ರಾಮನಗರ: ಜೂಜು ಅಡ್ಡೆ ಮೇಲೆ ಪೊಲೀಸರು (Police) ದಾಳಿ ನಡೆಸಿದ ವೇಳೆ ತಪ್ಪಿಸಿಕೊಳ್ಳಲು ಅರ್ಕಾವತಿ ನದಿಗೆ ಹಾರಿ ನಾಪತ್ತೆಯಾಗಿದ್ದ ವ್ಯಕ್ತಿ ಕನಕಪುರದಲ್ಲಿ (Kanakapura) ಶವವಾಗಿ ಪತ್ತೆಯಾಗಿದ್ದಾನೆ.
ಕನಕಪುರದ ತಿಗಳರಹಳ್ಳಿ ಗ್ರಾಮದ ಮರಿಸ್ವಾಮಿ (30) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ಕಳೆದ ಮೂರು ದಿನಗಳ ಹಿಂದೆ ಜೂಜು ಅಡ್ಡೆ ಮೇಲೆ ಕನಕಪುರ ಗ್ರಾಮಾಂತರ ಠಾಣೆ ಪೊಲೀಸರು ದಾಳಿ ಮಾಡಿದ್ದರು. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಮರಿಸ್ವಾಮಿ ನದಿಗೆ ಹಾರಿದ್ದ. ನದಿಯಲ್ಲಿ ಈಜಿ ತಪ್ಪಿಸಿಕೊಂಡಿದ್ದಾನೆ ಎಂದು ಪೊಲೀಸರು ಮರಳಿ ಬಂದಿದ್ದರು. ಆದರೆ ಮೂರು ದಿನಗಳ ಬಳಿಕ ಮರಿಸ್ವಾಮಿ ಶವ ಅರ್ಕಾವತಿ ನದಿಯಲ್ಲಿ ಪತ್ತೆಯಾಗಿದೆ. ಇದನ್ನೂ ಓದಿ: 10ನೇ ತರಗತಿ ವಿದ್ಯಾರ್ಥಿಯನ್ನ ಸೆಕ್ಸ್‌ಗೆ ಪೀಡಿಸುತ್ತಿದ್ದ ಟೀಚರ್; ಮತಾಂತರಕ್ಕೂ ಒತ್ತಾಯ – ಕೇಸ್ ದಾಖಲು
ಮೃತ ಮರಿಸ್ವಾಮಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಕುಟುಂಬಸ್ಥರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ದಾರಿಯುದ್ದಕ್ಕೂ ಮಾತಾಡ್ತಲೇ ಇದ್ದ, ನಾನು ಬದುಕಲ್ಲ ಎಂದು ಕೂಗಿಕೊಳ್ತಿದ್ದ- ಮೃತ ವೆಂಕಟೇಶ್ ಸ್ನೇಹಿತ ಭಾವುಕ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]