ಗದಗ: ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲೆ ನಡೆದ ಹಲ್ಲೆ ಖಂಡಿಸಿ ಇಂದು ದೇಶಾದ್ಯಂತ ಖಾಸಗಿ ವೈದ್ಯರು ಕರೆ ನೀಡಿರುವ ಪ್ರತಿಭಟನೆಗೆ ಬೆಂಬಲವಾಗಿ ಗದಗ ಜಿಲ್ಲೆಯಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಜೂನ್ 10 ರಂದು ಕೋಲ್ಕತ್ತಾದಲ್ಲಿ ಜೂನಿಯರ್ ಡಾಕ್ಟರ್ ಪರಿಭಾ ಮುಖರ್ಜಿ ಎಂಬವವರ ಮೇಲೆ ಮಾರಣಾಂತಿಕ ಹಲ್ಲೆಯಾಗಿತ್ತು. ಈ ಘಟನೆಯನ್ನು ಖಂಡಿಸಿ ಇಂದು ಗದಗಿನ ಜಿಮ್ಸ್ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿಗಳು ಹಣೆಗೆ ಪಟ್ಟಿ ಹಾಗೂ ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.
Advertisement
Advertisement
ಈ ವೇಳೆ ಕರ್ನಾಟಕ ವೈದ್ಯಕೀಯ ಸಂಘದ ರಾಜ್ಯಾಧ್ಯಕ್ಷ ಡಾ.ಅನ್ನದಾನಿ ಮೇಟಿ ಮಾತನಾಡಿ, ವೈದ್ಯರ ಮೇಲಿನ ಹಲ್ಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕಠಿಣ ಕಾನೂನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು. ಅಲ್ಲದೆ ಈಗ ನಡೆದಿರೋ ಘಟನೆಯಲ್ಲಿ ಭಾಗಿಯಾದವರಿಗೆ ಕಾನೂನು ಪ್ರಕಾರ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸಿದರು.