ನವದೆಹಲಿ: ನಾಥೂರಾಮ್ ಗೋಡ್ಸೆ ಕುರಿತಾದ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ಬಿಜೆಪಿಯ ಮತ್ತೊಬ್ಬ ಮುಖಂಡ ಮಹಾತ್ಮ ಗಾಂಧಿ ಪಾಕಿಸ್ತಾನದ ಪಿತಾಮಹ ಎಂದು ಹೇಳುವ ಮೂಲಕ ಸುದ್ದಿಯಾಗಿದ್ದಾರೆ.
ಮಧ್ಯಪ್ರದೇಶದ ಬಿಜೆಪಿ ವಕ್ತಾರ ಅನಿಲ್ ಸೌಮಿತ್ರ ಅವರು ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಈ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದಾರೆ. ಭಾರತವು ಸನಾತನ ದೇಶವಾಗಿದೆ. ಭಾರತದಿಂದ ಪಾಕಿಸ್ತಾನ ನಿರ್ಮಾಣವಾಗಿದೆ. ಹೀಗಾಗಿ ಮಹಾತ್ಮ ಗಾಂಧಿ ಪಾಕಿಸ್ತಾನಕ್ಕೆ ಪಿತಾಮಹರೇ ಹೊರತು ಭಾರತಕ್ಕಲ್ಲ ಎಂದು ಹೇಳಿದ್ದಾರೆ.
Advertisement
Advertisement
ತಮ್ಮ ಹೇಳಿಕೆಯ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅನಿಲ್ ಸೌಮಿತ್ರ ಅವರು, ಭಾರತದಿಂದ ಜವಾಹರಲಾಲ್ ನೆಹರು ಹಾಗೂ ಪಾಕಿಸ್ತಾನದಿಂದ ಮೊಹಮ್ಮದ್ ಅಲಿ ಜಿನ್ನಾ ಸೇರಿ ಎರಡು ರಾಷ್ಟ್ರಗಳನ್ನು ನಿರ್ಮಾಣ ಮಾಡಿದರು. ದೇಶ ವಿಭಜನೆ ಮಹಾತ್ಮ ಗಾಂಧಿ ಮುಂದೆಯೇ ಆಗಿದೆ. ಹೀಗಾಗಿ ಗಾಂಧೀಜಿ ಪಾಕಿಸ್ತಾನಕ್ಕೆ ಪಿತಾಮಹರು ಎಂದು ತಿಳಿಸಿದ್ದಾರೆ.
Advertisement
ಈ ಹೇಳಿಕೆಯಿಂದಾಗಿ ಅನಿಲ್ ಸೌಮಿತ್ರ ಅವರನ್ನು ಬಿಜೆಪಿ ಹೈಕಮಾಂಡ್ ಪಕ್ಷದಿಂದ ವಜಾಗೊಳಿಸಿದೆ. ಹೀಗಾಗಿ ಉಳಿದ ನಾಯಕರಿಗೂ ಈ ಬಿಸಿ ತಟ್ಟುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.
Advertisement
ಭೋಪಾಲ್‍ನಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ್ದ ಸಾಧ್ವಿ ಪ್ರಜ್ಞಾಸಿಂಗ್ ಅವರು, ನಾಥೂರಾಮ್ ಗೋಡ್ಸೆ ದೇಶಭಕ್ತರು. ಅವರು ದೇಶಭಕ್ತರಾಗಿಯೇ ಜನರ ಮನದಲ್ಲಿ ಇರುತ್ತಾರೆ. ಗೋಡ್ಸೆ ಬಗ್ಗೆ ಕೆಲವರು ಹಗುರವಾಗಿ ಮಾತನಾಡುತ್ತಿದ್ದಾರೆ. ಅವರನ್ನು ಭಯೋತ್ಪಾದಕ ಎಂದು ಕರೆಯುತ್ತಿದ್ದಾರೆ. ಅಂತವರಿಗೆ ಈ ಚುನಾವಣೆ ಮೂಲಕ ಉತ್ತರ ನೀಡಲಾಗುತ್ತದೆ ಎಂದು ನಟ ಕಮಲ್ ಹಾಸನ್ ವಿರುದ್ಧ ಕಿಡಿಕಾರಿದ್ದರು.
#Breaking | Another embarrassment for BJP as party's leader Anil Saumitra says 'Gandhi is Pakistani Father of the Nation'. More details by @govindtimes. pic.twitter.com/3J1NtyXfeY
— TIMES NOW (@TimesNow) May 17, 2019
ಸಾಧ್ವಿ ಪ್ರಜ್ಞಾಸಿಂಗ್ ಅವರ ಬೆನ್ನಲ್ಲೇ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಹಾಗೂ ನಳಿನ್ ಕುಮಾರ್ ಕಟೀಲ್ ಗೋಡ್ಸೆ ದೇಶಭಕ್ತಿಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿ, ಡಿಲೀಟ್ ಮಾಡಿದ್ದರು.
