ನವದೆಹಲಿ: ಸೆಪ್ಟೆಂಬರ್ 9 ರಿಂದ 10ರವರೆಗೆ ದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಯ (G20 Summit) ಹೊರತಾಗಿ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 15ಕ್ಕೂ ಹೆಚ್ಚು ದೇಶಗಳ ನಾಯಕರ ಜೊತೆಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ ಎಂದು ಕೇಂದ್ರ ಸರ್ಕಾರದ (Central Government) ಮೂಲಗಳು ತಿಳಿಸಿವೆ.
ಇಂದು ಪ್ರಧಾನಿ ಮೋದಿ ಅವರು ಮಾರಿಷಸ್, ಬಾಂಗ್ಲಾದೇಶ ಮತ್ತು ಯುಎಸ್‍ಎ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. ಬಳಿಕ ಯುಕೆ, ಜಪಾನ್, ಜರ್ಮನಿ ಮತ್ತು ಇಟಲಿ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ.
ಸೆಪ್ಟೆಂಬರ್ 10 ರಂದು ಪ್ರಧಾನಿ ಮೋದಿ ಅವರು ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಅವರೊಂದಿಗೆ ಮಧ್ಯಾಹ್ನದ ಭೋಜನದೊಂದಿಗೆ ಸಭೆ ನಡೆಸಲಿದ್ದಾರೆ. ಕೊಮೊರೊಸ್, ಟರ್ಕಿ, ಯುಎಇ, ದಕ್ಷಿಣ ಕೊರಿಯಾ, ಇಯು/ಇಸಿ, ಬ್ರೆಜಿಲ್ ಮತ್ತು ನೈಜೀರಿಯಾ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸುವುದರ ಜೊತೆಗೆ ಕೆನಡಾ ಅಧ್ಯಕ್ಷ ಜಸ್ಟಿನ್ ಟ್ರುಡೊ ಅವರೊಂದಿಗೆ ಪ್ರಧಾನಿ ಮೋದಿ ಫುಲ್-ಸೈಡ್ ಸಭೆಯನ್ನು ನಡೆಸಲಿದ್ದಾರೆ. ಇದನ್ನೂ ಓದಿ: ನಿನ್ನನ್ನು ಚಂದ್ರಯಾನ-4ರಲ್ಲಿ ಕಳುಹಿಸುತ್ತೇನೆ: ಮಹಿಳೆ ಮನವಿಗೆ ಖಟ್ಟರ್ ಹಾಸ್ಯ
ಜಿ20 ನಾಯಕರ ಶೃಂಗಸಭೆಯಲ್ಲಿ 30ಕ್ಕೂ ಹೆಚ್ಚು ರಾಷ್ಟ್ರಗಳ ಮುಖ್ಯಸ್ಥರು ಮತ್ತು ಯುರೋಪಿಯನ್ ಒಕ್ಕೂಟದ ಉನ್ನತ ಅಧಿಕಾರಿಗಳು ಮತ್ತು ವಿಶೇಷ ಆಹ್ವಾನಿತ ಅತಿಥಿ ರಾಷ್ಟ್ರಗಳು ಮತ್ತು 14 ಅಂತರರಾಷ್ಟ್ರೀಯ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಲಿದ್ದಾರೆ.
Web Stories