ಗದಗ: ಜಿಲ್ಲೆ ರೋಣ ತಾಲೂಕಿನ ಮುಶಿಗೇರಿ ಗ್ರಾಮದ ವ್ಯಕ್ತಿಯೊಬ್ಬರಿಗೆ ನಿಪಾ ವೈರಸ್ ಕಾಣಿಸಿಕೊಂಡಿಲ್ಲ ಎಂದು ಜಿಮ್ಸ್ ನಿರ್ದೇಶಕ ಪಿ.ಎಸ್.ಭೂಸರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಗಂಗಾಧರ್ ಎಂಬವರಿಗೆ ನಿಪಾ ವೈರಸ್ ಕಾಣಿಸಿಕೊಂಡಿದೆ ಎಂಬ ಶಂಕೆಯಿಂದ ಗದಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೀಗಾಗಿ ಅವರ ರಕ್ತದ ಮಾದರಿಯನ್ನು ಪುಣೆಯ ನ್ಯಾಷನಲ್ ಇನ್ಸ್‍ಟ್ಯೂಟ್ ಆಫ್ ವೈರಲಾಜಿ ಲ್ಯಾಬ್‍ಗೆ ಕಳುಹಿಸಲಾಗಿತ್ತು. ಫಲಿತಾಂಶ ಬಂದಿದ್ದು, ಗಂಗಾಧರ್ ಅವರಿಗೆ ನಿಪಾ ವೈರಸ್ ಕಾಣಿಸಿಕೊಂಡಿಲ್ಲ, ಜಿಲ್ಲೆಯ ಜನರು ಆತಂಕ ಪಡಬೇಕಾಗಿಲ್ಲ ಎಂದು ವೈದ್ಯ ಭೂಸರೆಡ್ಡಿ ಹೇಳಿದ್ದಾರೆ. ಇದನ್ನು ಓದಿ: ನಿಪಾ ವೈರಸ್ ಬಾವಲಿಗಳಿಂದ ಬರಲ್ಲ -ವರದಿಯಲ್ಲಿ ಸಾಬೀತು
Advertisement
ಗಂಗಾಧರ್ ಅವರು ಕಳೆದ 6 ತಿಂಗಳಿನಿಂದ ಕೇರಳದಲ್ಲಿ ಕೆಲಸ ಮಾಡುತ್ತಿದ್ದರು. ನಿಪಾ ವೈರಸ್ ಹಾವಳಿ ಹೆಚ್ಚಾಗಿದ್ದರಿಂದ ಅವರು ತಮ್ಮ ಗ್ರಾಮಕ್ಕೆ ಬಂದಿದ್ದರು. ಒಂದು ವಾರದಿಂದ ಜ್ವರ, ಕೆಮ್ಮು, ತಲೆಸುತ್ತು ಕಾಣಿಸಿಕೊಂಡಿದ್ದರಿಂದ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ನಿಪಾ ಶಂಕೆ ವ್ಯಕ್ತವಾಗಿದ್ದರಿಂದ ರಕ್ತದ ಮಾದರಿಯನ್ನು ಪುಣೆಗೆ ಕಳುಹಿಸಲಾಗಿತ್ತು. ಸದ್ಯ ಗಂಗಾಧರ್ ರಕ್ತದಲ್ಲಿ ನಿಪಾ ವೈರಸ್ ಇಲ್ಲವೆಂದು ಎಂದು ರಿಪೋರ್ಟ್ ಮೂಲಕ ಸ್ಪಷ್ಟವಾಗಿದೆ.