದರು.
ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಚರ್ಚೆ ಮೇಲೆ ಮಾತನಾಡಿದ ಜಿ.ಟಿ. ದೇವೇಗೌಡ, ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಬೆಂಬಲಿಸಬೇಕಿತ್ತು. ಕೇಂದ್ರ ಅಕ್ಕಿ ಕೊಡಬೇಕಿತ್ತು, ಆದರೆ ಕೊಡಲಿಲ್ಲ. ರಾಜ್ಯ ಸರ್ಕಾರದ ತೆರಿಗೆ ಸಂಗ್ರಹದಿಂದ ಕೇಂದ್ರ ಸರ್ಕಾರ ನಡೆಯುತ್ತಿದೆ. ಅನ್ನಭಾಗ್ಯಕ್ಕೆ ಕೇಂದ್ರ ಬೆಂಬಲ ನೀಡದೆ ಇರುವುದು ಖಂಡನೀಯ. ಐದು ಗ್ಯಾರಂಟಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಲು ಬಿಜೆಪಿಗೆ ಅಧಿಕಾರ ಇಲ್ಲ ಎಂದು ಕೇಂದ್ರ ಸರ್ಕಾರ ಹಾಗೂ ರಾಜ್ಯ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೇ, ಸರ್ಕಾರ ಐದು ಗ್ಯಾರಂಟಿ ಜಾರಿಗೆ ತಂದಿದೆ. ತಿಂಗಳಿಗೆ ಒಂದೊಂದು ಮಾಡಲಿ. ಎಲ್ಲಾ ಕಾರ್ಯಕ್ರಮ ಜಾರಿಗೆ ತರಲಿ ಎಂದು ಆಶಯ ವ್ಯಕ್ತಪಡಿಸಿದರು. ಇದನ್ನೂ ಓದಿ: ವಿರೋಧ ಪಕ್ಷದ ನಾಯಕ ಕುಮಾರಸ್ವಾಮಿ? – ಸದನದಲ್ಲಿ ಸ್ವಾರಸ್ಯಕರ ಚರ್ಚೆ
ಸಿಎಂ ಸಿದ್ದರಾಮಯ್ಯ ಪರವಾಗಿಯೂ ಜಿ.ಟಿ.ದೇವೇಗೌಡರು ಮಾತನಾಡಿದ್ದಾರೆ. ಅನ್ನಭಾಗ್ಯ ಯೋಜನೆ ಪರವಾಗಿ ಮಾತನಾಡುವಾಗ ಜಿಟಿಡಿ, ಅನ್ನಭಾಗ್ಯ ಯೋಜನೆಯ ಹಿಂದೆ ಸಿದ್ದರಾಮಯ್ಯ ಅವರ ಅನುಭವ ಇದೆ. ಬಡತನದ ಹಿನ್ನೆಲೆಯ ಸಿದ್ದರಾಮಯ್ಯ ಕುಟುಂಬದ ಬಗ್ಗೆ ನನಗೆ ಗೊತ್ತಿದೆ. ಆ ಕಾರಣಕ್ಕೆ ಸಿದ್ದರಾಮಯ್ಯ ಅನ್ನಭಾಗ್ಯ ತಂದಿದ್ದಾರೆ. ಅದಕ್ಕಾಗಿ ನಾನು ಸಿದ್ದರಾಮಯ್ಯ ಅವರನ್ನು ಅಭಿನಂದಿಸುತ್ತೇನೆ. ಸಿದ್ದರಾಮಯ್ಯ ಅವರ ಕುಟುಂಬ, ಹೊಲ, ಗದ್ದೆ ನನಗೆ ಗೊತ್ತು. ಅವರ ತುಂಬು ಕುಟುಂಬದ ಬಗ್ಗೆಯೂ ನನಗೆ ಗೊತ್ತು ಎಂದು ಹೇಳಿದರು.
ಕೇಂದ್ರ ಸರ್ಕಾರ ಅನ್ನಭಾಗ್ಯಕ್ಕೆ ಅಕ್ಕಿ ಕೊಡಲ್ಲ ಅನ್ನೋದು ಸರಿಯಲ್ಲ. ಗಾಂಧೀಜಿ ಸಹ ಅನ್ನದ ಮಹತ್ವದ ಬಗ್ಗೆ ಹೇಳಿದ್ದಾರೆ. ಹಾಗಾಗಿ ಅನ್ನಭಾಗ್ಯ ಯೋಜನೆ ಸರಿಯಾಗಿ ಜಾರಿಯಾಗಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಇಂಗ್ಲಿಷ್ ಇರೋದೇ ತಪ್ಪು ಮಾತಾಡೋಕೆ, ಕನ್ನಡ ಇರೋದು ಸರಿಯಾಗಿ ಮಾತನಾಡಲು: ಪ್ರದೀಪ್ ಈಶ್ವರ್
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]