ಗದಗ: ಜಿಲ್ಲೆಯ ಪ್ರಮುಖ ಕೇಂದ್ರ ಸ್ಥಾನದಲ್ಲಿರುವ ಜಿಮ್ಸ್ ಆಸ್ಪತ್ರೆಯಲ್ಲಿ ಇಂದು ಮೂರು ಗಂಟೆಗಳ ಕಾಲ ಪವರ್ ಕಟ್ ಆಗಿದ್ದರಿಂದ ರೋಗಿಗಳು ನರಳಾಡಿದ್ದಾರೆ. ಕಳೆದೆರೆಡು ದಿನಗಳಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಪವರ್ ಕಟ್ ಸಮಸ್ಯೆ ಉಂಟಾಗುತ್ತಿದ್ದು, ಆಸ್ಪತ್ರೆಯ ಆಡಳಿತ ಮಂಡಳಿ ಯಾವುದೇ ಪರಿಹಾರ ಕ್ರಮವನ್ನು ಕೈಗೊಂಡಿಲ್ಲ.
ಆಸ್ಪತ್ರೆಯ ಎಲ್ಲಾ ವಾರ್ಡ್‍ಗಳಲ್ಲಿರುವ ರೋಗಿಗಳು ಕತ್ತಲಲ್ಲೇ ಪರದಾಡುತ್ತಾ ಚಿಕಿತ್ಸೆಗಾಗಿ ಕಾದುಕುಳಿತ್ತಿದ್ದಾರೆ. ಸೋಮವಾರವೂ ಆಸ್ಪತ್ರೆಯಲ್ಲಿ ಬೆಳಿಗ್ಗೆ 9 ರಿಂದ 1 ಗಂಟೆ ವರೆಗೆ ಸತತವಾಗಿ ಮೂರು ಗಂಟೆಗಳ ಕಾಲ ಪವರ್ ಕಟ್ ಮಾಡಲಾಗಿದೆ.
Advertisement
ಹುಬ್ಬಳ್ಳಿ ಯಿಂದ ಹೊಸಪೇಟೆ ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ರಸ್ತೆ ಕಾಮಗಾರಿ ಆರಂಭವಾಗಿದೆ. ಅದಕ್ಕೆ ಹೆದ್ದಾರಿ ಪಕ್ಕದ ವಿದ್ಯುತ್ ಕಂಬಗಳನ್ನು ಸ್ಥಳಾಂತರ ಮಾಡಲಾಗುತ್ತಿದ್ದು, ಹೆಸ್ಕಾಂ ನಿಂದ ಪವರ್ ಕಟ್ ಮಾಡಲಾಗಿದೆ. ಎರಡು ದಿನಗಳಿಂದ ವಿದ್ಯುತ್ ಕೈಕೊಡುತ್ತಿದ್ದರೂ ಜಿಲ್ಲಾ ಆಸ್ಪತ್ರೆಯ ಆಡಳಿತ ಮಂಡಳಿ ಪರ್ಯಾಯವಾಗಿ ಯಾವ ವ್ಯವಸ್ಥೆಯನ್ನು ಮಾಡಿಕೊಂಡಿಲ್ಲ.
Advertisement
ದಿನನಿತ್ಯ ಸಾವಿರಾರು ರೋಗಿಗಳು ಭೇಟಿ ನೀಡುವ ಈ ಆಸ್ಪತ್ರೆಯಲ್ಲಿ ಇದ್ದ ಮೂರು ಜನರೇಟರ್ ಕೈಕೊಟ್ಟಿದ್ದು ಸಮಸ್ಯೆ ಹೆಚ್ಚಾಗಲು ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. ಆಸ್ಪತ್ರೆಯಲ್ಲಿರುವ 60, 70 ಮತ್ತು 120 ಕೆವಿ ಜನರೇಟರ್‍ಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. 120 ಕೆವಿ ಜನರೇಟರ್ ಇತ್ತೀಚೆಗೆ ಖರೀದಿಸಿದ್ದರೂ ಅದು ಏಕಾಏಕಿ ಕೈಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಬಾಣಂತಿಯರ ವಾರ್ಡ್, ನವಜಾತು ಶಿಶು ಕೇಂದ್ರ, ಐಸಿಯು ವಾರ್ಡ್‍ಗಲ್ಲಿನ ರೋಗಿಗಳಿಗೆ ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಾಸ ಉಂಟಾಗಿದೆ. ಇದರಿಂದ ರೋಗಿಗಳಿಗೆ ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ.
Advertisement
ಜಿಲ್ಲೆಯ ಹಲವು ಪ್ರದೇಶಗಳಿಂದ ಪ್ರತಿನಿತ್ಯ ರೋಗಿಗಳು ಚಿಕಿತ್ಸೆಗಾಗಿ ಆಗಮಿಸುತ್ತಾರೆ. ಅಲ್ಲದೇ ರಕ್ತ ತಪಾಸಣೆಗಾಗಿ ಬೆಳಗ್ಗೆಯಿಂದಲೇ ನೂರಾರು ಜನರು ಸಾಲು ಗಟ್ಟಿ ನಿಂತಿರುವ ದೃಶ್ಯ ಸಾಮಾನ್ಯವಾಗಿ ಕಂಡು ಬಂರುತ್ತದೆ. ಬಡ ಜನರು ಆನಾರೋಗ್ಯ ಸಮಸ್ಯೆಯಿಂದ ಜೀವ ರಕ್ಷಣೆಗೆ ಆಸ್ಪತ್ರೆ ಬಂದರೆ ಆಸ್ಪತೆಯಲ್ಲಿ ಸೂಕ್ತ ವ್ಯವಸ್ಥೆಗಳಿಲ್ಲದೆ ಜೀವ ಕಳೆದು ಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ.
Advertisement
ಆಸ್ಪತ್ರೆಯ ಸಿಬ್ಬಂದಿಯು ಮಾನವೀಯತೆ ದೃಷ್ಟಿಯಿಂದಲೂ ರೋಗಿಗಳನ್ನು ಸಮಸ್ಯೆ ಬಗ್ಗೆ ಕೇಳುವುದಕ್ಕೆ ಹೋಗಿಲ್ಲ. ಜಿಲ್ಲಾ ಆಸ್ಪತ್ರೆಯ ಆಡಳಿತ ಅಧಿಕಾರಿಗಳ ನಿರ್ಲಕ್ಷಕ್ಕೆ ಆಕ್ರೋಶಗೊಂಡ ರೋಗಿಗಳು ಹಾಗೂ ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದು, ಸರ್ಕಾರ ಕೂಡಲೇ ಸಮಸ್ಯೆಯನ್ನು ಪರಿಹರಿಸಬೇಕೆಂದು ಆಗ್ರಹಿಸಿದ್ದಾರೆ.
https://www.youtube.com/watch?v=dOiemSbAkj0