ಮೈಸೂರು: ಮೈತ್ರಿ ವಿಚಾರದಲ್ಲಿ ಒಂದು ಕಡೆ ತಪ್ಪಾಗಿಲ್ಲ. ಎರಡು ಕಡೆ ಪಕ್ಷದಿಂದಲೂ ತಪ್ಪಾಗಿದೆ. ಆಯಾ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಬೇಕಿತ್ತು ಎಂದು ಸಚಿವ ಜಿ.ಟಿ. ದೇವೇಗೌಡ ಸ್ಫೋಟಕ ಹೇಳಿಕೆಯನ್ನು ಕೊಟ್ಟಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಜಿ.ಟಿ. ದೇವೇಗೌಡ, ಕುಮಾರಸ್ವಾಮಿ ಮುಖ್ಯಮಂತ್ರಿಯಾದಗಿನಿಂದ ಈ ರೀತಿ ಡೆಡ್‍ಲೈನ್ ಫಿಕ್ಸ್ ಮಾಡುತ್ತಿದ್ದಾರೆ. ಆದರೆ ಸರ್ಕಾರಕ್ಕೆ ಬಹುಮತ ಇದೆ. ಹೀಗಾಗಿ ಯಾವುದೇ ಕಾರಣಕ್ಕೂ ಸರ್ಕಾರಕ್ಕೆ ಆತಂಕ ಇಲ್ಲ. ಇನ್ನೂ ಲೋಕಸಭಾ ಚುನಾವಣೆಯ ಫಲಿತಾಂಶ ರಾಜ್ಯದ ಮೇಲೆ ಪರಿಣಾಮ ಬೀರಲ್ಲ. ಅದೇನಿದ್ದರೂ ಲೋಕಸಭೆಯಲ್ಲಿ ಪ್ರಧಾನ ಮಂತ್ರಿಯಾಗಲೂ ಮಾತ್ರ ನಡೆಯುತ್ತದೆ ಎಂದು ಹೇಳಿದರು.
Advertisement
Advertisement
ಮೈತ್ರಿ ವಿಚಾರದಲ್ಲಿ ಒಂದು ಕಡೆ ತಪ್ಪಾಗಿಲ್ಲ. ಎರಡು ಕಡೆ ಪಕ್ಷದಿಂದಲೂ ತಪ್ಪಾಗಿದೆ. ಆಯಾ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಬೇಕಿತ್ತು. ಆದರೆ ಯಾವ ಕ್ಷೇತ್ರಕ್ಕೆ ಯಾವ ಅಭ್ಯರ್ಥಿ ಎಂಬ ತೀರ್ಮಾನವೇ ಬಹಳ ದಿನ ನಡೆಯಿತು. ಹೀಗಾಗಿ ಮೈತ್ರಿ ಮಾಡಿಕೊಳ್ಳವ ತೀರ್ಮಾನದಲ್ಲಿ ಬಹಳ ತಡವಾಯಿತು. ತಡವಾಗಿ ಮೈತ್ರಿ ಮಾಡಿಕೊಂಡ ಕಾರಣ ಪಕ್ಷದ ಕಾರ್ಯಕರ್ತರ ನಡುವಿನ ಜಿದ್ದಾಜಿದ್ದು ಸರಿ ಮಾಡಲು ಯಾರಿಂದಲೂ ಆಗಲಿಲ್ಲ ಎಂದು ಜಿಟಿ ದೇವೇಗೌಡರು ಹೇಳಿದರು.
Advertisement
ಲೋಕಸಭಾ ಚುನಾವಣೆಯ ಮುನ್ನವೇ ನಮ್ಮ ನಾಯಕರು ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದರೆ ಈ ರೀತಿ ತಪ್ಪು ಆಗುತ್ತಿರಲಿಲ್ಲ. ಜೊತೆಗೆ ಹೆಚ್ಚು ಅನುಕೂಲವಾಗುತ್ತಿತ್ತು. ಆದರೂ ಕೆಲವು ಕಡೆ ಚೆನ್ನಾಗಿ ಮಾಡಿದ್ದಾರೆ. ನಮ್ಮ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಉದ್ಭೂರಿನಲ್ಲಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಮತ ಹಾಕಿಸಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆ ರೀತಿಯಲ್ಲೇ ಹಳೆಯ ಜಿದ್ದಿನಂತೆ ಕಾರ್ಯಕರ್ತರು ಕೆಲಸ ಮಾಡಿದ್ದಾರೆ ಎಂದರು.
Advertisement
ಎರಡು ಪಕ್ಷದವರು ಎರಡು ತಿಂಗಳ ಮುಂಚೆ ಒಟ್ಟಾಗಿ ಸೇರಿ ಮಾತಾಡಬೇಕಿತ್ತು. ಕಾಂಗ್ರೆಸ್-ಜೆಡಿಎಸ್ ಎರಡು ಪಕ್ಷ ಚರ್ಚೆ ಮಾಡಿಕೊಂಡು ಒಮ್ಮತದ ಅಭ್ಯರ್ಥಿ ಹಾಕಿದ್ದರೆ ಬಿಜೆಪಿ ರಾಜ್ಯದಲ್ಲಿ ಎಲ್ಲೂ ಗೆಲ್ಲುತ್ತಿರಲಿಲ್ಲ ಎಂದು ಜಿ.ಟಿ. ದೇವೇಗೌಡ ಹೇಳಿದರು.