ಕೋಲ್ಕತ್ತಾ: ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಗೆಲುವು ಸಾಧಿಸಿರುವ ಬಿಜೆಪಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟಾಂಗ್ ನೀಡಿದ್ದಾರೆ. ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಗೆ ಸವಾಲು ಹಾಕಿದ್ದಾರೆ.
ಆಟ ಇನ್ನೂ ಮುಗಿದಿಲ್ಲ. ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಸುಲಭ ಜಯ ಸಾಧಿಸಲು ಸಾಧ್ಯವಿಲ್ಲ. ದೇಶದಲ್ಲಿ ಒಟ್ಟು ಶಾಸಕರ ಪೈಕಿ ಅರ್ಧದಷ್ಟು ಶಾಸಕರ ಸಂಖ್ಯೆಯನ್ನು ಬಿಜೆಪಿ ಪಕ್ಷ ಹೊಂದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ – ಬಿಜೆಪಿ ಅಭ್ಯರ್ಥಿಗೆ ಸುಲಭವಾಗಿ ಸಿಗಲಿದೆ ಜಯ
Advertisement
Advertisement
ಈ ಬಾರಿಯ ರಾಷ್ಟ್ರಪತಿ ಚುನಾವಣೆ ಬಿಜೆಪಿಗೆ ಅಷ್ಟು ಸುಲಭವಲ್ಲ. ಅವರು ದೇಶದ ಒಟ್ಟು ಶಾಸಕರ ಪೈಕಿ ಅರ್ಧದಷ್ಟು ಶಾಸಕರನ್ನು ಹೊಂದಿಲ್ಲ. ವಿರೋಧ ಪಕ್ಷಗಳು ಒಟ್ಟಾಗಿ ರಾಷ್ಟ್ರದಾದ್ಯಂತ ಹೆಚ್ಚು ಶಾಸಕರನ್ನು ಹೊಂದಿವೆ ಎಂದು ಹೇಳಿದ್ದಾರೆ.
Advertisement
ಆಟ ಇನ್ನೂ ಮುಗಿದಿಲ್ಲ. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸೋತ ಸಮಾಜವಾದಿ ಪಕ್ಷದಂತಹ ಪಕ್ಷಗಳು ಕಳೆದ ಬಾರಿಗಿಂತ ಹೆಚ್ಚು ಶಾಸಕರನ್ನು ಹೊಂದಿವೆ ಎಂದಿದ್ದಾರೆ. ಇದನ್ನೂ ಓದಿ: ಚನ್ನಿ ಪ್ರಮಾಣ ವಚನ ಸಮಾರಂಭಕ್ಕೆ ನನ್ನನ್ನು ಆಹ್ವಾನಿಸಿರಲಿಲ್ಲ: ಎಎಪಿಗೆ ಧನ್ಯವಾದ ತಿಳಿಸಿದ ಕಾಂಗ್ರೆಸ್ ಸಂಸದ
Advertisement
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅವಧಿ ಜು.24ಕ್ಕೆ ಅಂತ್ಯಗೊಳ್ಳಲಿದೆ. 75 ವರ್ಷ ಮೇಲ್ಪಟ್ಟವರಿಗೆ ಪಕ್ಷದಿಂದ ನಿವೃತ್ತಿ ನೀಡುವ ಹಿನ್ನೆಲೆಯಲ್ಲಿ 76 ವರ್ಷದ ಕೋವಿಂದ್ ಅವರನ್ನು ಎರಡನೇ ಬಾರಿ ಆಯ್ಕೆ ಮಾಡುವುದು ಅನುಮಾನ. ರಾಷ್ಟ್ರಪತಿ ಚುನಾವಣೆಯನ್ನು ಗೆಲ್ಲಬೇಕಾದರೆ ಉತ್ತರ ಪ್ರದೇಶದ ಗೆಲುವು ಬಿಜೆಪಿಗೆ ಅನಿವಾರ್ಯವಾಗಿತ್ತು.
ಮತ ಲೆಕ್ಕಾಚಾರ ಹೇಗೆ?
