ಧಾರವಾಡ: ರಾಜ್ಯ ಸರ್ಕಾರ ಸಾರ್ವಜನಿಕ ಗಣಪತಿ ಪ್ರತಿಷ್ಟಾಪನೆ ನಿಷೇಧ ಮಾಡಿರುವುದನ್ನು ವಿರೋಧಿಸಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ನೇತ್ರತ್ವದಲ್ಲಿ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
Advertisement
ಜಿಲ್ಲಾಧಿಕಾರಿ ಕಚೇರಿ ಎದುರು ಗಣೇಶ ಮೂರ್ತಿ ಇಟ್ಟು, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ ಶ್ರೀರಾಮ ಸೇನೆ ಕಾರ್ಯಕರ್ತರು, ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಪ್ರತಿಷ್ಟಾಪನೆ ಮಾಡೆಯೇ ತೀರುತ್ತೇವೆ ಎಂದು ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಇಂದು 1,453 ಹೊಸ ಕೊರೊನಾ ಪ್ರಕರಣ, 17 ಮಂದಿ ಸಾವು
Advertisement
Advertisement
ಕೂಡಲೇ ಸರ್ಕಾರ ಸಾರ್ವಜನಿಕ ಗಣಪತಿ ಮೂರ್ತಿ ಪ್ರತಿಷ್ಟಾನಕ್ಕೆ ಅವಕಾಶ ನೀಡಬೇಕು ಎಂದು ಶ್ರೀ ರಾಮ ಸೇನೆ ಕಾರ್ಯಕರ್ತರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಈ ವೇಳೆ ಮಾತನಾಡಿದ ಪ್ರಮೋದ ಮುತಾಲಿಕ್, ರಾಜ್ಯದ ಬಿಜೆಪಿ ನೇತೃತ್ವದ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಎಲ್ಲದಕ್ಕೂ ಅವಕಾಶ ನೀಡಲಾಗಿದೆ. ಆದರೆ ಸಾರ್ವಜನಿಕ ಗಣೇಶೋತ್ಸವ ನಿಷೇಧ ಮಾಡಿದ್ದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದ್ದರು.