‘ಗದರ್ 2′ (Gadar 2) ಸಿನಿಮಾದ ಸಕ್ಸಸ್ ನಂತರ ಸಾಕಷ್ಟು ಸಿನಿಮಾಗಳ ಆಫರ್ಸ್ ಸನ್ನಿ ಡಿಯೋಲ್‌ಗೆ (Sunny Deol) ಅರಸಿ ಬರುತ್ತಿವೆ. ಇತ್ತೀಚೆಗಷ್ಟೇ ತೆಲುಗು ನಿರ್ದೇಶಕ ಗೋಪಿಚಂದ್ ಮಲಿನೇನಿ (Gopichand Malineni) ಹೊಸ ಚಿತ್ರದ ಮುಹೂರ್ತ ಸಮಾರಂಭ ಅದ್ಧೂರಿಯಾಗಿ ಮಾಡಿದ್ದರು. ಈಗ ಈ ಚಿತ್ರಕ್ಕೆ ಸಖತ್ ಆಗಿರೋ ಟೈಟಲ್ ಅನ್ನು ಚಿತ್ರತಂಡ ಫೈನಲ್ ಮಾಡಿದೆ.
ತೆಲುಗಿನ ಕ್ರ್ಯಾಕ್, ವೀರ ಸಿಂಹ ರೆಡ್ಡಿ ಸಿನಿಮಾಗಳ ನಿರ್ದೇಶಕ ಗೋಪಿಚಂದ್ ಈಗ ಬಾಲಿವುಡ್ ನಟ ಸನ್ನಿ ಡಿಯೋಲ್ ಡೈರೆಕ್ಟ್ ಮಾಡಿದ್ದಾರೆ. ಈ ಸಿನಿಮಾ ಚಿತ್ರದ ಶೂಟಿಂಗ್ ಈಗಾಗಲೇ ಶುರುವಾಗಿದ್ದು, ಚಿತ್ರಕ್ಕೆ ‘ಜಟ್’ (Jatt) ಎಂಬ ಕ್ಯಾಚಿ ಟೈಟಲ್ ಇಟ್ಟಿದ್ದಾರೆ.
ರಣ್‌ಬೀರ್ ಕಪೂರ್ ನಟನೆಯ ‘ರಾಮಾಯಣ’ದಲ್ಲಿ ಹನುಮಾನ್ ಮತ್ತು ‘ಬಾರ್ಡರ್ 2’ ಸಿನಿಮಾಗಳು ಕೈಯಲ್ಲಿರುವ ಕಾರಣ, ಸೆಪ್ಟೆಂಬರ್ ಒಳಗೆ ‘ಜಟ್’ ಚಿತ್ರದ ಶೂಟಿಂಗ್ ಮುಗಿಯಲಿದೆ ಎನ್ನಲಾಗಿದೆ. ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್ ಮತ್ತು ಪೀಪಲ್ ಮೀಡಿಯಾ ಫ್ಯಾಕ್ಟರಿ ಜಂಟಿಯಾಗಿ ನಿರ್ಮಾಣ ಮಾಡುತ್ತಿದೆ. ಇದನ್ನೂ ಓದಿ:‘ಬಿಗ್ ಬಾಸ್’ ಖ್ಯಾತಿಯ ಹಿನಾ ಖಾನ್‌ಗೆ ಸ್ತನ ಕ್ಯಾನ್ಸರ್
‘ಜಟ್’ ಚಿತ್ರದಲ್ಲಿ ಸೈಯಾಮಿ ಖೇರ್ (Saiyami Kher) ಮತ್ತು ರೆಜಿನಾ ಕಸ್ಸಂದ್ರ (Regina (Cassandra) ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ಈ ಇಬ್ಬರೂ ಹಾಟ್ ನಟಿಯರ ಜೊತೆ ಸನ್ನಿ ಡಿಯೋಲ್ ರೊಮ್ಯಾನ್ಸ್ ಮಾಡಲಿದ್ದಾರೆ. ರಿಷಿ ಪಂಜಾಬಿ ಛಾಯಾಗ್ರಹಣ, ತಮನ್ ಎಸ್ ಸಂಗೀತ, ನವೀನ್ ನೂಲಿ ಸಂಕಲನ ಚಿತ್ರಕ್ಕಿದೆ.