ಬೆಂಗಳೂರು: ಬಿಡದಿಯ ಈಗಲ್ ಟನ್ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕರಿಬ್ಬರ ಬಡಿದಾಟ ಪ್ರಕರಣಕ್ಕೆ ಅಂತ್ಯ ಹಾಡಲು ಶಾಸಕ ಗಣೇಶ್ ಮುಂದಾಗಿದ್ದಾರೆ.
ಪರಸ್ಪರ ರಾಜಿ ಸಂಧಾನದ ಮಾಡಿಕೊಳ್ಳುವ ಮೂಲಕ ಪ್ರಕರಣಕ್ಕೆ ಎಳ್ಳು ನೀರು ಬಿಡಲಾಗುತ್ತಿದೆ ಎಂದು ಶಾಸಕ ಕಂಪ್ಲಿ ಗಣೇಶ್ ಪರ ವಕೀಲರು ಹೈಕೋರ್ಟಿಗೆ ಮೆಮೋ ಸಲ್ಲಿಸಿದ್ದಾರೆ. ಇದನ್ನೂ ಓದಿ: ಈಗಲ್ಟನ್ ರೆಸಾರ್ಟಿನಲ್ಲಿ ರಾತ್ರಿ ನಡೆದಿದ್ದೇನು? ಎಳೆ ಎಳೆಯಾಗಿ ಬಿಚ್ಚಿಟ್ಟ ಶಾಸಕ ಗಣೇಶ್
Advertisement
Advertisement
ಪ್ರಕರಣ ಬಹುತೇಕ ಮುಕ್ತಾಯದ ಹಂತದಲ್ಲಿದೆ. ರಾಜಿ ಸಂಧಾನದ ಮೂಲಕ ಪ್ರಕರಣವನ್ನು ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ ಮಾಡಿಕೊಡಲು ನ್ಯಾ.ಬಿ.ಎ.ಪಾಟೀಲ್ ಅವರಿದ್ದ ಏಕಸದಸ್ಯ ಪೀಠದ ಮುಂದೆ ಶಾಸಕ ಗಣೇಶ್ ಪರ ವಕೀಲ ಮೆಮೋ ಸಲ್ಲಿಸಿದ್ದಾರೆ. ಪ್ರಕರಣದ ಬಗ್ಗೆ ಉಭಯ ಕಕ್ಷಿದಾರರು ಮಂಗಳವಾರ ನ್ಯಾಯಾಲಯದ ಮುಂದೆ ಹಾಜರಾಗಲಿ ನಂತರ ಮೆಮೋ ಪರಿಗಣಿಸಲಾಗುವುದು ಎಂದು ಪೀಠ ಹೇಳಿದೆ. ಇದನ್ನೂ ಓದಿ: `ಪಿಸ್ತೂಲ್ ಕೊಡಿ ಈತನನ್ನು ಇಲ್ಲೇ ಮುಗಿಸಿ, ಪ್ರಾಣ ತೆಗೆಯುತ್ತೇನೆ’ – ರೆಸಾರ್ಟ್ ಕಿತ್ತಾಟದ ಇಂಚಿಂಚು ಮಾಹಿತಿ ಕೊಟ್ಟ ಆನಂದ್ ಸಿಂಗ್
Advertisement
ವಿಜಯನಗರ ಶಾಸಕ ಆನಂದ್ ಸಿಂಗ್ ಮೇಲೆ ಈಗಲ್ ಟನ್ ರೆಸಾರ್ಟ್ ನಲ್ಲಿ ಗಣೇಶ್ ಮಾರಣಾಂತಿಕ ಹಲ್ಲೆ ನಡೆಸಿದ ಸಂಬಂಧ ತಮ್ಮ ವಿರುದ್ಧ ದಾಖಲಿರುವ ಎಫ್‍ಐಆರ್ ರದ್ದು ಕೋರಿ ಗಣೇಶ್ ಅರ್ಜಿ ಸಲ್ಲಿಸಿದ್ದಾರೆ.
Advertisement
ಕಳೆದ ವರ್ಷ ಮಾಚ್ ನಲ್ಲಿ ಕಾಂಗ್ರೆಸ್ ಶಾಸಕರು ಬಿಡದಿಯಲ್ಲಿರುವ ಈಗಲ್ ಟನ್ ರೆಸಾರ್ಟ್ ನಲ್ಲಿ ಉಳಿದಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಿಎಲ್‍ಪಿ ಸಭೆ ಮುಗಿದ ನಂತರ ಕೈ ಶಾಸಕರು ಪಾರ್ಟಿ ಮಾಡಿದ್ದರು. ಪಾರ್ಟಿ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ಆರಂಭವಾಗಿದ್ದು, ಗಲಾಟೆಯಲ್ಲಿ ಶಾಸಕ ಗಣೇಶ್ ಕೋಪಗೊಂಡು ಬಾಟಲ್‍ನಿಂದ ಆನಂದ್ ಸಿಂಗ್ ತಲೆಗೆ ಹೊಡೆದಿದ್ದರು.