ಸ್ಯಾಂಡಲ್‍ವುಡ್ ನಟ ದಿ. ಪುನೀತ್ ರಾಜ್ ಕುಮಾರ್ ಕನಸಿನ ಪ್ರಾಜೆಕ್ಟ್ ಗಂಧದಗುಡಿ ಟ್ರೈಲರ್ ರಿಲೀಸ್ ಆಗಿದ್ದು, ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ (Ashwini Puneeth RajKumar) ಅವರು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಟ್ರೈಲರ್ ನೋಡಿದ ಬಳಿಕ ವೇದಿಕೆಯಲ್ಲಿ ಮಾತನಾಡಿದ ಅವರು, ನಿಮ್ಮ ಅಪ್ಪು (Appu) ಸಿನಿಮಾ ಗಂಧದ ಗುಡಿ ನೋಡಿ ಪ್ರೋತ್ಸಾಹಿಸಿ ಎಂದು ಮನವಿ ಮಾಡಿಕೊಂಡರು. ಇದನ್ನೂ ಓದಿ: ಗಂಧದ ಗುಡಿಯಲ್ಲಿ ಚಂದದ ನೋಟ: ನೀವು ಇರಬೇಕಿತ್ತು ಎಂದು ಕಣ್ಣೀರಾಕಿದ ಫ್ಯಾನ್ಸ್
ಪುನೀತ್ ರಾಜ್ ಕುಮಾರ್ (Dr. Puneeth RajKumar) ಕೊನೆ ಸಾಕ್ಷ್ಯಚಿತ್ರ ಇದಾಗಿದ್ದು, `ಅಪ್ಪು ಅನ್ವೇಷಣೆ’ಯ ಅದ್ಭುತ ಪಯಣ ಸೆರೆಹಿಡಿಯಲಾಗಿದೆ. ಗಂಧದ ಗುಡಿ ಟ್ರೈಲರ್ ನ ಮತ್ತೊಂದು ಸೊಗಸು ಅಂದರೆ, ಅಪ್ಪು ಹಾಗೂ ಅವರ ಅಪ್ಪಾಜಿ ಬಾಳಿ ಬದುಕಿದ ಮನೆಯನ್ನು ತೋರಿಸಿದ್ದಾರೆ. ಸ್ವತಃ ಆ ಮನೆಯ ಬಗ್ಗೆ ಪುನೀತ್ ರಾಜ್‍ಕುಮಾರ್ ಅವರೇ ವಿವರಿಸುತ್ತಾರೆ. ಮನೆಯನ್ನು ಕಣ್ತುಂಬಿಕೊಳ್ಳುವ ಹೊತ್ತಲ್ಲಿ ಡಾ.ರಾಜ್ ಕುಮಾರ್ ಪ್ರವೇಶ. ಥ್ರಿಲ್ ಅನಿಸುವಷ್ಟು ಮಜಾ ಕೊಡುತ್ತದೆ ಟ್ರೈಲರ್.
ಇಂದು ಬೆಂಗಳೂರಿನ ನರ್ತಕಿ ಚಿತ್ರಮಂದಿರ (Narthaki Theatre) ದಲ್ಲಿ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳಿಗಾಗಿ ಟ್ರೇಲರ್ ಪ್ರದರ್ಶನ ಏರ್ಪಡಿಸಲಾಗಿತ್ತು. ಗಂಧದ ಗುಡಿಯ ಅಂದವನ್ನು ಕಣ್ತುಂಬಿಕೊಂಡ ಕಂಗಳಲ್ಲಿ ಅಪ್ಪು ಇಲ್ಲ ಅನ್ನುವ ಕಂಬನಿ ಸುರಿಯುತ್ತಿತ್ತು. ರಾಘವೇಂದ್ರ ರಾಜ್‍ಕುಮಾರ್ (Raghavendra RajKumar) ಸೇರಿದಂತೆ ಅಲ್ಲಿದ್ದವರ ಅಷ್ಟೂ ಕಣ್ಣುಗಳು ಒದ್ದೆ ಆಗಿದ್ದವು. ಟ್ರೈಲರ್ ಇಷ್ಟೊಂದು ಭಾವುಕತೆ ಸೃಷ್ಟಿ ಮಾಡಿದೆ. ಇದೇ ತಿಂಗಳು ಕೊನೆಯಲ್ಲಿ ಪೂರ್ತಿ ಚಿತ್ರವೇ ಬಿಡುಗಡೆ ಆಗುತ್ತಿದೆ.