ಲಕ್ನೋ: ಉತ್ತರಪ್ರದೇಶದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬಂದರೆ ರಸ್ತೆ ನಿರ್ಮಾಣಕ್ಕೆ 5 ಲಕ್ಷ ಕೋಟಿ ರೂ. ಗಳನ್ನು ವಿನಿಯೋಗಿಸಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಭರವಸೆ ನೀಡಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ರಸ್ತೆ ನಿರ್ಮಾಣ ಯೋಜನೆಗಳಿಗಾಗಿ, ಕೇಂದ್ರ ಸರ್ಕಾರವು ಮುಂದಿನ 5 ವರ್ಷಗಳಲ್ಲಿ 5 ಲಕ್ಷ ಕೋಟಿ ರೂ. ಅನುದಾನ ನೀಡಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯಿಂದ ದೆಹಲಿಯಲ್ಲಿ ಮೂಲಸೌಕರ್ಯ ಸುಧಾರಿಸಿದೆ: ಅಮಿತ್ ಶಾ
ಜಗದೀಸ್‌ಪುರ, ಬಾಬುಗಂಜ್, ಉಂಚಹಾರ್, ಅಲ್ಲಾಪುರ್‌ನಲ್ಲಿ ಬೈಪಾಸ್ ರಸ್ತೆ ಶಂಕುಸ್ಥಾಪನೆ ನೆರವೇರಿಸಿ ನಂತರ ಮಾತನಾಡಿದ ಅವರು, ರಾಜ್ಯದ ರಸ್ತೆ ಯೋಜನೆಗಳಿಗಾಗಿ 5 ಲಕ್ಷ ಕೋಟಿ ರೂ. ಹೂಡಿಕೆ ಮಾಡಲಾಗುತ್ತದೆ. ರಸ್ತೆಗಳನ್ನು ಅಮೆರಿಕಾದ ರಸ್ತೆಗಳಷ್ಟೇ ಉತ್ತಮವಾಗಿ ನಿರ್ಮಿಸುತ್ತೇವೆ ಎಂದು ಹೇಳಿದ್ದಾರೆ.
ಯೋಗಿ ಆದಿತ್ಯನಾಥ್ ಮತ್ತು ಕೇಶವ ಮೌರ್ಯ ಅವರ ನೇತೃತ್ವದಲ್ಲಿ ಬಿಜೆಪಿ ಚುನಾವಣೆ ಎದುರಿಸಲಿದೆ. ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿಗೆ ಮತ ನೀಡಿ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಬೂಸ್ಟರ್ ಡೋಸ್ ಬಗ್ಗೆ ಕೇಂದ್ರ ನನ್ನ ಸಲಹೆಯನ್ನು ಒಪ್ಪಿಕೊಂಡಿದೆ: ರಾಹುಲ್ ಗಾಂಧಿ