ಬಳ್ಳಾರಿ: ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಕೆಡವಲು ಆಪರೇಷನ್ ಕಮಲಕ್ಕೆ ಕೈ ಹಾಕಿದ ಗಾಲಿ ಜನಾರ್ದನ ರೆಡ್ಡಿಗೆ ರಾಜ್ಯ ಸಮಿಶ್ರ ಸರ್ಕಾರ ಶಾಕ್ ಮುಟ್ಟಿಸಿದೆ.
ಹೌದು, ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಾಲಿ ಜನಾರ್ದನ ರೆಡ್ಡಿಯ ಪರಮಾಪ್ತ ಹಾಗೂ ಓಎಂಸಿ ಎಂಡಿ ಶ್ರೀನಿವಾಸ ರೆಡ್ಡಿಯನ್ನು ವಿಶೇಷ ತನಿಖಾ ತಂಡ(ಎಸ್‍ಐಟಿ) ಬಂಧಿಸಿದೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ತನಿಖೆಗೆ ಸಹಕರಿಸದ ಹಿನ್ನೆಲೆಯಲ್ಲಿ ಒಎಂಸಿ ಎಂಡಿ ಶ್ರೀನಿವಾಸರೆಡ್ಡಿಯನ್ನ ಎಸ್‍ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.
ಓಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಈ ಹಿಂದೆಯೂ ಸಹ ಶ್ರೀನಿವಾಸ್ ರೆಡ್ಡಿ ಬಂಧನಕ್ಕೊಳಾಗಿದ್ದರು. ತದನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಐಜಿಪಿ ಚಂದ್ರಶೇಖರ್ ನೇತೃತ್ವದ ಎಸ್‍ಐಟಿ ಶ್ರೀನಿವಾಸರೆಡ್ಡಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ.
- Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv