ಧಾರವಾಡ: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಮೂರು ದಿನಗಳ ಅವಧಿಗೆ ಗಣೇಶನ ಮೂರ್ತಿ (Ganesh Chaturthi) ಪ್ರತಿಷ್ಠಾಪನೆ ಮಾಡುವ ಸಂಬಂಧ ಪಾಲಿಕೆ ಹೊರಡಿಸಿದ್ದ ಠರಾವು ಪ್ರಶ್ನಿಸಿ ಅಂಜುಮನ್ ಇಸ್ಲಾಂ (Anjuman Islam) ಸಂಸ್ಥೆಯು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಧಾರವಾಡ ಹೈಕೋರ್ಟ್ ಪೀಠ ವಜಾಗೊಳಿಸಿದೆ.
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ (Hubballi Idgah Maidan) ಮೂರು ದಿನಗಳ ಕಾಲ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲು ಪಾಲಿಕೆಯಲ್ಲಿ ಠರಾವು ಪಾಸು ಮಾಡಲಾಗಿತ್ತು. ಹುಬ್ಬಳ್ಳಿಯ ಅಂಜುಮನ್ ಇಸ್ಲಾಂ ಸಂಸ್ಥೆಯು ಈ ಠರಾವಿಗೆ ತಡೆಯಾಜ್ಞೆ ನೀಡುವಂತೆ ಕೋರಿ ಹೈಕೋರ್ಟ್‌ನಲ್ಲಿ (High Court) ಅರ್ಜಿ ಸಲ್ಲಿಸಿತ್ತು. ಇದನ್ನೂ ಓದಿ: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಸೂತ್ರಧಾರ ದೆಹಲಿಯಲ್ಲಿ ಅರೆಸ್ಟ್
ಇಂದು ಪ್ರಕರಣದ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ಪೀಠ ಅಂಜುಮನ್ ಇಸ್ಲಾಂ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಆ ಮೂಲಕ ಈದ್ಗಾ ಮೈದಾನದಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕೊಡುವುದು ಪಾಲಿಕೆಗೆ ಬಿಟ್ಟಂತಾಗಿದೆ. ಪಾಲಿಕೆಯಲ್ಲಾದ ಠರಾವು ಪ್ರಕಾರ ಮೂರು ದಿನಗಳ ಕಾಲ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲು ಯಾವುದೇ ಅಡೆತಡೆ ಇಲ್ಲದಂತಾಗಿದೆ.
ಇದು ಮುಸ್ಲಿಮರಿಗೆ ಪ್ರಾರ್ಥನೆ ಮಾಡುವುದಕ್ಕೆ ಮಾತ್ರ ಇರುವ ಮೈದಾನ. ಇಲ್ಲಿ ಬೇರೆ ಧರ್ಮದ ಆಚರಣೆಗೆ ಅವಕಾಶ ನೀಡಬಾರದು ಎಂದು ಹುಬ್ಬಳ್ಳಿ ಅಂಜುಮನ್ ಸಂಸ್ಥೆ ವಾದ ಮಾಡಿತ್ತು.
Web Stories