ಗದಗ: ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ಬೆಣ್ಣೆಹಳ್ಳ (Bennehalla) ಹಾಗೂ ಮಲಪ್ರಭಾ ನದಿಯಲ್ಲಿ (Malaprabha River) ಪ್ರವಾಹ ಎದುರಾಗಿದೆ. ರೋಣ ತಾಲೂಕಿನ ಮೆಣಸಗಿ ಬಳಿ ಅನೇಕ ಜಮೀನುಗಳು ಜಲಾವೃತವಾಗಿದ್ದು, ಬೆಳೆ ಕಳೆದುಕೊಂಡ ರೈತರು ಕಣ್ಣೀರಲ್ಲಿ ಕೈ ತೊಳೆಯುವಂತಾಗಿದೆ.
ಮೆಕ್ಕೆಜೋಳ, ಕಬ್ಬು, ಸೂರ್ಯಕಾಂತಿ, ಶೇಂಗಾ, ಜೋಳ ಸೇರಿದಂತೆ ಅನೇಕ ಬೆಳೆಗಳು ಜಲಾವೃತವಾಗಿವೆ. ಅಪಾರ ಪ್ರಮಾಣದ ಬೆಳೆನಾಶದಿಂದ ರೈತರು ಕಂಗಾಲಾಗಿದ್ದಾರೆ. ಮೆಕ್ಕೆಜೋಳ ಫಸಲು ಕಟಾವಿಗೆ ಬಂದ ಸಂದರ್ಭದಲ್ಲಿ ನೀರಲ್ಲಿ ಮುಳುಗಡೆಯಾಗಿದೆ. ನೀರಲ್ಲಿ ಹಾನಿಯಾದ ಫಸಲು ಹೊರ ತೆಗೆಯಲು ರೈತರು ಹರಸಾಹಸ ಪಡುತ್ತಿದ್ದಾರೆ. ಇದನ್ನೂ ಓದಿ: ಇನ್ನೊಬ್ಬರ ಬದುಕನ್ನು ಹಾಳು ಮಾಡೋರಿಗೆ ಸದ್ಬುದ್ಧಿ ಬರಲಿ: ಸಿಎಂ
ಕಳೆದ ಒಂದು ವರ್ಷದಲ್ಲಿ ಮೂರು ಬಾರಿ ಪ್ರವಾಹ ಬಂದು 3 ಬಾರಿಯೂ ಬೆಳೆ ಹಾನಿಯಾಗಿದೆ. ಸರ್ಕಾರದಿಂದ ನಯಾಪೈಸೆ ಪರಿಹಾರ ಬಂದಿಲ್ಲ. ಎಕರೆಗೆ ಹತ್ತಾರು ಸಾವಿರ ರೂಪಾಯಿ ಖರ್ಚುಮಾಡಿ ಸಾಲದ ಸುಳಿಗೆ ಸಿಲುಕುವಂತಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿ ಬೆಳೆಯೂ ಇಲ್ಲ. ಇತ್ತ ಸರ್ಕಾರದಿಂದ ಪರಿಹಾರವೂ ಇಲ್ಲ ಎಂದು ಸರ್ಕಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವುದು ಭಾರತದ ಹಿಂದೂಗಳಿಗೂ ಒಂದು ಪಾಠ: ಮೋಹನ್ ಭಾಗವತ್