ಮಧು ಪೂರ್ಣಿಮಾ ಕಿಶ್ವರ್ ಎಂಬವರು, ಗೋಡ್ಸೆ ಗಾಂಧೀಜಿಯನ್ನು ಹತ್ಯೆ ಮಾಡಿದ್ದರೂ ಓಡಿ ಹೋಗಿರಲಿಲ್ಲ. ಶರಣಾಗಿ ವಿಚಾರಣೆ ಹಾಜರಾಗಿ ಧೈರ್ಯದಿಂದ ನಾನು ಗಾಂಧೀಜಿಯನ್ನು ಹತ್ಯೆ ಮಾಡಿದ್ದು ಯಾಕೆ ಎಂದು ಸಮರ್ಥಿಸಿಕೊಂಡಿದ್ದ. ಕೊಲೆ ಮಾಡಿದ್ದನ್ನು ನಾನು ಖಂಡಿಸುತ್ತೇನೆ. ಆದರೆ ಗೋಡ್ಸೆ ದೇಶಭಕ್ತಿಯನ್ನು ನಾನು ಮೆಚ್ಚುತ್ತೇನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು.
ಈ ಟ್ವೀಟ್ ಗೆ ಅನಂತ್ ಕುಮಾರ್ ಹೆಗ್ಡೆ, ಬದಲಾದ ಸನ್ನಿವೇಶದಲ್ಲಿ 7 ವರ್ಷದ ಬಳಿಕ ಇಂದಿನ ತಲೆಮಾರುಗಳು ಈ ವಿಚಾರದ ಬಗ್ಗೆ ಚರ್ಚೆ ನಡೆಸುತ್ತಿರುವುದು ಸಂತೋಷ ತಂದಿದೆ. ನಾಥುರಾಮ್ ಗೋಡ್ಸೆ ಈ ಚರ್ಚೆಯನ್ನು ನೋಡಿ ಸಂತೋಷ ಪಡಬಹುದು ಎಂದು ಅಭಿಪ್ರಾಯ ಬರೆದು ಟ್ವೀಟ್ ಮಾಡಿದ್ದರು.
ಈ ಟ್ವೀಟ್ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಹೆಗ್ಡೆ, ನನ್ನ ಟ್ವಿಟ್ಟರ್ ಖಾತೆ ನಿನ್ನೆಯಿಂದ ಹ್ಯಾಕ್ ಆಗಿದೆ. ಗಾಂಧೀಜಿಯನ್ನು ಹತ್ಯೆಗೈದ ವಿಚಾರವನ್ನು ನಾನು ಸಮರ್ಥಿಸಿಕೊಳ್ಳುವುದಿಲ್ಲ. ದೇಶಕ್ಕೆ ಗಾಂಧೀಜಿಯವರು ನೀಡಿದ ಕೊಡುಗೆಯ ಬಗ್ಗೆ ನನಗೆ ಗೌರವವಿದೆ ಎಂದು ಸ್ಪಷ್ಟನೆ ನೀಡಿದ್ದರು.
ಬಿಜೆಪಿ ಪಕ್ಷದ ಲೋಕಸಭಾ ಚುನಾವಣಾ ಅಭ್ಯರ್ಥಿ ಪ್ರಜ್ಞಾಸಿಂಗ್ ಸಿಂಗ್ ಠಾಕೂರ್ ಹಾಗೂ ಸಂಸದರಾದ ಅನಂತ್ ಕುಮಾರ್ ಹೆಗ್ಡೆ, ನಳಿನ್ ಕುಮಾರ್ ಕಟೀಲ್ ಅವರು ಗೋಡ್ಸೆ ಕುರಿತ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದು, ರಾಷ್ಟ್ರಮಟ್ಟದಲ್ಲಿ ಬಿಜೆಪಿ ಭಾರೀ ಟೀಕೆಗಳನ್ನು ಎದುರಿಸಿದೆ. ಇತ್ತ ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಶಾ ಅವರು ಪಕ್ಷದ ಮುಖಂಡರ ಹೇಳಿಕೆಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ಸೂಚನೆ ನೀಡಿದ್ದಾರೆ.
10 ದಿನಗಳ ಒಳಗೆ ನಾಯಕರು ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಬೇಕು. ಪಕ್ಷದ ಅಂತರಿಕವಾಗಿ ಶಿಸ್ತು ಸಮಿತಿ ಎದುರಿಸಬೇಕಾಗುತ್ತದೆ ಎಂದು ಅಮಿತ್ ಶಾ ಸೂಚಿಸಿದ್ದಾರೆ.
ಸದ್ಯ ಚುನಾವಣಾ ಅಂತಿಮ ಹಂತದ ಮತದಾನದ ಸಮಯವಾಗಿರುವ ವೇಳೆಯಲ್ಲೇ ಸಂಸದರ ಈ ಹೇಳಿಕೆಗಳು ಸಾಕಷ್ಟು ವಿವಾದವನ್ನು ಸೃಷ್ಟಿಸಿದ್ದು, ಈ ಹೇಳಿಕೆಗಳನ್ನೆ ಕಾಂಗ್ರೆಸ್ ಅಂತಿಮ ದಿನದ ಪ್ರಚಾರದಲ್ಲಿ ಪ್ರಸ್ತಾಪ ಮಾಡಿ ವಾಗ್ದಾಳಿ ನಡೆಸಿದೆ.
#WATCH BJP Bhopal Lok Sabha Candidate Pragya Singh Thakur says 'Nathuram Godse was a 'deshbhakt', is a 'deshbhakt' and will remain a 'deshbhakt'. People calling him a terrorist should instead look within, such people will be given a befitting reply in these elections pic.twitter.com/4swldCCaHK
— ANI (@ANI) May 16, 2019