ನವದೆಹಲಿ: ಜಾಗತಿಕ ಜೈವಿಕ ಇಂಧನ ಮೈತ್ರಿಕೂಟವನ್ನು (Biofuels Alliance) ಭಾರತ ಆರಂಭಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶನಿವಾರ ಘೋಷಿಸಿದ್ದಾರೆ. ಜಿ20 ರಾಷ್ಟ್ರಗಳು ಈ ಮೈತ್ರಿಗೆ ಸೇರುವಂತೆ ವಿಶ್ವದ ನಾಯಕರಿಗೆ ಆಹ್ವಾನ ನೀಡಿದ್ದಾರೆ.
ಜಿ20 ಶೃಂಗಸಭೆಯ (G20 Summit) ಅಧಿವೇಶನದಲ್ಲಿ ‘ಒಂದು ಭೂಮಿ’ (One Earth) ವಿಷಯದ ಕುರಿತು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಜಾಗತಿಕವಾಗಿ ಪೆಟ್ರೋಲ್ನಲ್ಲಿ ಎಥನಾಲ್ ಮಿಶ್ರಣವನ್ನು 20%ಕ್ಕೆ ತರುವ ತಮ್ಮ ಮನವಿಯೊಂದಿಗೆ ಮೈತ್ರಿಕೂಟಕ್ಕೆ ಸೇರಲು ಜಿ20 ರಾಷ್ಟ್ರಗಳನ್ನು ಕೇಳಿಕೊಂಡಿದ್ದಾರೆ.
Advertisement
Advertisement
ಇಂದು ಇಂಧನ ಮಿಶ್ರಣ ಕ್ಷೇತ್ರದಲ್ಲಿ ಎಲ್ಲಾ ದೇಶಗಳು ಒಟ್ಟಾಗಿ ಕೆಲಸ ಮಾಡುವುದು ಅಗತ್ಯವಾಗಿದೆ. ಜಾಗತಿಕ ಮಟ್ಟದಲ್ಲಿ ಪೆಟ್ರೋಲ್ನಲ್ಲಿ ಎಥನಾಲ್ ಮಿಶ್ರಣವನ್ನು 20% ವರೆಗೆ ತರುವುದು ನಮ್ಮ ಪ್ರಸ್ತಾಪವಾಗಿದೆ. ಅಥವಾ ಪರ್ಯಾಯವಾಗಿ, ಜಾಗತಿಕ ಒಳಿತಿಗಾಗಿ ನಾವು ಮತ್ತೊಂದು ಮಿಶ್ರಣವನ್ನು ಅಭಿವೃದ್ಧಿಪಡಿಸಲು ಕೆಲಸ ಮಾಡಬಹುದು. ಇದು ಸ್ಥಿರವಾದ ಇಂಧನ ಪೂರೈಕೆಯನ್ನು ಖಾತ್ರಿಪಡಿಸುತ್ತದೆ ಮತ್ತು ಹವಾಮಾನ ಭದ್ರತೆಗೆ ಕೊಡುಗೆ ನೀಡುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಜಿ20 ಸಭೆಯಲ್ಲಿ ರಷ್ಯಾ-ಉಕ್ರೇನ್ ವಾರ್; ವಿಶ್ವ ನಾಯಕರ ಘೋಷಣೆಯೇನು?
Advertisement
Advertisement
ಅಧಿವೇಶನದಲ್ಲಿ ಸೌದಿ ಅರೇಬಿಯಾದ ರಾಜ ಮೊಹಮ್ಮದ್ ಬಿನ್ ಸಲ್ಮಾನ್, ಅಮೆರಿಕದ ಅಧ್ಯಕ್ಷ ಜೋ ಬೈಡೆನ್, ಬ್ರಿಟನ್ ಪ್ರಧಾನಿ ರಿಷಿ ಸುನಕ್ ಸೇರಿದಂತೆ ಇತರರು ಇದ್ದರು. ಇದನ್ನೂ ಓದಿ: G20 ಒಕ್ಕೂಟಕ್ಕೆ ಆಫ್ರಿಕನ್ ಯೂನಿಯನ್ ಸೇರ್ಪಡೆ
Web Stories