ಗದಗ: ಜಿಲ್ಲೆಯ ಗಜೇಂದ್ರಗಡ (Gajendragad) ತಾಲೂಕಿನ ನರೇಗಲ್‌ನಲ್ಲಿರುವ ಹಾಲಕೇರಿ ಅನ್ನದಾನೇಶ್ವರ ಮಠ (Annadaneshwara Math) ಪ್ರಸಾದ ನಿಲಯ ವಕ್ಫ್ ಆಸ್ತಿ ಎಂದು ದಾಖಲಾಗಿರುವುದು ಬೆಳಕಿಗೆ ಬಂದಿದೆ. ಪ್ರಸಾದ ನಿಲಯದ 11.19 ಎಕರೆ 2019ರಲ್ಲಿ ವಕ್ಫ್ ಆಸ್ತಿ ಎಂದು ದಾಖಲಾಗಿದೆ.
ಸ್ವಾತಂತ್ರ್ಯ ಪೂರ್ವದಲ್ಲಿ ಪ್ರಾರಂಭವಾದ ಶ್ರೀ ಅಮ್ಮದಾನೇಶ್ವರ ವಿದ್ಯಾವರ್ಧಕ ಪ್ರಸಾದ ನಿಲಯ ಸಮಿತಿಯ ಉಚಿತ ಪ್ರಸಾದ ನಿಲಯಕ್ಕೆ ಸೇರಿದ 15.06 ಎಕರೆಯಲ್ಲಿ 11.19 ಎಕರೆ ವಕ್ಫ್ ಆಸ್ತಿ ಎಂದು ನಮೂದು ಆಗಿದೆ. (ಕೆ.ವಿ.ಬಿ.ಎಂ) ಕೋಡಿಕೊಪ್ಪ ವೀರಪ್ಪಜ್ಜನವರ ಹಾಗೂ ಬಾಗಲಕೋಟೆ ವೈರಾಗ್ಯದ ಮಲ್ಲಣಾರ್ಯರ ಉಚಿತ ಪ್ರಸಾದ ನಿಲಯದ ಆಸ್ತಿ ಸರ್ವೆ ನಂಬರ್ 410/2ಬಿ ಈಗ ರಹಮಾನ ಶಾವಲಿ ದರ್ಗಾ ವಕ್ಫ್ ಆಸ್ತಿ ಎಂದು ನೋಂದಣಿಯಾಗಿದೆ. ಇದನ್ನೂ ಓದಿ: ಉಡುಪಿಯಲ್ಲಿ ಸುಲ್ತಾನಪುರ ಎಂದು ಒಂದು ಹಳ್ಳಿಯನ್ನೆ ನಿರ್ಮಾಣ ಮಾಡಿದ್ದಾರೆ: ಶೋಭಾ ಕರಂದ್ಲಾಜೆ
Advertisement
Advertisement
ಲಿಂಗೈಕ್ಯ ಡಾ. ಅಭಿನವ ಅನ್ನದಾನ ಸ್ವಾಮೀಜಿಗಳು ಶ್ರೀಮಠದ ಪೀಠಾಧಿಪತಿಗಳಾಗಿದ್ದಾಗ ಪಹಣಿಯ ಕಾಲಂ ನಂ. 11ರಲ್ಲಿ 2019-2020 ರಲ್ಲಿ ರೆಹಮಾನ ಶಾವಲಿ ದರ್ಗಾ ವಕ್ಫ್ ಆಸ್ತಿ (Waqf Property) ಎಂದು ಸೇರ್ಪಡೆಯಾಗಿದೆ. ಉಚಿತ ಪ್ರಸಾದ ನಿಲಯಕ್ಕೆ ಸ್ಥಳೀಯ ರೈತರು, ದಾನಿಗಳ ಸಹಕಾರದಿಂದ ಸಾಕಷ್ಟು ಭೂಮಿಯನ್ನು ಶ್ರೀಮಠಕ್ಕೆ ನೀಡಲಾಗಿತ್ತು. ಆದರೆ, 2019-20 ರಲ್ಲಿ ಉಚಿತ ಪ್ರಸಾದ ನಿಲಯದ 15.06 ಎಕರೆ ಆಸ್ತಿಯಲ್ಲಿ ರೆಹಮಾನ ಶಾವಲಿ ದರ್ಗಾ ವಕ್ಫ್ ಆಸ್ತಿ ಎಂದು ನಮೂದಾಗಿದ್ದರಿಂದ ಇದು ಭಕ್ತರು ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಹಿಂದಿನ ಪೀಠಾಧಿಪತಿಗಳಾಗಿದ್ದ ಡಾ. ಅಭಿನವ ಅನ್ನದಾನ ಸ್ವಾಮೀಜಿಗಳು ಕಾನೂನಾತ್ಮಕ ಹೋರಾಟಕ್ಕೆ ಮುಂದಾಗಿದ್ದರು. ಆದರೆ ಅವರು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಅದು ನೆನೆಗುದಿಗೆ ಬಿದ್ದಿದೆ. ಇದನ್ನೂ ಓದಿ: ವಕ್ಫ್ ಮಂಡಳಿಯ ಎಲ್ಲಾ ಬಗೆಯ ಜಮೀನು ನೋಂದಣಿ ಸ್ಥಗಿತಗೊಳಿಸಲು ಸೂಚಿಸಿ: ಜೆಪಿಸಿಗೆ ಅಶೋಕ್ ಮನವಿ
Advertisement