ಬೆಂಗಳೂರು: ನಗರದ ಸುಪ್ರಸಿದ್ಧ ಗಾಳಿ ಆಂಜನೇಯಸ್ವಾಮಿ ದೇವಾಲಯ (Gali Anjaneya Temple) ಮುಜರಾಯಿ ಇಲಾಖೆ (Muzrai Department) ಸುಪರ್ದಿಗೆ ಬಂದಿದೆ. ದೇವಾಲಯದ ಆಡಳಿತವನ್ನು ಸರ್ಕಾರ ತನ್ನ ಅಧೀನಕ್ಕೆ ಪಡೆದಿದ್ದು, ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳು ಇನ್ಮುಂದೆ ದೇವಾಲಯದ ಉಸ್ತುವಾರಿಯ ನಡೆಸಿಕೊಂಡು ಹೋಗಲಿದೆ. ದೇವಾಲಯದ ಆಡಳಿತ ಮಂಡಳಿ ಈಗ ಬೇರೆ ದಾರಿ ಕಾಣದೇ ಸರ್ಕಾರದ ನಿರ್ಧಾರದ ವಿರುದ್ಧ ಕೋರ್ಟ್ ಮೊರೆಹೋಗಲು ಸಜ್ಜಾಗಿದೆ..
ಈಗಾಗಲೇ ಧಾರ್ಮಿಕ ದತ್ತಿ ಇಲಾಖೆ ದೇವಾಲಯದ ನಿರ್ವಹಣೆಗೆ ಕಾರ್ಯಪಾಲಕ ಅಧಿಕಾರಿಯನ್ನು ನೇಮಕ ಮಾಡಿದೆ. ಇಓ ನಾರಾಯಣಸ್ವಾಮಿ ಅಧಿಕಾರ ವಹಿಸಿಕೊಂಡು ದೇವಾಲಯದ ಅಧಿಕಾರ ಪಡೆದುಕೊಂಡಿದ್ದಾರೆ. ಸರ್ಕಾರದ ಈ ನಿರ್ಧಾರವನ್ನು ದೇವಾಲಯದ ಆಡಳಿತ ಮಂಡಳಿ ಖಂಡಿಸಿದೆ. ನಮ್ಮ ಪೂರ್ವಿಕರಿಂದ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯತ್ವ ದೊರತಿದ್ದು, ಇಷ್ಟು ವರ್ಷ ದೇವಸ್ಥಾನದ ಅಭಿವೃದ್ಧಿಗಾಗಿ ಶ್ರಮಿಸಿದ ನಮಗೆ ಅನ್ಯಾಯವಾಗಿದೆ ಎಂದು ಗ್ರಾಮಸ್ಥರು ಮತ್ತು ಟ್ರಸ್ಟಿಗಳು ಆಕ್ರೋಶ ಹೊರಹಾಕುತ್ತಿದ್ದಾರೆ. ಇದನ್ನೂ ಓದಿ: ಪ್ರಾಣಿ ಪ್ರಿಯರಿಗೆ ಟಿಕೆಟ್ ದರ ಏರಿಕೆ ಶಾಕ್ – ಬನ್ನೇರುಘಟ್ಟ ಜೈವಿಕ ಉದ್ಯಾನ ಟಿಕೆಟ್ ದರ 20% ಏರಿಕೆ
ಈಗಾಗಲೇ ಧಾರ್ಮಿಕ ದತ್ತಿ ಇಲಾಖೆ ದೇವಸ್ಥಾನದ ಸಂಪೂರ್ಣ ಆಡಳಿತವನ್ನ ತನ್ನ ಅಧೀನಕ್ಕೆ ತೆಗೆದುಕೊಂಡಿದೆ. ಸೋಮವಾರ ಹೈಕೋರ್ಟ್‌ನಲ್ಲಿ (High Court) ಅರ್ಜಿ ಹಾಕಿ ಸರ್ಕಾರದ ವಿರುದ್ಧ ಕಾನೂನಿನ ಹೋರಾಟ ಮಾಡಲು ಟ್ರಸ್ಟಿಗಳು ಸಜ್ಜಾಗಿದ್ದಾರೆ. ಆಡಳಿತ ಮಂಡಳಿಯ ಕಿತ್ತಾಟದ ಮಧ್ಯೆ ಪ್ರತಿನಿತ್ಯ ಸಾವಿರಾರು ಭಕ್ತರು ಗಾಳಿ ಆಂಜನೇಯನ ದರ್ಶನ ಪಡೆಯುತ್ತಾರೆ. ಭಕ್ತರಿಗೆ ಮತ್ತು ಅಲ್ಲಿನ ಪುರೋಹಿತ ವರ್ಗಕ್ಕೆ ಯಾವುದೇ ಸಮಸ್ಯೆ ಆಗದಂತೆ ಸರ್ಕಾರ ಮುನ್ನೆಚ್ಚರಿಕೆ ವಹಿಸಿದೆ. ಇದನ್ನೂ ಓದಿ: ಮಂತ್ರಾಲಯ | ಸ್ನಾನಘಟ್ಟದ ಬಳಿ ಈಜಲು ಹೋಗಿದ್ದ ಮೂವರು ಯುವಕರು ನಾಪತ್ತೆ