Advertisements

ಮಹಿಳೆಯರ ಮೇಲೆ ತಾಲಿಬಾನ್ ವಿಧಿಸುತ್ತಿರುವ ನಿರ್ಬಂಧ ಖಂಡಿಸಿದ G7

ಬರ್ಲಿನ್: ತಾಲಿಬಾನ್ ಸರ್ಕಾರ ಅಫ್ಘಾನ್‍ನಲ್ಲಿರುವ ಮಹಿಳೆಯರ ಮೇಲೆ ನಿರ್ಬಂಧಗಳನ್ನು ಹೆಚ್ಚು ವಿಧಿಸುತ್ತಿರುವುದನ್ನು ಏಳು ಕೈಗಾರಿಕೀಕರಣಗೊಂಡ ರಾಷ್ಟ್ರಗಳು(G7) ಖಂಡಿಸಿದೆ.

Advertisements

ಮಹಿಳೆಯರು ಮತ್ತು ಹುಡುಗಿಯರ ಮೇಲಿನ ನಿರ್ಬಂಧಗಳನ್ನು ತೆಗೆದುಹಾಕಲು ತುರ್ತಾಗಿ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾವು ತಾಲಿಬಾನ್‍ಗೆ ಕರೆ ನೀಡುತ್ತೇವೆ ಎಂದು ಕೆನಡಾ, ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್, ಬ್ರಿಟನ್ ಮತ್ತು ಯುನೈಟೆಡ್ ಸ್ಟೇಟ್ಸ್‍ನ ವಿದೇಶಾಂಗ ಮಂತ್ರಿಗಳು ಗುರುವಾರ ತಿಳಿಸಿದ್ದಾರೆ. ಇದನ್ನೂ ಓದಿ: ಜಮ್ಮು-ಕಾಶ್ಮಿರದಲ್ಲಿ ಕಾಶ್ಮೀರಿ ಪಂಡಿತರ ಹತ್ಯೆ ಮುಂದುವರಿಯುತ್ತಿದೆ: ಒಮರ್ ಅಬ್ದುಲ್ಲಾ 

Advertisements

ಸಮಾಜದಲ್ಲಿ ಸಂಪೂರ್ಣವಾಗಿ, ಸಮಾನವಾಗಿ ಭಾಗವಹಿಸಲು ಎಲ್ಲರಿಗೂ ಅವಕಾಶವಿದೆ. ಆ ಹಕ್ಕು ಮತ್ತು ಸಾಮರ್ಥ್ಯವನ್ನು ತೀವ್ರವಾಗಿ ಮಿತಿಗೊಳಿಸುವುದು ಮತ್ತು ನಿರ್ಬಂಧಿತ ಕ್ರಮಗಳನ್ನು ಹೇರುವುದನ್ನು ನಾವು ಖಂಡಿಸುತ್ತೇವೆ. ಮಹಿಳೆಯರು ಮತ್ತು ಹುಡುಗಿಯರ ಹಕ್ಕುಗಳನ್ನು ನಿರ್ಬಂಧಿಸುವ ಮೂಲಕ, ತಾಲಿಬಾನ್ ಅಂತರರಾಷ್ಟ್ರೀಯ ಸಮುದಾಯದಿಂದ ತಮ್ಮನ್ನು ಮತ್ತಷ್ಟು ಪ್ರತ್ಯೇಕಿಸಿಕೊಳ್ಳುತ್ತಿದೆ ಎಂದು ವಿರೋಧ ವ್ಯಕ್ತಪಡಿಸಿದರು.

1996 ರಿಂದ 2001 ರ ಸಮಯದಲ್ಲಿ ತಾಲಿಬಾನ್ ಮಾನವ ಹಕ್ಕುಗಳನ್ನು ಉಲ್ಲಂಘಿಸಿ ಹಲವು ಕೃತ್ಯಗಳನ್ನು ಮಾಡಿತ್ತು. ಆದರೆ ಕಳೆದ ವರ್ಷ ತಾಲಿಬಾನ್ ಮತ್ತೆ ಅಧಿಕಾರವನ್ನು ವಶಪಡಿಸಿಕೊಳ್ಳಬೇಕಾದರೆ ನಾವು ಮಾನವ ಹಕ್ಕುಗಳನ್ನು ಯಾವುದೇ ಕಾರಣಕ್ಕೂ ಉಲ್ಲಂಘಿಸುವುದಿಲ್ಲ. ಶಾಂತಿಯಿಂದ ಆಡಳಿತ ನಡೆಸುತ್ತೇವೆ ಎಂದು ಭರವಸೆಯನ್ನು ಕೊಟ್ಟಿತ್ತು. ಇದನ್ನೂ ಓದಿ: ನಡು ರಸ್ತೆಯಲ್ಲಿ ಉಪನ್ಯಾಸಕನ ಬರ್ಬರ ಹತ್ಯೆ

Advertisements

ಆದರೂ ಸಹ ತಾಲಿಬಾನ್ ಅಫ್ಘನ್ ಪ್ರಜೆಗಳ ಹಕ್ಕುಗಳನ್ನು ಹೆಚ್ಚು ನಿರ್ಬಂಧಿಸಿದೆ. ಅದರಲ್ಲಿಯೂ ವಿಶೇಷವಾಗಿ ಹುಡುಗಿಯರು ಮತ್ತು ಮಹಿಳೆಯರು ಮಾಧ್ಯಮಿಕ ಶಾಲೆಗಳಿಗೆ ಮತ್ತು ಅನೇಕ ಸರ್ಕಾರಿ ಉದ್ಯೋಗಗಳಿಗೆ ಬರುವುದನ್ನು ತಡೆಯಲಾಗಿದೆ. ಈ ಹಿನ್ನೆಲೆ G7 ರಾಷ್ಟ್ರ ತಾಲಿಬಾನ್ ಸರ್ಕಾರದ ನಡವಳಿಕೆಯನ್ನು ತೀವ್ರವಾಗಿ ಖಂಡಿಸುತ್ತಿದೆ.

Advertisements
Exit mobile version