ನವದೆಹಲಿ: ಮಹಾತ್ಮ ಗಾಂಧಿಯವರ 153ನೇ ಜನ್ಮದಿನದ ಪ್ರಯುಕ್ತವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu), ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಮತ್ತು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಸೇರಿದಂತೆ ಅನೇಕ ಗಣ್ಯರು ರಾಜ್‌ಘಾಟ್‌ಗೆ ತೆರಳಿ ಮಹಾತ್ಮ ಗಾಂಧಿ ಸಮಾಧಿಗೆ ಗೌರವವನ್ನು ಸಲ್ಲಿಸಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ನಾನು ಎಲ್ಲಾ ನಾಗರಿಕರ ಪರವಾಗಿ ರಾಷ್ಟ್ರಪಿತನಿಗೆ ಗೌರವ ಸಲ್ಲಿಸುತ್ತೇನೆ. ಶಾಂತಿ, ಸಮಾನತೆ, ಕೋಮು ಸೌಹಾರ್ದತೆಯ ಮೌಲ್ಯ ಹಾಗೂ ಅವರ ಜೀವನದ ಎಲ್ಲಾ ಸ್ಫೂರ್ತಿದಾಯಕ ಕ್ಷಣಗಳನ್ನು ಎಲ್ಲರೂ ಅಳವಡಿಸಿಕೊಳ್ಳುವ ಸಂದರ್ಭ ಇದಾಗಿದೆ ಎಂದು ಗಾಂಧಿ ಜಯಂತಿಗೆ ಶುಭ ಕೋರಿದರು.
Advertisement
#WATCH | President Droupadi Murmu pays tribute to Mahatma Gandhi at Rajghat on #GandhiJayanti pic.twitter.com/SNA5mtGidA
— ANI (@ANI) October 2, 2022
Advertisement
ಗಾಂಧೀಜಿಯವರ ಕನಸಿನ ಭಾರತದ ಸಾಕಾರಗೊಳಿಸಲು ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವ ಸಮಯ ಇದಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಖಾದಿ, ಕರಕುಶಲ ವಸ್ತುಗಳನ್ನು ಹೆಚ್ಚು ಖರೀದಿಸಿ – ರಾಜ್‌ಘಾಟ್‌ನಲ್ಲಿ ಗಾಂಧಿ ಸಮಾಧಿಗೆ ಮೋದಿ ಗೌರವ ನಮನ
Advertisement
Advertisement
ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಹಾತ್ಮ ಗಾಂಧಿಯವರ 153ನೇ ಜನ್ಮದಿನದ ಪ್ರಯುಕ್ತವಾಗಿ ರಾಜ್‌ಘಾಟ್‌ಗೆ ತೆರಳಿ ಮಹಾತ್ಮ ಗಾಂಧಿ ಸಮಾಧಿಗೆ ಗೌರವ ಸಲ್ಲಿಸಿದ್ದರು. ನಂತರ ಮಾತನಾಡಿದ ಅವರು, ಈ ಗಾಂಧಿ ಜಯಂತಿಯು ಇನ್ನೂ ಹೆಚ್ಚು ವಿಶೇಷವಾಗಿದೆ. ಏಕೆಂದರೆ ಭಾರತವು ಆಜಾದಿ ಕಾ ಅಮೃತ ಮಹೋತ್ಸವದ ವರ್ಷವಾಗಿದೆ. ಬಾಪು ಆದರ್ಶಗಳನ್ನು ಅನುಸರಿಸುವ ಮೂಲಕ ಖಾದಿ ಮತ್ತು ಕರಕುಶಲ ವಸ್ತುಗಳನ್ನು ಖರೀದಿಸಲು ಮನವಿ ಮಾಡಿದ್ದರು. ಇದನ್ನೂ ಓದಿ: ಹಳ್ಳದಲ್ಲಿ ನಾಲ್ವರು ಮಹಿಳೆಯರು ಕೊಚ್ಚಿ ಹೋದ ಪ್ರಕರಣ – ಇಬ್ಬರ ಮೃತದೇಹ ಪತ್ತೆ