ಗದಗ: ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಲಾಲ್‍ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ ಅಂಗವಾಗಿ ಗದಗ್ ನಲ್ಲಿ ನಡೆದ ಸ್ವಚ್ಛತಾ ಶ್ರಮದಾನಕ್ಕೆ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಚರಂಡಿ ಸ್ವಚ್ಛಗೊಳಿಸುವ ಮೂಲಕ ಚಾಲನೆ ನೀಡಿದರು.
ಜಿಲ್ಲಾಡಳಿತ, ನಗರಾಭಿವೃದ್ಧಿ ಕೋಶ ಹಾಗೂ ನಗರಸಭೆ ವತಿಯಿಂದ ಸ್ವಚ್ಛತಾ ಶ್ರಮದಾನ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧಿಕಾರಿ ಹಿರೇಮಠ ಹ್ಯಾಂಡ್ ಗ್ಲೌಸ್ ಹಾಗೂ ಮಾಸ್ಕ್ ಹಾಕಿಕೊಂಡು ಪೊರಕೆ ಹಿಡಿದು ಮುಂದಾಳತ್ವ ವಹಿಸಿ ಕ್ಲೀನ್ ಮಾಡಲು ಮುಂದಾದರು. ನಗರ ಮುಳಗುಂದ ನಾಕಾ, ಹಸಿರುಕೆರಿ, ಚನ್ನಮ್ಮ ವೃತ್ತ ಸೇರಿದಂತೆ ಅನೇಕ ಕಡೆಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು.
Advertisement
Advertisement
ಈ ಮೂಲಕ ಸ್ಥಳೀಯ ಸಾರ್ವಜನಿಕರಿಗೆ ಸ್ವಚ್ಚತೆಯ ಬಗ್ಗೆ ಅರಿವು ಮೂಡಿಸಿದರು. ಪ್ರತಿಯೊಬ್ಬರೂ ಕಾಳಜಿ ನಿಷ್ಠೆಯಿಂದ ಸ್ವಚ್ಛತೆ ಕೆಲಸ ಮಾಡಬೇಕು. ಮನೆ, ಓಣಿ, ಊರು ಸುತ್ತಲಿನ ಪರಿಸರ ಹಾಗೂ ಮಾಲಿನ್ಯ ಹಾಳಾಗದಂತೆ ನೋಡಿಕೊಳ್ಳಬೇಕು. ಇದು ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಅವರುಗಳಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಹೇಳಿದರು.
Advertisement
ಈ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ್, ಉಪವಿಭಾಗಾಧಿಕಾರಿ ಪಿ.ಎಸ್ ಮಂಜುನಾಥ್, ನಗರಸಭೆ ಪೌರಾಯುಕ್ತ ಮನ್ಸೂರ ಅಲಿ ಸೇರಿದಂತೆ ವಿವಿಧ ಶಾಲಾ-ಕಾಲೇಜಿನ ಎನ್.ಸಿ.ಸಿ ಹಾಗೂ ಎನ್.ಎಸ್.ಎಸ್ ಸ್ವಯಂ ಸೇವಕರು ಇದರಲ್ಲಿ ಪಾಲ್ಗೊಂಡಿದ್ದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv