ಗದಗ: ಜಿಲ್ಲೆಯಲ್ಲಿ ಅವಳಿ ನಗರದ 24 x 7 ಪೈಪ್‌ಲೈನ್ (Pipeline) ದುರಸ್ತಿ ವೇಳೆ ಮಣ್ಣು ಕುಸಿದು ಕಾರ್ಮಿಕರನೋರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಾಯಗೊಂಡ ಘಟನೆ ನಗರದ ಕೋರ್ಟ್ ಸರ್ಕಲ್ ಬಳಿ ನಡೆದಿದೆ.
ಘಟನೆಯಲ್ಲಿ ಗಾಯಗೊಂಡಿದ್ದ ಕಾರ್ಮಿಕ ನಜೀರ್ ಸಾಬ್ (44) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಮತ್ತೋರ್ವ ಕಾರ್ಮಿಕ ಮಂಜುನಾಥ್ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇದನ್ನೂ ಓದಿ: ದೆಹಲಿಯ CRPF ಶಾಲೆ ಬಳಿ ಭಾರೀ ಸ್ಫೋಟ
Advertisement
ನಗರದ ಕೋರ್ಟ್ ಸರ್ಕಲ್ ಬಳಿ ಗ್ಯಾಸ್ ಪೈಪ್‌ಲೈನ್ ದುರಸ್ತಿ ವೇಳೆ, ಗದಗ-ಬೆಟಗೇರಿ ಅವಳಿ ನಗರದ 24 x 7 ಪೈಪ್‌ಲೈನ್ ಹಾನಿ ಆಗಿತ್ತು. ಶನಿವಾರ ರಾತ್ರಿ ಆ ನೀರಿನ ಪೈಪ್ ದುರಸ್ತಿ ಮಾಡಲು ಈ ಇಬ್ಬರು ಕಾರ್ಮಿಕರು ಮುಂದಾಗಿದ್ದರು. ಏಕಾಏಕಿ ಭೂಮಿ ಕುಸಿತದಿಂದಾಗಿ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಸ್ಥಳೀಯರ ಕಾರ್ಯಾಚರಣೆ ಮೂಲಕ ಅವರನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಿಸದೇ ನಜೀರಸಾಬ್ ಕಾರ್ಮಿಕ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಮಂಗಳೂರು| ಮನೆಯೊಳಗೆ ಏಕಾಏಕಿ ನುಗ್ಗಿದ ಚಿರತೆ
Advertisement
Advertisement
ಈ ಘಟನೆಗೆ ನಗರಸಭೆ ಅಧಿಕಾರಿಗಳು, ನಗರಸಭೆ ಇಂಜಿನಿಯರ್ ಬಂಡಿವಡ್ಡರ್ ಹಾಗೂ ಗ್ಯಾಸ್ ಪೈಪ್‌ಲೈನ್ ಅಳವಡಿಕೆ ಕಂಪನಿ ಕಾರಣ ಎಂಬುದು ಮೃತನ ಕುಟುಂಬಸ್ಥರ ಆರೋಪವಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಗದಗ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಆದಷ್ಟು ಬೇಗ ಡಿಕೆಶಿ ಸಿಎಂ ಆಗಲಿದ್ದಾರೆ- ಶಿವಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿ ಸ್ಫೋಟಕ ಹೇಳಿಕೆ
Advertisement