ರಾಷ್ಟ್ರಪತಿ ಚುನಾವಣೆಯಲ್ಲಿ ಲೋಕಸಭೆ ಸದಸ್ಯರು, ರಾಜ್ಯಸಭೆ ಸದಸ್ಯರು, ರಾಜ್ಯ ವಿಧಾನಸಭೆಗಳ ಸದಸ್ಯರು ಮತ್ತು ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭೆ ಸದಸ್ಯರು ಮತ ಹಾಕುತ್ತಾರೆ. ವಿಧಾನಪರಿಷತ್ ಸದಸ್ಯರಿಗೆ ಮತದಾನದ ಹಕ್ಕು ಇಲ್ಲ.
543 ಲೋಕಸಭಾ ಸದಸ್ಯರು, 233 ರಾಜ್ಯಸಭಾ ಸದಸ್ಯರು ಮತ್ತು ದೇಶದ ವಿಧಾನಸಭೆಯಲ್ಲಿರುವ 4,120 ಶಾಸಕರು ಮತ ಹಾಕಲಿದ್ದಾರೆ. ರಾಷ್ಟ್ರಪತಿ ಚುನಾವಣೆಯಲ್ಲಿ ಒಟ್ಟು 10,98,903 ಮತಗಳು ಚಲಾವಣೆಯಾಗುತ್ತವೆ. ಶೇ.50ಕ್ಕಿಂತ ಹೆಚ್ಚು ಮತ ಪಡೆದ ಅಭ್ಯರ್ಥಿ ಜಯಗಳಿಸುತ್ತಾರೆ.
ಎಲ್ಲ ಸಂಸದರ ವೋಟಿನ ಮೌಲ್ಯ 708. ರಾಜ್ಯದ ಜನಸಂಖ್ಯೆಯ ಆಧಾರದ ಮೇಲೆ ಶಾಸಕನ ಮತವನ್ನು ಲೆಕ್ಕಾಚಾರ ಮಾಡಲಾಗುತ್ತದೆ. ಉತ್ತರ ಪ್ರದೇಶದ ಒಬ್ಬ ಶಾಸಕನ ಮತಕ್ಕೆ ದೇಶದಲ್ಲೇ ಅತಿಹೆಚ್ಚು ಮೌಲ್ಯ 208 ಇದೆ. ದೇಶದಲ್ಲೇ ಕಡಿಮೆ ಇರುವ ಸಿಕ್ಕಿಂ ರಾಜ್ಯದ ಒಬ್ಬ ಶಾಸಕನ ಮತದ ಮೌಲ್ಯ 7 ಇದೆ. ಇದನ್ನೂ ಓದಿ: ಭಾರತಕ್ಕೆ ಬರಲಿದೆ ರಷ್ಯಾ ತೈಲ – ಅಂತಿಮ ಹಂತದಲ್ಲಿ ಮಾತುಕತೆ
ಉತ್ತರ ಪ್ರದೇಶದ 403 ಶಾಸಕರ ವೋಟಿನ ಮೌಲ್ಯ ಒಟ್ಟು 83,824. 80 ಸಂಸದರು ಮತ ಸೇರಿದರೆ ಮೌಲ್ಯ 56,640 ಆಗುತ್ತದೆ. ಉತ್ತರ ಪ್ರದೇಶ ಒಂದೇ ರಾಜ್ಯದಿಂದ 1.4 ಲಕ್ಷ ಮೌಲ್ಯದ ಮತಗಳು ಚಲಾವಣೆ ಆಗುತ್ತದೆ. ಉತ್ತರಾಖಂಡ 4,480, ಗೋವಾ 800, ಮಣಿಪುರದಲ್ಲಿ 1,080 ಮತಗಳು ಚಲಾವಣೆ ಆಗುತ್ತದೆ.
ಪಂಚರಾಜ್ಯಗಳ ಚುನಾವಣೆಗೂ ಮೊದಲು ಬಿಜೆಪಿ ಬಳಿ ರಾಷ್ಟ್ರಪತಿಯನ್ನು ಆಯ್ಕೆ ಮಾಡಿಕೊಳ್ಳಲು ಬೇಕಾದಷ್ಟು ಮತಗಳಿದ್ದವು. ಒಂದು ವೇಳೆ ಉತ್ತರ ಪ್ರದೇಶದಲ್ಲಿ ಸೋತಿದ್ದರೆ ಬಿಜೆಡಿ, ಟಿಆರ್‌ಎಸ್, ವೈಎಸ್‌ಆರ್ ಪಕ್ಷಗಳ ಬೆಂಬಲವನ್ನು ಬಿಜೆಪಿ ಕೇಳಬೇಕಿತ್ತು.