ಬೆಂಗಳೂರು: ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಕಂಪ್ಲಿ ಶಾಸಕ ಗಣೇಶ್ ಅವರನ್ನು ಅಮಾನತು ಮಾಡಲಾಗಿದೆ.
ಕೆಪಿಸಿಸಿ ಸಭೆಯಲ್ಲಿ ಇಂದು ಕಾಂಗ್ರೆಸ್ ಪಕ್ಷದಿಂದ ಶಾಸಕ ಗಣೇಶ್ ಅವರನ್ನು ಅಮಾನತು ಮಾಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಪ್ರಕರಣದ ತನಿಖೆ ನಡೆಸಲು ವಿಶೇಷ ತನಿಖಾ ಸಮಿತಿ ರಚನೆ ಮಾಡಲಾಗಿದೆ. ಡಿಸಿಎಂ ಪರಮೇಶ್ವರ್, ಕೆ.ಜೆ ಜಾರ್ಜ್, ಕೃಷ್ಣಭೈರೇಗೌಡ ಅವರನ್ನೊಳಗೊಂಡ ಸಮಿತಿ ಆದಷ್ಟು ಶೀಘ್ರದಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ.
Advertisement
Advertisement
ಈ ಸಂಬಂಧ ವಿಜಯನಗರ ಶಾಸಕರಾದ ಆನಂದ್ ಸಿಂಗ್ ಅವರ ಜೊತೆ ಮಾತನಾಡಿ ಘಟನೆಯ ವಿವರವನ್ನು ಪಡೆಯಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಲಾಗಿದೆ ಎಂದು ಕೆಪಿಸಿಸಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: `ಪಿಸ್ತೂಲ್ ಕೊಡಿ ಈತನನ್ನು ಇಲ್ಲೇ ಮುಗಿಸಿ, ಪ್ರಾಣ ತೆಗೆಯುತ್ತೇನೆ’ – ರೆಸಾರ್ಟ್ ಕಿತ್ತಾಟದ ಇಂಚಿಂಚು ಮಾಹಿತಿ ಕೊಟ್ಟ ಆನಂದ್ ಸಿಂಗ್
Advertisement
ರೆಸಾರ್ಟಿನಲ್ಲಿ ಇಬ್ಬರು ಕಿತ್ತಾಡಿದ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಫುಲ್ ಗರಂ ಆಗಿದ್ದು, ಶಿಸ್ತು ಕ್ರಮ ಕೈಗೊಳ್ಳಿ ಎಂದು ಹಿರಿಯ ನಾಯಕರಿಗೆ ಖಡಕ್ ಸೂಚನೆ ನೀಡಿದ್ದರು ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿತ್ತು. ಹೈಕಮಾಂಡ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ನಾಯಕರು ಸಭೆ ನಡೆಸಿ ಈಗ ಅಮಾನತು ಮಾಡಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv